ಬಡ್ತಿ ಪ್ರಕರಣ | 12 ವರ್ಷಗಳ ಬಳಿಕ ಸರ್ಕಾರದ ಅಧಿಸೂಚನೆ ರದ್ದು

Date:

ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌ ಹುದ್ದೆಗಳನ್ನು ಭರ್ತಿ ಮಾಡಲು ಕಿರಿಯ ಎಂಜಿನಿಯರ್‌ಗಳಿಗೆ ಬಡ್ತಿ ನೀಡಿ 2011ರಲ್ಲಿ ಅಂದಿನ ಬಿಜೆಪಿ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಆ ಅಧಿಸೂಚನೆಯನ್ನು ಬರೋಬ್ಬರಿ 12 ವರ್ಷಗಳ ಬಳಿಕ ಹೈಕೋರ್ಟ್‌ ರದ್ದುಗೊಳಿಸಿದೆ.

ಕಿರಿಯ ಎಂಜಿನಿಯರ್‌ಗಳಿಗೆ ಬಡ್ತಿ ನೀಡುವ ಮೂಲಕ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಹುದ್ದೆಗಳಲ್ಲಿ ಶೇ.25ರಷ್ಟು ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿತ್ತು. ಅದಕ್ಕಾಗಿ, ಕರ್ನಾಟಕ ಮುನ್ಸಿಪಲ್ ಕಾರ್ಪೋರೇಷನ್ (ಅಧಿಕಾರಿಗಳ ಮತ್ತು ಸಿಬ್ಬಂದಿ ಸಾಮಾನ್ಯ ನೇಮಕಾತಿ) ಅಧಿನಿಯಮಗಳು-2011ರ ಷೆಡ್ಯೂಲ್-3ಕ್ಕೆ ಮಾರ್ಪಾಡು ಮಾಡಿ 2011ರ ಏಪ್ರಿಲ್‌ 11ರಂದು ಅಧಿಸೂಚನೆಯನ್ನೂ ಹೊರಡಿಸಿತ್ತು. ಆ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಎಂ.ಆರ್ ರಂಗರಾಮು ಸೇರಿದಂತೆ ಏಳು ಮಂದಿ ಸಹಾಯಕ ಎಂಜಿನಿಯರ್‌ಗಳು ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು.

ಅರ್ಜಿಯನ್ನು ನ್ಯಾಯಮೂರ್ತಿ ಇ.ಎಸ್ ಇಂದಿರೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸುತ್ತಿತ್ತು. ಇದೀಗ, 12 ವರ್ಷಗಳ ಬಳಿಕ ಅಧಿಸೂಚನೆಯನ್ನು ರದ್ದುಗೊಳಿಸಿದೆ. ಸರ್ಕಾರ ಹೊರಡಿಸಿದ್ದ ಅಧಿಸೂಚನೆ ಅಸಾಂವಿಧಾನಿಕ ಹಾಗೂ ಸಂವಿಧಾನದ 14 (ಸಮಾನತೆ) ಮತ್ತು 16ನೇ (ಸಮಾನ ಅವಕಾಶ) ವಿಧಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...