ಕಲಬುರಗಿ | ಮಲ್ಲಾಬಾದ ಏತ ನೀರಾವರಿ ಕಾಮಗಾರಿ ಪುನರಾರಂಭಕ್ಕೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ

Date:

ಮಲ್ಲಾಬಾದ ಏತ ನೀರಾವರಿ ಕಾಮಗಾರಿ ಕೂಡಲೇ ಪುನರಾರಂಭಿಸಬೇಕೆಂದು ಆಗ್ರಹಿಸಿ ಮಲ್ಲಬಾದ ಏತ ನೀರಾವರಿ ರೈತ ಹೋರಾಟ ಸಮಿತಿ ನೇತ್ರತ್ವದಲ್ಲಿ ನೂರಾರು ರೈತರು, ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕಲಬುರಗಿ- ರಾಯಚೂರು ರಾಷ್ಟ್ರೀಯ ಹೆದ್ದಾರಿ ತಡೆದು ಧರಣಿ ನಡೆಸಿದರು.

ಜೇವರ್ಗಿ ತಾಲ್ಲೂಕಿನ ಯಳವಾರ ವೃತದಿಂದ ಎತ್ತಿನ ಬಂಡಿಗಳ ಮೆರವಣಿಗೆ ಮೂಲಕ ಚಿಗರಳಿ ಕ್ರಾಸ್‌ ಬಳಿ ಬಂದ ಪ್ರತಿಭಟನಾಕಾರರು ಸುಮಾರು ನಾಲ್ಕು ಗಂಟೆಗೂ ಅಧಿಕ ಕಾಲ ರಸ್ತೆ ಬಂದ್‌ ಮಾಡಿ ಧರಣಿ ನಡೆಸಿ ಕೆಕೆಆರ್‌ಡಿಬಿ ಅಧ್ಯಕ್ಷರೂ ಆದ ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಲ್ಲಬಾದ ಏತ ನೀರಾವರಿ ರೈತ ಹೋರಾಟ ಸಮಿತಿಯ ಸಂಚಾಲಕ ಮಹೇಶಕುಮಾರ್ ರಾಠೋಡ್ ಮಾತನಾಡಿ, ʼನಾಲ್ಕು ದಶಕದ ಹೋರಾಟದ ಫಲವಾಗಿ ಆರಂಭಗೊಂಡಿರುವ ಮಲ್ಲಾಬಾದ ಏತ ನೀರಾವರಿ ಯೋಜನೆಯಿಂದ ಸುತ್ತಲಿನ 60ಕ್ಕೂ ಹೆಚ್ಚಿನ ಗ್ರಾಮಗಳ ರೈತರಿಗೆ ಅನುಕೂಲವಾಗಲಿದೆ. ಆದರೆ ಕಾಮಗಾರಿ ಸ್ಥಗಿತಗೊಂಡಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಯೋಜನೆಗೆ 330.40 ಕೋಟಿ ರೂ. ಕಾಮಗಾರಿಗೆ ಅನುಮೋದನೆ ಕೊಡಲಾಗಿದೆ, ಇದೀಗ ಅನುಮೋದನೆ ಕೊಟ್ಟು ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸುವಂತೆ ತೀರ್ಮಾನ ಕೈಗೊಂಡಿದ್ದರೂ ಕಾಂಗ್ರೆಸ್ ನೇತ್ರತ್ವದ ಸರ್ಕಾರ ಅಧಿಕಾರಕ್ಕೇರಿದ ಮೇಲೆ ಕೆಲಸ ಪ್ರಾರಂಭಿಸದೇ ಇಲಾಖೆಯ ಸುತ್ತೋಲೆಯಿಂದ ಅದನ್ನು ಸ್ಥಗಿತಗೊಳಿಸಲಾಗಿದೆʼ ಎಂದು ಕಿಡಿಕಾರಿದರು.

WhatsApp Image 2024 12 16 at 7.02.20 PM

ಸರಕಾರಕ್ಕೆ ಮತ್ತು ಶಾಸಕರಿಗೆ ಹಲವು ಬಾರಿ ಮನವಿ ಮಾಡಿ ಕೆಲಸ ಪ್ರಾರಂಭಿಸಲು ಒತ್ತಾಯಿಸಿದ್ದೇವೆ, ಈವರೆಗೆ ಅವರು ಕಿವಿಗುಡದೇ ಸರಕಾರದ ನಿರ್ಲಕ್ಷತನದಿಂದಾಗಿ ಕಾಮಗಾರಿ ಪ್ರಾರಂಭಿಸದೇ ಕಾಲಹರಣ ಮಾಡಿ ಜನ ವಿರೋಧಿ ನಡೆ ಅನುಸರಿಸುತ್ತಿದ್ದಾರೆ ಎಂದು ಮಹಾಂತಗೌಡ ಪಾಟೀಲ ನಂದಿಹಳ್ಳಿ ಆಕ್ರೋಶ ವ್ಯಕ್ತಪಡಿಸಿದರು.

ʼಕಲ್ಯಾಣ ಕರ್ನಾಟಕ ಭಾಗದ ಹಿಂದುಳಿದ ತಾಲ್ಲೂಕಿನ ಸುಮಾರು 68 ಗ್ರಾಮಗಳ ಅಂದಾಜು 1 ಲಕ್ಷ ಎಕರೆ ಪ್ರದೇಶಕ್ಕೆ ಯೋಜನೆಯಿಂದ ನೀರಾವರಿ ಸೌಲಭ್ಯ ದೊರಕಲಿದೆ. ಹೀಗಾಗಿ ಕೂಡಲೇ ಟೆಂಡರ್‌ ಕರೆದು ಕಾಮಗಾರಿ ಪುನಾರಂಭಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಜಿಲ್ಲೆಯಲ್ಲಿ ಮೂರು ವರ್ಷಗಳಲ್ಲಿ 141 ಕೊಲೆ : ಗೃಹ ಸಚಿವ ಜಿ.ಪರಮೇಶ್ವರ

ಪ್ರತಿಭಟನೆಯಲ್ಲಿ ಪ್ರಮುಖರಾದ ಶಿವರಾಜ್ ಪಾಟೀಲ್ ರದ್ದೇವಾಡಗಿ, ಶೋಭಾ ಬಾಣಿ, ಬಾಬು ಪಟೇಲ್, ಗುರುನಾಥ ಸಾಹು ರಾಜವಾಳ, ಮಲ್ಲಣಗೌಡ ಪಾಟಿಲ ಕಲ್ಲೂರ, ರಾಜಾ ಪಟೇಲ್ ಯಾಳವಾರ, ಶಾಂತಯ್ಯ ಗುತ್ತೇದಾರ, ಮಲ್ಲಿಕಾರ್ಜುನ ಕೆಲ್ಲೂರ, ಇಬ್ರಾಹಿಂ ಪಟೇಲ್ ಯಾಳವಾರ, ಮಹಮ್ಮದ ಚೌದರಿ, ಬಿ.ಹೆಚ್.ಮಾಲೀಪಾಟಲ್, ದಸ್ತಗಿರ್ ಸಾಬ್, ಗಿರೀಶ್ ತುಂಬಗಿ, ದೇವೇಂದ್ರ ಚಿಗರಳ್ಳಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ರೈತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...