ವಿಜಯಪುರ | ವಿದ್ಯುತ್‌ ದರ ಏರಿಕೆ ವಿರೋಧಿಸಿ ಕೈಗಳಿಗೆ ಬೇಡಿ ಹಾಕಿಕೊಂಡು ಪ್ರತಿಭಟನೆ

Date:

ವಿದ್ಯುತ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಈ ವೇಳೆ ಕಾರ್ಯಕರ್ತರೊಬ್ಬರು ಕೈಗಳಿಗೆ ಬೇಡಿ ಹಾಕಿಕೊಂಡು ಭಾಗವಹಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ವಿಜಯಪುರ ನಗರದ ಸಿದ್ಧೇಶ್ವರ ದೇವಸ್ಥಾನದ ಎದುರು ನಗರ ಬಿಜೆಪಿ ಘಟಕದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಜನತೆಗೆ ಸುಳ್ಳು ಗ್ಯಾರಂಟಿ ಭರವಸೆ ನೀಡಿ, ಇದೀಗ ವಿದ್ಯುತ್ ದರ ಏರಿಕೆ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜನರಿಗೆ ಐದು ಗ್ಯಾರಂಟಿಗಳನ್ನು ನೀಡಿ, ಷರತ್ತು ವಿಧಿಸಿ ಮೋಸ ಮಾಡುತ್ತಿದೆ ಎಂದು ಆರೋಪಿಸಿ ಸರ್ಕಾರದ ಘೋಷಣೆ ಕೂಗಿದರು. ತಕ್ಷಣವೇ ವಿದ್ಯುತ್ ದರ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಎರಡೂ ಕೈಗಳಿಗೆ ಬೇಡಿ ಹಾಕಿಕೊಂಡು ಬಂದಿದ್ದ ಬಿಜೆಪಿ ಕಾರ್ಯಕರ್ತ ಉಮೇಶ ಕಾರಜೋಳ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, “ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕರು ‘ಉಚಿತ, ಖಚಿತ, ನಿಶ್ಚಿತ’ ಎಂದು ಭಾಷಣ ಮಾಡಿದ್ದರು. ಹಾಗಂದರೆ ಏನು ಎಂದು ಜನ ಅರ್ಥಮಾಡಿಕೊಂಡಿರಲಿಲ್ಲ ಅನಿಸುತ್ತದೆ. ಉಚಿತ ಅಂದರೆ; ನಿಮ್ಮ ಹಣೆ ಮೇಲೆ ಮೂರು ನಾಮ. ಖಚಿತ ಎಂದರೆ ನಿಮ್ಮ ಮೇಲೆ ಸಾಲ. ಹಿಂದು ಪರ ಯಾರೇ ಮಾತನಾಡಿದರೂ ಅವರಿಗೆ ಜೈಲು ವಾಸ ನಿಶ್ಚಿತ ಎಂದು ಅರ್ಥ. ಇದು ಈಗ ಜನರಿಗೆ ಅರ್ಥವಾಗಲು ಶುರುವಾಗಿದೆ. ಅದಕ್ಕೆ ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಸರ್ಕಾರಿ ಶಾಲೆಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಆಗ್ರಹ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...