ಯಾದಗಿರಿ | ಒಂದು ದೇಶ, ಒಂದು ಚುನಾವಣೆ ವಿರೋಧಿಸಿ ಧರಣಿ

Date:

ಒಂದು ದೇಶ ಒಂದು ಚುನಾವಣೆಯ ಜಾರಿಗೆ ತರಲು ನಿರ್ಧರಿಸಿದ ಕೇಂದ್ರ ಸರಕಾರ ತನ್ನ ನಿರ್ಧಾರ ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಧರಣಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಯಾದಗಿರಿ ನಗರದ ಸುಭಾಷ ವೃತ್ತದಲ್ಲಿ ಧರಣಿ ಸತ್ಯಾಗ್ರಹ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ಜಿಲ್ಲಾ ಸಂಚಾಲಕ ಶಿವಪುತ್ರ ಜವಳಿ ಮಾತನಾಡಿ, ʼಒಂದು ದೇಶ ಒಂದು ಚುನಾವಣೆಯ ಇದೊಂದು ಕೇಂದ್ರ ಸರ್ಕಾರದ ಅಜೆಂಡಾದ ಭಾಗ ಕ್ರೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ಒಂದು ದೇಶ ಒಂದು ಚುನಾವಣೆ ಪ್ರಸ್ತಾಪ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಇದನ್ನು ಅನುಷ್ಠಾನ ಮಾಡುವುದಕ್ಕೆ ಸಾಧ್ಯವೇ ಇಲ್ಲʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಆಡಳಿತರೂಡ ಬಿಜೆಪಿಯ ಗುಪ್ತ ಅಜೆಂಡಾವನ್ನು ಒಳಗೊಂಡಿರುವ ಒಂದು ದೇಶ ಒಂದು ಚುನಾವಣೆ ಪ್ರಸ್ತಾಪವನ್ನು ಸಂಸತ್ ಒಳಗೆ ಮತ್ತು ಹೊರಗೆ ದೇಶದ ಜನಾಭಿಪ್ರಾಯವೂ ಒಂದು ದೇಶ ಒಂದು ಚುನಾವಣೆಯ ವ್ಯವಸ್ಥೆ ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನ ಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ ಸಾಮಾರ್ಥ್ಯ ನಮ್ಮ ಈಗ ಇರುವ ಚುನಾವಣೆ ಆಯೋಗಕ್ಕೆ ಇಲ್ಲ. ನಮ್ಮ ಚುನಾವಣಾ ವ್ಯವಸ್ಥೆಯನ್ನು ದುಪ್ಪಟ್ಟು ಪ್ರಮಾಣದಲ್ಲಿ ವಿಸ್ತರಿಸಬೇಕಾಗುತ್ತದೆ. ಇವೆಲ್ಲವೂ ಅವಸರದಿಂದ ಮಾಡುವ ಕೆಲಸ ಅಲ್ಲʼ ಎಂದು ಹೇಳಿದರು.

ಹೊಸ ಚುನಾವಣಾ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗುತ್ತದೆ. ಇದರ ಜೊತೆಗೆ ಸಂವಿಧಾನದಕ್ಕೆ ತಿದ್ದುಪಡಿ ತರಬೇಕಾಗುತ್ತದೆ. ಇವೆಲ್ಲವೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಗೊತ್ತಿದ್ದರೂ ಕೇವಲ ಜನರಲ್ಲಿ ಗೊಂದಲ ಹುಟ್ಟು ಹಾಕಿ ತಮ್ಮ ವೈಫಲ್ಯವನ್ನು ಮುಚ್ಚಿ ಹಾಕಲು ಈ ಕೆಲಸವನ್ನು ಮಾಡಲಾಗಿದೆʼ ಎಂದು ದೂರಿದರು.

ಸಂಚಾಲಕ ಚಂದಪ್ಪ ಮುನಿಯಪ್ಪನೊರ ಮಾತನಾಡಿ, ʼಶಾಸಕ ಮುನ್ನಿರತ್ನ ಜಾತಿ ನಿಂದನೆ ಜೀವ ಬೆದರಿಕೆ, ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಬಂಧನದಲ್ಲಿದ್ದು, ಅವರನ್ನು ಕಠಿಣ ಕಾನೂನು ಶಿಕ್ಷೆಗೆ ಒಳಪಡಿಸಬೇಕುʼ ಎಂದು ಆಗ್ರಹಿಸಿದರು.

ʼಒಕ್ಕಲಿಗ ಮತ್ತು ದಲಿತ ಸಮುದಾಯಗಳನ್ನು ಅವಹೇಳನ ಮಾಡುವ ರೀತಿಯಲ್ಲಿ ಮತ್ತು ಮಹಿಳೆ ಮೇಲೆ ಅತ್ಯಾಚಾರ ಕೇಸನ್ನು ಎದುರಿಸುತ್ತಿರುವ ಮುನಿರತ್ನ ಈಗ ಜೈಲಿನಲ್ಲಿದ್ದಾರೆ. ಈ ಆರೋಪಗಳು ತೀರಾ ಗಂಭೀರ ಸ್ವರೂಪದ್ದಾಗಿವೆ. ಇದನ್ನೆಲ್ಲಾ ತನಿಖೆ ಮಾಡುವುಕ್ಕೆ ವಿಶೇಷ ತನಿಖಾ ತಂಡ ರಚಿಸಿರುವುದು ಸರಕಾರದ ನಿಧಾರ ಸಮಿತಿಯು ಸ್ವಾಗತಿಸುತ್ತದೆ. ಎಸ್‌ಐಟಿ ಕಾಲಬದ್ಧವಾಗಿ ಹಾಕಿಕೊಂಡು ತನಿಖೆ ನಡೆಸಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮುಳುವಾದ ವಾಟ್ಸಪ್‌ ಸಂದೇಶ: ಮೇಲ್ವಿಚಾರಕಿಯ ನಿಂದನೆಗೆ ಮೂರ್ಛೆ ಹೋದ ಅಂಗನವಾಡಿ ಕಾರ್ಯಕರ್ತೆ!

ಪ್ರತಿಭಟನೆಯಲ್ಲಿ ಪ್ರಮುಖರಾದ ಶಿವಲಿಂಗ ಹಸನಾಪೂರ, ಭೀಮಣ್ಣ, ತಿಪ್ಪಣ್ಣ ಶೆಳ್ಳಗಿ, ಶೇಖರ ಮಂಗಳೂರು, ವೆಂಕಟೇಶ ದೇವಾಪೂರ, ರಾಜು ಬಡಿಗೇರ, ಚಿನ್ನಪ್ಪ ದೇವಾಪೂರ, ಖಾಜಾ ಅಜಮೀರ, ಎಂ. ಪಟೇಲ್‌, ಮರೆಪ್ಪ ಕ್ರಾಂತಿ, ಸಂತೋಷ ಗುಂಡಳ್ಳಿ, ಶರಬಣ್ಣ ದೋರನಹಳ್ಳಿ, ನಾಗರಾಜ ಕೊಡಮನಳ್ಳಿ, ಶ್ರೀಮಂತ ಸಿಂಗನಹಳ್ಳಿ, ಶರಣಪ್ಪ ಕೋಟಿ ಖಜಾಂಚಿ, ತಾಯಪ್ಪ ಬಂಡಾರಿ, ಪುರಷೋತ್ತಮ, ಚಂದ್ರು ಬುದ್ರನಗರ, ರಂಗಸ್ವಾಮಿ ದಾಸರಿ, ಬಾಲರಾಜ ಖಾನಪೂರ, ದೊಡ್ಡಪ್ಪ ಕಾಡಮಗೇರಿ, ಚಿನ್ನದಸ್ಸು ಗುರಸುಣಗಿ, ಹಣಮಂತ ಗುರುಸಣಗಿ, ಶರಣಪ್ಪ ಮಳ್ಳಳ್ಳಿ, ಚಂದ್ರ ಬಲಶೆಟ್ಟಿಹಾಳ, ಚೌಡಪ್ಪ ಯತ್ನಹಳ್ಳಿ, ಮಲ್ಲಿಕಾರ್ಜುನ ಹುರಸಗುಂಡಗಿ, ಶರಣಪ್ಪ ಮಾಳೂರ, ಯಲ್ಲಪ್ಪ ಗುಂಡಲಗೇರಿ, ಪರಮಣ್ಣ ಚಿಲವಾದಿ, ಸಂಗಮೇಶ ಮಾಳೂರು, ಬಲಭೀಮ ದೇವನಹಳ್ಳಿ, ವಾಸು ಕೋಗಿಲ್‌ಕರ್, ಸುಭಾಷ ಹುರಸಗುಂಡಗಿ, ಸಂದೀಪ ಯರಗೋಳ, ಮಲ್ಲಪ್ಪ ತಡಿಬಿಡಿ, ಭೀಮಾಶಂಕರ ಗುಂಡಳ್ಳಿ, ಜೈಭೀಮ ಕೊಡಮನಹಳ್ಳಿ, ಸಿದ್ದಪ್ಪ ಕೊಡಮನಹಳ್ಳಿ, ನಾಗರಾಜ ರಸ್ತಾಪುರ್, ಬಸಲಿಂಗ ಹಾಲಭಾವಿ, ದೇವಪ್ಪ ಕೊಂಬಿನ್ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...