ಕಾಂಗ್ರೆಸ್‌ನಿಂದ ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ ಹುನ್ನಾರಕ್ಕೆ ಸರ್ಕಾರದ ವಿರುದ್ಧ ಪ್ರತಿಭಟನೆ: ಮಾಜಿ ಸಿಎಂ ಬೊಮ್ಮಾಯಿ ಎಚ್ಚರಿಕೆ

Date:

  • ಪ್ರಧಾನಿ ರೋಡ್ ಶೋ ವೇಳೆ ಬಿಜೆಪಿ ನಾಯಕರ ಮಾದರಿ ನಡೆ
  • ‘ಕಾಂಗ್ರೆಸ್ ಕಾಲದ ಆರೋಪಗಳ ಬಗ್ಗೆಯೂ ತನಿಖೆ ಮಾಡಲಿ’

‌ಕಾಂಗ್ರೆಸ್‌ ಸರ್ಕಾರದ ಅವಧಿಯ ಆರೋಪಗಳ ಬಗ್ಗೆಯೂ ತನಿಖೆ ಮಾಡಲಿ. ಅದಕ್ಯಾಕೆ ಹಿಂದೇಟು ಹಾಕ್ತಿದ್ದಾರೆ. ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ ಹುನ್ನಾರ ಇದರ ಹಿಂದಿದೆ. ಸೋಮವಾರ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರು ಬಿಜೆಪಿ ನಾಯಕರು ಪ್ರತಿಭಟನೆ ಮಾಡುತ್ತಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಭಾನುವಾರ ನಾಗಸಂದ್ರದ ಶೋಭಾ ಅಪಾರ್ಟ್‌ಮೆಂಟ್ ವೆಲ್‌ಫೇರ್ ಅಸೋಸಿಯೇಷನ್ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಚಂದ್ರಯಾನ 3 ಯಶಸ್ವಿ ಉಡಾವಣೆಗೆ ಕಾರಣರಾದ ವಿಜ್ಞಾನಿಗಳಿಗೆ ಸನ್ಮಾನ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

“ಶೇ. 40 ಕಮಿಷನ್‌ ವಿಚಾರಣೆ ಆಗಲಿ, ತನಿಖೆ ಆಗಲಿ ಇದರಲ್ಲಿ ಆಶ್ಚರ್ಯ ಏನಿಲ್ಲ. ಈಗಾಗಲೇ ಪಿಎಸ್‌ಐ ನೇಮಕಾತಿ ಪ್ರಕರಣ ತನಿಖೆ ನಡೆದು ಚರ್ಜ್‌ಶೀಟ್ ಆಗಿದೆ. ಇವರು ಚಾರ್ಜ್‌ಶೀಟ್‌ನಲ್ಲಿರುವವರ ರಕ್ಷಣೆ ಮಾಡುತ್ತಾರಾ ಅಥವಾ ಇನ್ನೊಂದು ಆಯಾಮದಲ್ಲಿ ತನಿಖೆ ಮಾಡುತ್ತಾರಾ? ಯಾವ ರೀತಿ ತನಿಖೆ ಮಾಡುತ್ತಾರೆ ಅಂತ ನೋಡೋಣ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇನ್ನು ಶೇ. 40 ಆರೋಪದಲ್ಲಿ ನಿರ್ದಿಷ್ಟ ಪ್ರಕರಣ ಇಲ್ಲ. ದಾಖಲೆ ಇಲ್ಲ. ಎರಡು ವರ್ಷವಾದರೂ ಅವರು ದಾಖಲೆ ಕೊಟ್ಟಿಲ್ಲ. ಲೋಕಾಯುಕ್ತ ಎದುರು ಹೆಚ್ಚು ಟೆಂಡರ್ ಕೊಟ್ಟ ಹಲವು ಪ್ರಕರಣಗಳು ಇವೆ. ಇವುಗಳನ್ನು ತನಿಖೆಗೆ ಕೊಡುತ್ತಾರಾ? ಹೊಸ ದೂರು ಕೊಟ್ಟರೆ ಇವರು ಸೇರಿಸಿಕೊಳ್ಳುರಾ? ಭ್ರಷ್ಟಾಚಾರ ಯಾವತ್ತಿದ್ದರೂ ಭ್ರಷ್ಟಾಚಾರವೇ. ಅವರ ಕಾಲದ ಆರೋಪಗಳನ್ನು ತನಿಖೆ ಮಾಡ್ತಾರಾ? ನಮ್ಮ ಕಾಲದ ಆರೋಪಗಳನ್ನು ತನಿಖೆ ಮಾಡಿ ಅಂತ ಮುಕ್ತವಾಗಿ ಹೇಳಿದ್ದೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಆರ್‌ಟಿಇ ದಾಖಲಾತಿ ಕುಸಿತ; 2018ರ ತಿದ್ದುಪಡಿ ರದ್ದತಿ ಅತ್ಯವಶ್ಯ

ನಮ್ಮ ನಾಯಕರಿಂದ ಮಾದರಿಯ ನಡೆ

“ಚಂದ್ರಯಾನ 3 ಯಶಸ್ಸಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಸ್ರೊ ವಿಜ್ಞಾನಿಗಳನ್ನು ಸನ್ಮಾನಿಸಲು ಆಗಮಿಸಿದಾಗ ನಮ್ಮ ಬಿಜೆಪಿ ನಾಯಕರು ಸಾರ್ವಜನಿಕರೊಂದಿಗೆ ನಿಂತು ಮಾದರಿಯ ನಡೆ ಅನುಸರಿಸಿದ್ದಾರೆ. ಪ್ರೋಟೋಕಾಲ್‌ ಪಾಲನೆಯಲ್ಲಿ ಯಾವುದೇ ಗೊಂದಲ ಇರಲಿಲ್ಲ. ನಾವೆಲ್ಲ ಸಾರ್ವಜನಿಕ ಜೀವನಕ್ಕೆ ಬಂದಿರುವುದು ಸೇವೆ ಮಾಡಲು. ಇಸ್ರೋದಂತಹ ಸಂಸ್ಥೆ, ವಿಜ್ಞಾನಿಗಳು ಇಂತಹ ದೊಡ್ಡ ಸಾಧನೆ ಮಾಡಿದಾಗ ನಾವು ಒಂದು ಹೆಜ್ಜೆ ಹಿಂದೆ ಸರಿಯಬೇಕು. ನಾವು ಹಿಂದೆ ಸರಿದು ಅವರಿಗೆ ಮಹತ್ವ ಕೊಡಬೇಕು. ಸೇವಾ ಮನೋಭಾವದಿಂದ ಸಾಮಾನ್ಯ ಜನರ ನಡುವೆ ನಮ ನಾಯಕರು ಇದ್ದು ಆ ಕೆಲಸ ಮಾಡಿದ್ದಾರೆ. ಅದನ್ನು ತಿಳಿದುಕೊಳ್ಳುವ, ಹೊಗಳುವ ಮನಸುಗಳು ಬೇಕಷ್ಟೇ” ಎಂದರು.

“ಇಸ್ರೋ ಅಧ್ಯಕ್ಷರು ಮೂರು ನಿಮಿಷ ಮಾತನಾಡಿ ಸಾಧನೆಗೆ ಕಾರಣರಾದವರಿಗೆ ಹೆಚ್ಚು ಪ್ರಾಶಸ್ತ್ಯ ನೀಡಿದರು. ಇದರರ್ಥ ಇಸ್ರೋ ಅಧ್ಯಕ್ಷರು ಹಿಂದೆ ಸರಿದರು ಅಂತಲ್ಲ. ನಮ್ಮ ನಾಯಕರು ಹಿಂದೆ ಸರಿದು ಜನರನ್ನು ಮುಂದೆ ಬಿಟ್ಟಿದ್ದಾರೆ. ಇಸ್ರೋ ವಿಜ್ಞಾನಿಗಳಿಗೆ ಅಭಿನಂದಿಸಲು ಪ್ರಧಾನಿಯವರು ಬಂದಾಗ ಜನರ ಮಧ್ಯೆ ನಮ್ಮ ನಾಯಕರು ನಿಂತಿದ್ದಾರೆ. ನಮ್ಮ ನಾಯಕರು ಅತ್ಯಂತ ಮಾದರಿಯಾದ ಅನುಕರಣೀಯ ನಡವಳಿಕೆ ತೋರಿದ್ದಾರೆ” ಎಂದು ಸಮರ್ಥಿಸಿಕೊಂಡರು.

“ಇವತ್ತಿನ ದಿನ ಎಲ್ಲರೂ ತಮ್ಮ ಸ್ಥಾನಮಾನಕ್ಕೆ ಪೈಪೋಟಿ ಮಾಡುತ್ತಾರೆ. ನಮ್ಮ ನಾಯಕರು ಅತ್ಯಂತ ಅನುಕರಣನೀಯ ಮಾದರಿ ಅನುಸರಿಸಿದ್ದಾರೆ. ಬಿಜೆಪಿ ನಾಯಕರು ಬೀದಿ ಪಾಲಾದರು, ಬ್ಯಾರಿಕೇಡ್ ಬಂಧಿ ಆದರು ಅಂತ ಕಾಂಗ್ರೆಸ್ ನವರು ಹೇಳಿರುವುದು ಅವರ ಮನಸ್ಥಿತಿ ತೋರಿಸುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...