ಮೈಸೂರು | ಅಪ್ರಾಪ್ತ ಬಾಲಕಿ ಮೇಲಾದ ಕೃತ್ಯ ಖಂಡಿಸಿ ಪ್ರತಿಭಟನೆ

Date:

ಗುಲ್ಬರ್ಗ ಮೂಲದ ಅಲೆಮಾರಿ ಕುಟುಂಬಗಳು ದಸರಾದಲ್ಲಿ ಹೊಟ್ಟೆಪಾಡಿಗಾಗಿ ಬಲೂನ್ ಮಾರಲು ಬಂದಿದ್ದರು. ಇದೇ ಸಂದರ್ಭದಲ್ಲಿ ಅಪ್ರಾಪ್ತ ಬಾಲಕಿಯ ಮೇಲಾದ ಹೀನ ಕೃತ್ಯ ಖಂಡಿಸಿ ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಎಐಎಂಎಸ್ಎಸ್ ಮತ್ತು ಎಐಡಿಎಸ್ಓ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಎಐಎಂಎಸ್ಎಸ್ ರಾಜ್ಯ ಉಪಾಧ್ಯಕ್ಷೆ ಜಿ.ಎಸ್. ಸೀಮಾ ಮಾತನಾಡಿ, ಒಂಬತ್ತು ವರ್ಷದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ ಭೀಕರವಾಗಿ ಹತ್ಯೆಗೈಯ್ಯಲಾಗಿರುವ ಹೃದಯವಿದ್ರಾವಕ ಘಟನೆಯಿಂದಾಗಿ ಸಾಂಸ್ಕೃತಿಕ ನಗರಿಯ ಜನತೆಯಲ್ಲಿ ಆಘಾತ ಉಂಟಾಗಿದೆ. ದಸರಾದಲ್ಲಿ ತಮ್ಮ ಜೀವನೋಪಾಯಕ್ಕಾಗಿ ದುಡಿಯಲು ಬಂದ ಅಲೆಮಾರಿ ಸಮುದಾಯ ತಮ್ಮ ಮಗಳ ದುರಂತ ಅಂತ್ಯವನ್ನು ಕಾಣುವಂತಾಗಿದೆ. ಇಂತಹ ಘಟನೆಗಳು ಮತ್ತೆಂದೂ ಮರುಕಳಿಸದಂತೆ ಸರ್ಕಾರ ತಕ್ಷಣ ಎಲ್ಲಾ ರೀತಿಯ ಕ್ರಮ ವಹಿಸಬೇಕು. ಈ ಕುರಿತು ಸಮಗ್ರ ತನಿಖೆಯನ್ನು ನಡೆಸಿ ಅಪರಾಧಿಗೆ ಮರಣದಂಡನೆ ವಿಧಿಸಬೇಕು. ಮೃತ ಬಾಲಕಿಯ ಪೋಷಕರಿಗೆ ಸೂಕ್ತ ಪರಿಹಾರವನ್ನು ನೀಡಬೇಕು. ಘಟನೆಯ ನ್ಯಾಯ ನಿರ್ಣಯದಲ್ಲಿ ಯಾವುದೇ ರೀತಿಯ ವಿಳಂಬವಾಗಬಾರದು. ಹಾಗೆಯೇ, ಸಮಾಜದಲ್ಲಿ ವಿಷಮಯವಾಗಿ ಹರಡುತ್ತಿರುವ ಅಶ್ಲೀಲ ಸಿನಿಮಾ, ಸಾಹಿತ್ಯ, ಕುಡಿತ, ಜೂಜು, ಮಾದಕ ವಸ್ತು ಸೇವನೆಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿದರು.

ನಿತಿನ್ ಮಾತನಾಡಿ, ಶಿಕ್ಷಣ ಪಡೆಯಬೇಕಾದ ಬಾಲಕಿ, ಜೀವನೋಪಾಯಕ್ಕಾಗಿ ಮೈಸೂರು ದಸರಾಗೆ ಬಂದು ಪೈಶಾಚಿಕ ಕೃತ್ಯಕ್ಕೆ ಒಳಗಾಗಿ ಅಂತ್ಯ ಕಂಡಿದ್ದು ಅತ್ಯಂತ ನೋವಿನ ಸಂಗತಿ. ಇಂದು ಸಮಾಜದಲ್ಲಿ ಭಗತ್ ಸಿಂಗ್, ನೇತಾಜಿ ಅಂತವರ ಆದರ್ಶ ಮೌಲ್ಯಗಳು ಇಲ್ಲದಿರುವುದು ಇಂತಹ ಘಟನೆಗಳು ಹೆಚ್ಚುವುದಕ್ಕೆ ಕಾರಣವಾಗಿದೆ. ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಮೈಗೂಡಿಸಿಕೊಂಡು, ಆರೋಗ್ಯಕರ ಸಮಾಜ ಕಟ್ಟುವ ಜವಾಬ್ದಾರಿ ವಿದ್ಯಾರ್ಥಿ , ಯುವ ಜನರ ಮೇಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಶಾಸಕ ಜಿ ಡಿ ಹರೀಶ್ ಗೌಡ ಅವಿರೋಧ ಆಯ್ಕೆ

ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಆಸಿಯಾ ಬೇಗಂ, ಸಾಮಾಜಿಕ ಹೋರಾಟಗಾರ ಉಗ್ರ ನರಸಿಂಹೇ ಗೌಡ, ಹಿರಿಯ ವಕೀಲ ಬಾಬು ರಾಜನ್, ಸಮತಾ ವೇದಿಕೆಯ ರತಿ ರಾವ್, ರೈತ ಸಂಘದ ಪಿ. ಮರಂಕಯ್ಯ, ನಾಗನಹಳ್ಳಿ ಚಂದ್ರಶೇಖರ್ ಸೇರಿದಂತೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...