ರಾಮನಗರ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪೂರ್ವಭಾವಿ ಸಭೆ: ಪ್ರಗತಿಪರ ಸಂಘಟನೆಗಳಿಂದ ಬಹಿಷ್ಕಾರ

Date:

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪೂರ್ವಭಾವಿ ಸಭೆಯನ್ನು ರಾಮನಗರ ಜಿಲ್ಲಾಧಿಕಾರಿಗಳು ಕರೆದಿದ್ದು, ಪ್ರಗತಿಪರ ಸಂಘಟನೆಗಳು ಆ ಸಭೆಯನ್ನು ಬಹಿಷ್ಕರಿಸಿವೆ.

ಜಿಲ್ಲಾಧಿಕಾರಿ ಕಚೇರಿಯ ಸುತ್ತಮುತ್ತಲಿನಲ್ಲಿ ಪ್ರತಿಭಟನೆ ನಡೆಸದಂತೆ ಹೊರಡಿಸಿರುವ 144 ಸೆಕ್ಷನ್ ಆದೇಶವನ್ನು ಹಿಂಪಡೆಯುವವರೆಗೂ ಜಿಲ್ಲಾಧಿಕಾರಿ ಕರೆಯುವ ಯಾವುದೇ ಸಭೆಯಲ್ಲಿ ಭಾಗವಹಿಸುವುದಿಲ್ಲವೆಂದು ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಲಹೆಗಾರ ಕುಮಾರಸ್ವಾಮಿ ತಿಳಿಸಿದರು.

ಕನಕಪುರದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲಾಡಳಿತ ಮತ್ತು ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸದಂತೆ ಜಿಲ್ಲಾಧಿಕಾರಿಗಳು 144 ಸೆಕ್ಷನ್ ಆದೇಶವನ್ನು ಹೊರಡಿಸಿದ್ದು, ಅದು ಪ್ರಜೆಗಳ ಸಾಂವಿಧಾನಿಕ ಹಕ್ಕನ್ನು ದಮನಗೊಳಿಸುವಂತೆ ಮಾಡಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಜಾಪ್ರಭುತ್ವದ ಬಗ್ಗೆ ಎಲ್ಲ ಸಂಘಟನೆಗಳಿಗೆ ಅಪಾರ ಗೌರವವಿದೆ. ಆದರೆ ಪ್ರಜೆಗಳ ಹಕ್ಕುಗಳನ್ನು ನಿರ್ಲಕ್ಷಿಸುವ ಅಧಿಕಾರಿಗಳು ಅದನ್ನು ಆಚರಿಸಲು ಯೋಗ್ಯರಲ್ಲ. ಪ್ರತಿಭಟನೆಯ ವೇಳೆ ಅಧಿಕಾರಿಗಳು ಸಂಘಟನೆಗಳ ನಾಯಕರ ಬಗ್ಗೆ ತಿರಸ್ಕಾರ ತೋರಿರುವುದರಿಂದ, ಈಗ ಸಂಘಟನೆಗಳ ನಾಯಕರನ್ನು ಸಭೆಗೆ ಆಹ್ವಾನಿಸುವುದು ವ್ಯರ್ಥ ಎಂದು ಹೇಳಿದರು.

ಜಿಲ್ಲಾಧಿಕಾರಿಗಳ ಸರ್ವಾಧಿಕಾರಿ ನಡೆಯ ಎದುರು ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ವಿಷಯದ ಕುರಿತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.

ಈ ಸಭೆಯನ್ನು ಬಹಿಷ್ಕಾರ ಮಾಡಿದ ಸಂಘಟನೆಗಳಲ್ಲಿ ಕರ್ನಾಟಕ ರಾಜ್ಯ ರೈತ ವಿಭಾಗೀಯ ಉಪಾಧ್ಯಕ್ಷರಾದ ಮಲ್ಲಯ್ಯ, ಸಂಚಾಲಕರಾದ ಚೀಲೂರು ಮುನಿರಾಜು, ಜಿಲ್ಲಧ್ಯಕ್ಷರಾದ ತಿಮ್ಮೇಗೌಡ, ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷರಾದ ನೀಲೇಶ್‌ಗೌಡ, ನವ ನಿರ್ಮಾಣ ಸೇನೆಯ ರಾಜ್ಯಾಧ್ಯಕ್ಷ ನರಸಿಂಹಮೂರ್ತಿ, ಕರುನಾಡ ಸೇನೆಯ ರಾಜ್ಯ ಉಪಾಧ್ಯಕ್ಷ ಎಂ. ಜಗದೀಶ್, ಕರವೇ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷರಾದ ರಾಜು, ಕರವೇ ಸ್ವಾಭಿಮಾನಿ ಬಣದ ರಾಜ್ಯ ಉಸ್ತುವಾರಿ ಶಿವುಗೌಡ, ಕೆಆರ್‌ಎಸ್ ಪಕ್ಷದ ಪ್ರಶಾಂತ್ ಹೊಸದುರ್ಗ, ಸ್ವತಂತ್ರ ಕರ್ನಾಟಕ ರಕ್ಷಣಾ ವೇದಿಕೆಯ ಕನ್ನಡ ಭಾಸ್ಕರ್, ಅಂಬೇಡ್ಕರ್ ಸೇನೆಯ ಜಿಲ್ಲಾಧ್ಯಕ್ಷ ಕಿರಣ್ ಸಾಗರ್ , ಮೂಲನಿವಾಸಿ ಕಾವಲು ಪಡೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜ್ ಮೌರ್ಯ, ಹಲವಾರು ಸಂಘಟನೆಗಳ ನಾಯಕರು ಸಭೆಯಿಂದ ದೂರ ಉಳಿಯುವ ಸಮಾನ ಮನಸ್ಕ ನಿಲುವು ತಳೆದಿದ್ದೇವೆಯೆಂದು ಬೆಂಬಲ ಸೂಚಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...