ಲಿಂಗಸುಗೂರು | ಕೃಷಿ ಉಪ ನಿರ್ದೇಶಕರ ಕಚೇರಿ ಸಿಂಧನೂರಿಗೆ ಸ್ಥಳಾಂತರ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ

Date:

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕೃಷಿ ಉಪ ನಿರ್ದೇಶಕರ ಕಚೇರಿಯನ್ನು ಸಿಂಧನೂರಿಗೆ ಸ್ಥಳಾಂತರಕ್ಕೆ ಸರ್ಕಾರದ ಅಧೀನ ಕಾರ್ಯದರ್ಶಿಯವರು ಹೊರಡಿಸಿರುವ ಆದೇಶವನ್ನು ತಕ್ಷಣವೇ ರದ್ದುಪಡಿಸಬೇಕೆಂದು ಲಿಂಗಸೂಗೂರು ತಾಲೂಕು ಅಭಿವೃದ್ಧಿ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಸಮಿತಿಯ ವತಿಯಿಂದ ಸಹಾಯಕ ಆಯುಕ್ತರ ಮೂಲಕ ಕೃಷಿ ಸಚಿವರಿಗೆ ಮನವಿ ಸಲ್ಲಿಸಿದರು. ಈಗಾಗಲೇ ತಾಲೂಕಿನ ಮಂಜೂರಾತಿ ಹಂತದಲ್ಲಿದ್ದ ಪ್ರಾದೇಶಿಕ ಸಾರಿಗೆ ಕಚೇರಿ ,ಕೆಪಿಟಿಸಿಎಲ್‌ ಕಚೇರಿ ಹಾಗೂ ಜಿಲ್ಲಾ ನ್ಯಾಯಾಲಯ ಸೇರಿ ತಾಲೂಕಿನ ಒಂದೊಂದಾಗಿ ಕಚೇರಿಗಳು ಸ್ಥಳಾಂತರವಾಗುತ್ತಿವೆ,ತಾಲೂಕಿನ ಅಭಿವೃದ್ಧಿ ಶೂನ್ಯ ರಾಜಕಾರಣಿಗಳಿಂದಾಗಿ ಕ್ಷೇತ್ರ ಕುಂಠಿತಗೊಂಡಿದೆ ಎಂದು ಆರೋಪಿಸಿದರು.

ಬ್ರಿಟೀಷರ ಆಡಳಿತದಲ್ಲಿ ಲಿಂಗಸುಗೂರು ಜಿಲ್ಲಾ ಕೇಂದ್ರವಾಗಿತ್ತು. ಇಲ್ಲಿನ ಕಟ್ಟಡಗಳು ಇತಿಹಾಸ ಪುಟಗಳಲ್ಲಿ ಬರೆಯಲಾಗಿದೆ. ಸುತ್ತಮುತ್ತ ಹಳ್ಳಿಗಳಿಗೆ ಕೇಂದ್ರ ಬಿಂದುವಾಗಿರುವುದರಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಕಚೇರಿಗಳಿಗೆ ದಿನನಿತ್ಯ ಅಲೆದಾಡುತ್ತಾರೆ. ಕೆಲವು ಕಚೇರಿಗಳು ಸ್ಥಳಾಂತರವಾಗಿರುವುದರಿಂದ ಜನರು ತುಂಬಾ ಸಮಸ್ಯೆ ಎದುರಿಸುತ್ತಿದ್ದಾರೆ. ಇಂತಹ ನಿರ್ಲಕ್ಷ್ಯ ರಾಜಕಾರಣಿಗಳಿದ್ದರೆ ಇಡೀ ತಾಲೂಕು ಸಿಂಧನೂರಿಗೆ ಸ್ಥಳಾಂತರವಾಗದಿರದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಿಂಗಸುಗೂರು ತಾಲೂಕು ಅಭಿವೃದ್ಧಿ ಮಾಡುತ್ತೇವೆಂದು ಕಳೆದ 15 ವರ್ಷಗಳಿಂದ ಹಾಲಿ ಮತ್ತು ಮಾಜಿ ಶಾಸಕರು ಹಾಗೂ ಸ್ಥಳೀಯರಾದ ಹಾಲಿ ವಿಧಾನ ಪರಿಷತ್ತು ಸದಸ್ಯರು ಮಾತ್ರ ತಮ್ಮ ಸ್ವಅಭಿವೃದ್ಧಿ ಮಾಡಿಕೊಳ್ಳುತ್ತಿದ್ದಾರೆ. ವಿನಹ ಕ್ಷೇತ್ರದ ಅಭಿವೃದ್ಧಿಯ ಕಡೆ ಎಳ್ಳಷ್ಟು ಗಮನ ಕೊಟ್ಟಿಲ್ಲ ಎಂದು ದೂರಿದರು.

ಸ್ಥಳೀಯರಾದ ಮಾಜಿ ಸಚಿವರು ಹಾಗೂ ಸಂಸದರು ಈ ಕ್ಷೇತ್ರದಿಂದಲೇ ಸಚಿವರು ಸಂಸದರಾಗಿದ್ದು, ಇವರ ಇಚ್ಚಾಶಕ್ತಿ ಕೊರತೆಯಿಂದ ಲಿಂಗಸುಗೂರಿನ ಒಂದೊಂದೇ ಕಚೇರಿಗಳು ಸ್ಥಳಾಂತರವಾಗುತ್ತಿವೆ. ಈ ವಿಷಯಕ್ಕೆ ಸಂಬಂಧವಿಲ್ಲದಂತೆ, ಸ್ಥಳೀಯರಲ್ಲದಂತೆ ಮೌನವಾಗಿ ಇದ್ದಾರೆ ಎಂದು ಪ್ರತಿಭಟನಾಕಾರರು ಬೇಸರ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಗದಗ | ಕಾಣೆಯಾಗಿದ್ದ ಮಹಿಳೆ ಬಾವಿಯಲ್ಲಿ ಪತ್ತೆ: ತಡವಾಗಿ ಬೆಳಕಿಗೆ ಬಂದ ಘಟನೆ

ಒಂದು ವಾರದಲ್ಲಿ ಕೃಷಿ ನಿರ್ದೇಶಕರ ಕಚೇರಿ-2 ಸ್ಥಳಾಂತರ ಆದೇಶವನ್ನು ರದ್ದುಪಡಿಸದಿದ್ದರೆ ಮುಂದಿನ ದಿನಗಳಲ್ಲಿ ಅನಿರ್ದಿಷ್ಷ ಹೋರಾಟ ಮಾಡಲಾಗುವುದು ಎಚ್ಚರಿಕೆ ನೀಡಿದರು.

ವಿವಿಧ ಸಂಘಟನೆಗಳ ಮುಖಂಡರಾದ ಶಿವಪುತ್ರಗೌಡ ನಂದಿಹಾಳ, ವಿಜಯ ಪೋಳ್, ಅಮರೇಶ ಗೋಸ್ಲೆ, ಬಾಬಾಜಾನಿ, ಜಿಲಾನಿ ಪಾಷಾ, ಹೆಚ್.ಬಿ.ಬಡಿಗೇರ, ಮಲ್ಲನಗೌಡ ಪಾಟೀಲ್ ಹನುಮಂತ ನಾಯಕ, ಸೈಯದ್ ಯೂನಿಸ್ ಮುಫ್ತಿ, ಎಂ.ಜಿಲಾನಿ ಹನುಮಂತ ಸೇರಿ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...