ಕಲಬುರಗಿ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಅಂಬೇಡ್ಕರ್‌ ಸೇವಾ ಸಮಿತಿ ಮನವಿ

Date:

ಬಡ ಕೂಲಿಕಾರ್ಮಿಕರಿಗೆ ಶಾಸನಬದ್ಧ ಸವಲತ್ತುಗಳನ್ನು ಕೊಡಬೇಕು ಮತ್ತು ಕೇಂದ್ರ ಸರಕಾರದ ನಿಯಮಾವಳಿಯಂತೆ ಡಿ ದರ್ಜೆ ನೌಕರರಿಗೆ ಕನಿಷ್ಠ ವೇತನವನ್ನು ನಿಗಧಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಅಂಬೇಡ್ಕರ್‌ ಸೇವಾ ಸಮಿತಿ ಪದಾಧಿಕಾರಿಗಳು ಶುಕ್ರವಾರ ಕಂಪನಿಯ ಮುಖ್ಯಸ್ಥರಿಗೆ ಮನವಿ ಸಲ್ಲಿಸಿದರು.

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ರಸ್ತೆಯಲ್ಲಿರುವ ರಾಜಶ್ರೀ ಅಲ್ಟ್ರಾಟೆಕ್ ಸಿಮೆಂಟ್ ಕಂಪನಿಯ ಪ್ಯಾಕಿಂಗ್ ಪ್ಲಾಂಟ್ ಬಳಿ ಜಮಾಯಿಸಿದ ಸಮಿತಿ ಪದಾಧಿಕಾರಿಗಳು ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಡಿ ದರ್ಜೆ ನೌಕರರನ್ನು ಕೆಲಸಕ್ಕೆ ನಿಯೋಜಿಸದೆ ಕಂಪನಿ ಗುತ್ತಿಗೆದಾರರು ದರ್ಪ ತೋರುತ್ತಿದ್ದಾರೆ. ಗುತ್ತಿಗೆದಾರರ ಸ್ವಯಂ ನಿರ್ಧಾರದಂತೆ ಕೆಲಸಕ್ಕೆ ಬೇರೆಯವರನ್ನು ನಿಯೋಜಿಸಲಾಗುತ್ತಿದೆ ಎಂದು ದೂರಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಯುವ ಘಟಕದ ಅಧ್ಯಕ್ಷ ಅರ್ಜುನ್ ಎನ್ ಕೆ, ಕಂಪನಿಯಲ್ಲಿ ಸ್ಥಳೀಯರಿಗೆ ಮೊದಲ ಆದ್ಯತೆ ಕೊಡಬೇಕು. ಕೂಲಿ ಕಾರ್ಮಿಕರಿಗೆ ಸರಿಯಾದ ರೀತಿಯಲ್ಲಿ ರಜೆ ಕೊಡಬೇಕು. ಕಾರ್ಮಿಕರ ಹಿತದೃಷ್ಟಿಯಿಂದ ಊಟದ ಸಮಯ ಮತ್ತು ಟೀ ಬ್ರೇಕ್‌ ಕೊಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೇರೆ ರಾಜ್ಯಗಳಿಂದ ಬಂದ ಕಾರ್ಮಿಕರ ಕುಟುಂಬಸ್ಥರಿಗೆ ಏನಾದರೂ ಸಮಸ್ಯೆಗಳಾದಾಗ ಊರಿಗೆ ಹೋಗಿ ಮರಳಿದಾಗ ಕೂಡಲೆ ಕೆಲಸಕ್ಕೆ ನಿಯೋಜಿಸಬೇಕು. ಕರ್ತವ್ಯನಿರತ ಕಾರ್ಮಿಕರಿಗೆ ಕರ್ತವ್ಯದ ಸಮಯದಲ್ಲಿ ಜೀವ ಹಾನಿಯಾದಲ್ಲಿ, ಗಂಭೀರ ಗಾಯಗಳಾದಲ್ಲಿ ಅನಾರೋಗ್ಯಕ್ಕೊಳಗಾದಲ್ಲಿ ಅಂತಹ ಕಾರ್ಮಿಕರಿಗೆ ಮತ್ತು ಅವರ ಅವಲಂಬಿತರಿಗೆ ಕಂಪನಿಯ ವತಿಯಿಂದ ಆಂಬುಲೆನ್ಸ್‌ ಸೇರಿದಂತೆ ಸೂಕ್ತ ವೈದ್ಯಕೀಯ ವ್ಯವಸ್ಥೆ ಕಲ್ಪಿಸಬೇಕು ಎಂದು ಬೇಡಿಕೆಯಿಟ್ಟರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಪೋಕ್ಸೊ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ನ್ಯಾಯಾಂಗದ ನಿರಾಸಕ್ತಿ; ಸದನದ ಚರ್ಚೆ ಸ್ವಾಗತಾರ್ಹ

ಸರ್ಕಾರಿ ರಜೆ ದಿನಗಳಲ್ಲಿ ಸದರಿ ಕಂಪನಿಯಲ್ಲಿ ಕೆಲಸ ಮಾಡಿದವರಿಗೆ ಎರಡು ದಿನದ ವೇತನವನ್ನು ಕೋಡಬೇಕು. ಕೆಲಸ ಮಾಡದೇ ಇದ್ದಲ್ಲಿ ಒಂದು ದಿನದ ವೇತನವನ್ನು ನೀಡಬೇಕು. ಕರ್ತವ್ಯನಿರತ ಕಾರ್ಮಿಕರಿಗೆ, ಪ್ರತಿ ವರ್ಷಕ್ಕೆ ಎರಡು ಜತೆ ಸಮವಸ್ತ್ರ ಕೊಡಬೇಕು, ಪ್ರತಿ ತಿಂಗಳಿಗೆ 1 ಕೆಜಿ. ಕೊಬ್ಬರಿ ಎಣ್ಣೆ ಹಾಗೂ 2 ಕೆ.ಜಿ ಬೆಲ್ಲವನ್ನು ಕಡ್ಡಾಯವಾಗಿ ಕೊಡಬೇಕು ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...