ಕಲಬುರಗಿ | ಹದಗೆಟ್ಟ ರಸ್ತೆ : ಕೊಳಚೆ ನೀರಿನಲ್ಲಿ ಭತ್ತದ ಸಸಿ ನೆಟ್ಟು ಪ್ರತಿಭಟನೆ

Date:

ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಹದಗೆಟ್ಟ ರಸ್ತೆ ದುರಸ್ತಿಗೊಳಿಸದ ಅಧಿಕಾರಿಗಳ ಕ್ರಮ ಖಂಡಿಸಿ ಗ್ರಾಮಸ್ಥರು ರಸ್ತೆ ಮಧ್ಯದಲ್ಲಿ ನಿಂತಿದ್ದ ಕೊಳಚೆ ನೀರಿನಲ್ಲಿ ಸಿಸಿ ನೆಟ್ಟು ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯಾರ್ಥಿ ಸಂಘಟನೆ ಎಐಡಿಎಸ್‌ಒ ಹಾಗೂ ರೈತ ಸಂಘಟನೆ ಎಐಕೆಕೆಎಂಎಸ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗ್ರಾಮಸ್ಥರು ಭಾಗವಹಿಸಿ ರಸ್ತೆಯ ಎಲ್ಲಾ ತಗ್ಗುಗಳಲ್ಲಿ ಭತ್ತದ ಸಸಿ ನಾಟಿ ಮಾಡಿದರು.

ಬಸ್ ನಿಲ್ದಾಣದಿಂದ  ಗ್ರಾಮ ಪಂಚಾಯಿತಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಸಂಘಟಕರು ಜನಪ್ರತಿನಿಧಿಗಳ, ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂರು ವರ್ಷಗಳಿಂದ ರಸ್ತೆ ಹಾಳಾಗಿದ್ದು ಕೊಳಚೆ ನೀರಲ್ಲಿಯೇ ಅಡ್ಡಾಡುತ್ತಿದ್ದೇವೆ. ಕೂಡಲೇ ದೊಡ್ಡ ಡಿವೈಡರ್ ಸಿಸಿ ರಸ್ತೆ ಹಾಗೂ ಎರಡು ಬದಿ ಚರಂಡಿ ನಿರ್ಮಿಸಬೇಕು ಪ್ರತಿಭಟನಾಕಾರರು ಆಗ್ರಹಿಸಿದರು.

ಎಐಕೆಕೆಎಂಎಸ್ ರೈತ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಮಹೇಶ್ ಎಸ್.ಬಿ. ಮಾತನಾಡಿ, ʼಕಳೆದ ಮೂರು ವರ್ಷಗಳಿಂದ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದೆ. ಇದರಿಂದ ಗ್ರಾಮಸ್ಥರು ಓಡಾಡಲು ಪರದಾಡುತ್ತಿದ್ದಾರೆ. ಸುಮಾರು 1 ಕಿ.ಮೀ ರಸ್ತೆ ತುಂಬಾ ಗುಂಡಿಗಳೇ ತುಂಬಿಕೊಂಡಿವೆ. ರಸ್ತೆ ಮಧ್ಯದ ತಗ್ಗುಗಳಲ್ಲಿ ನೀರು ಸಂಗ್ರಹವಾದ ಕಾರಣ ರೋಗ ಹರಡುವ ಭೀತಿ ಕಾಡುತ್ತಿದೆ. ಆದರೂ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸ್ಪಂದಿಸುತ್ತಿಲ್ಲʼ ಎಂದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ಪಿಡಬ್ಲ್ಯೂಡಿ ಎಇಇ ಮಹಮದ್ ಸಲಿಂ ಮಾತನಾಡಿ, ʼತಕ್ಷಣ ರಸ್ತೆ ದುರಸ್ತಿ ನಡೆಸಲಾಗುವುದು ಹಾಗೂ ಹೊಸ ರಸ್ತೆ ನಿರ್ಮಾಣಕ್ಕೆ ಮತ್ತೊಮ್ಮೆ ಮನವಿ ಸಲ್ಲಿಸಲಾಗುವುದುʼ ಎಂದು ಭರವಸೆ ನೀಡಿದರು.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿಜಕ್ಕೂ ಮೋದಿಯವರು ಕುರ್ಚಿ ಉಳಿಸಿಕೊಳ್ಳಲು ಮಂಡಿಸಿದ ಬಜೆಟ್ ಇದು

ಪ್ರತಿಭಟನೆಯಲ್ಲಿ ಎಐಡಿಎಸ್‌ಒ ವಾಡಿ ಸಮಿತಿಯ ಅಧ್ಯಕ್ಷ ವೆಂಕಟೇಶ್ ದೇವದುರ್ಗ, ಎಐಕೆಕೆಎಂಎಸ್ ರೈತ ಸಂಘಟನೆ ಜಿಲ್ಲಾ ಉಪಾಧ್ಯಕ್ಷ ಗುಂಡಣ್ಣ ಎಂ.ಕೆ, ತಾಲೂಕು ಅಧ್ಯಕ್ಷ ಮಲ್ಲಣ್ಣ ದಂಡವ, ಮುಖಂಡರಾದ ಶಾಂತಕುಮಾರ್ ಎಣ್ಣಿ ಗ್ರಾ,ಪಂ. ಮಾಜಿ ಅಧ್ಯಕ್ಷ ಸಾಬಣ್ಣ ಆನೆಮಿ, ಶರಣು ಹೇರೂರು, ಗೌತಮ್ ಪರ್ತುರಕರ್ ಚಿನ್ ಸಾವಣ್ಣ‌, ಮೌನಪ್ಪ ಕುಂಬಾರ್‌ ಸಾಬಣ್ಣ, ಅಂಬರೀಷ್ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...