ಬೀದರ್‌ | ಶಾಸಕ ಸ್ಥಾನದಿಂದ ಯತ್ನಾಳ ವಜಾಕ್ಕೆ ಬಸವಪರ ಸಂಘಟನೆಗಳ ಆಗ್ರಹ

Date:

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ಕಾನೂನು ಶಿಸ್ತು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಬೀದರ್‌ನಲ್ಲಿ ರಾಷ್ಟ್ರೀಯ ಬಸವ ದಳ ಹಾಗೂ ಬಸವಪರ ಸಂಘಟನೆಗಳ ಪ್ರಮುಖರು ಪ್ರತಿಭಟನೆ ನಡೆಸಿದರು.

ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ವಿಧಾನಸಭೆ ಸಭಾಪತಿ ಯು.ಟಿ.ಖಾದರ್‌ ಅವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕಾರಿಗೆ ಸಲ್ಲಿಸಿದರು.

ರಾಷ್ಟ್ರೀಯ ಬಸವದಳ ಕೇಂದ್ರ ಸಮಿತಿ ಅಧ್ಯಕ್ಷರಾದ ಡಾ.ಚನ್ನಬಸವಾನಂದ ಸ್ವಾಮೀಜಿ ಮಾತನಾಡಿ, ʼವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಇತ್ತೀಚೆಗೆ ಬೀದರ್‌ನಲ್ಲಿ ವಕ್ಫ್ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಬಸವಣ್ಣನವರ ಲಿಂಗೈಕ್ಯರಾದ ವಿಷಯ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿ ಬಸವಣ್ಣನವರಿಗೆ ಅವಮಾನ ಎಸಗಿದ್ದಾರೆ. ಬಸವಣ್ಣನವರು ಹೊಳೆಗೆ ಹಾರಿ ಪ್ರಾಣಬಿಟ್ಟರು ಎಂಬ ಆಧಾರ ರಹಿತ ಸುಳ್ಳು ಹೇಳಿ, ಬಸವಣ್ಣನವರು ಓರ್ವ ಹೇಡಿಯಾಗಿದ್ದರು ಎಂಬರ್ಥದಲ್ಲಿ ಮಾತನಾಡಿ ಬಸವಣ್ಣನವರಿಗೆ ಅಪಮಾನ ಮಾಡಿರುವುದು ಖಂಡನೀಯʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಲಿಂಗಾಯತ ಎಂದು ಹೇಳಿಕೊಂಡು ಪಕ್ಷದಿಂದ ಟಿಕೆಟ್‌ ಪಡೆಯುತ್ತಾರೆ. ಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿ ಪಡೆಯಲು ಹೋರಾಟ ನಡೆಸುತ್ತಾರೆ. ಚುನಾವಣೆಯಲ್ಲಿ ಗೆದ್ದು ಬಂದ ಬಳಿಕ ಮಂತ್ರಿ ಸ್ಥಾನ ಗಿಟ್ಟಿಸಿಕೊಳ್ಳಲು ಲಿಂಗಾಯತ ಮೀಸಲಾತಿ ಬಳಸಿಕೊಳ್ಳುತ್ತಾರೆ. ಲಿಂಗಾಯತ ಹೆಸರಿನಲ್ಲಿ ಸರ್ಕಾರದ ಸೌಲಭ್ಯ ಪಡೆಯುತ್ತಾರೆ. ಆದರೆ, ಅದೇ ಲಿಂಗಾಯತ ಧರ್ಮದ ಸ್ಥಾಪಕ ಬಸವಣ್ಣನವರ ಕುರಿತು ಅವಹೇಳನಕಾರಿ ಮಾತನಾಡುವುದು ಎಷ್ಟು ಸರಿ. ಅವಹೇಳಕಾರಿ ಮಾತನಾಡುವ ಶಾಸಕ ಬಸನಗೌಡ ಯತ್ನಾಳ ಲಿಂಗಾಯತ ಧರ್ಮದವರೇ ಅಲ್ಲ, ಇನ್ಮುಂದೆ ಅವರನ್ನು ಲಿಂಗಾಯತ ಧರ್ಮದಿಂದ ಬಹಿಷ್ಕಾರ ಹಾಕುತ್ತೇವೆʼ ಎಂದು ಹೇಳಿದರು.

ʼಬಸವಣ್ಣನವರನ್ನು ಅವಮಾನಿಸಿರುವ ಬಸನಗೌಡ ಪಾಟೀಲ್ ಯತ್ನಾಳರಿಗೆ ಇನ್ಮುಂದೆ ಪಕ್ಷ ಹಾಗೂ ಸರ್ಕಾರದಿಂದ ಲಿಂಗಾಯತ ಮೀಸಲಾತಿ ಕೋಟಾದಲ್ಲಿ ಯಾವುದೇ ಸೌಲಭ್ಯಗಳನ್ನು ನೀಡಬಾರದು. ಯತ್ನಾಳ ವಿರುದ್ಧ ಕಾನೂನು ಶಿಸ್ತು ಕ್ರಮ ಕೈಗೊಂಡು ಇವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕುʼ ಎಂದು ಆಗ್ರಹಿಸಿದರು.

ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ ಸಂಚಾಲಕ ಶ್ರೀಕಾಂತ ಸ್ವಾಮಿ ಮಾತನಾಡಿ, ʼಬಸನಗೌಡ ಪಾಟೀಲ್‌ ಯತ್ನಾಳ ಅವರಲ್ಲಿ ಸಮಾನತೆ, ಪ್ರೀತಿ ಇರಬೇಕು. ದೇಶದ ಬಗ್ಗೆ ಗೌರವ ಇರಬೇಕು. ಆದರೆ, ಯತ್ನಾಳ ಬಾಯ್ತೆರೆದರೆ ಬಚ್ಚಲು ಮೋರಿಯಾಗಿದೆ. ಇಂತಹ ನಾಲಾಯಕ್‌ ವ್ಯಕ್ತಿ ಲಿಂಗಾಯತ ಧರ್ಮದಲ್ಲಿ ಹುಟ್ಟಲು ಸಾಧ್ಯವೇ ಇಲ್ಲ. ಕೂಡಲೇ ಯತ್ನಾಳ ಅವರನ್ನು ಲಿಂಗಾಯತ ಧರ್ಮದಿಂದ ಉಚ್ಛಾಟನೆ ಮಾಡಬೇಕುʼ ಎಂದು ಒತ್ತಾಯಿಸಿದರು.

ಲಿಂಗಾಯತ ಮಾಹಮಠದ ಪ್ರಭುದೇವರು ಮಾತನಾಡಿ, ʼಬಸನಗೌಡ ಪಾಟೀಲ್‌ ಅವರು ಜವಾಬ್ದಾರಿ ಸ್ಥಾನದಲ್ಲಿದ್ದರೂ ಸಹ ಏನು ಮಾತನಾಡಬೇಕೆಂಬ ಅರಿವಿಲ್ಲ, ಅವರಿಗೆ ಇತಿಹಾಸದ ಪ್ರಜ್ಞೆ ಇಲ್ಲ. ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಯತ್ನಾಳ ಅವರ ಹೇಳಿಕೆ ಲಿಂಗಾಯತ ಸಮುದಾಯ ತೀವ್ರವಾಗಿ ಖಂಡಿಸುತ್ತದೆ. ಕೂಡಲೇ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಬ್ಬರು ಕರೆ ಕೊಡುವುದು, ಇನ್ನೊಬ್ಬರು ಗೇಲಿ ಮಾಡುವುದು, ಏನಿದು ಮಕ್ಕಳಾಟ?

ಪ್ರತಿಭಟನೆಯಲ್ಲಿ ಬೀದರ್‌ ಬಸವ ಮಂಟಪದ ಸತ್ಯದೇವಿ ಮಾತಾಜಿ, ಬಸವ ಕೇಂದ್ರ ಜಿಲ್ಲಾಧ್ಯಕ್ಷ ಶರಣಪ್ಪಾ ಮಿಠಾರೆ ಹಾಗೂ ಪ್ರಮುಖರಾದ ಶಿವರಾಜ ಪಾಟೀಲ್‌ ಅತಿವಾಳ, ಚನ್ನಬಸವ ಹಂಗರಗಿ, ಓಂಪ್ರಕಾಶ ರೊಟ್ಟೆ, ಅಕ್ಕಮಹಾದೇವಿ ಸೇರಿದಂತೆ ರಾಷ್ಟ್ರೀಯ ಬಸವದಳ , ಲಿಂಗಾಯತ ಧರ್ಮ ಮಹಾಸಭಾ, ಕ್ರಾಂತಿಗಂಗೋತ್ರಿ ಅಕ್ಕನಾಗಲಾಂಬಿಕ ಮಹಿಳಾ ಗಣದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...