ಉಡುಪಿ | ಇಎಸ್ಐ ಆಸ್ಪತ್ರೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಉಪವಾಸ ಸತ್ಯಾಗ್ರಹ

Date:

ಕೇಂದ್ರ ಸರಕಾರ ಎರಡು ವರ್ಷಗಳ ಹಿಂದೆ ಮಂಜೂರು ಮಾಡಿದ್ದ ಇಎಸ್ಐ ಆಸ್ಪತ್ರೆ ಇನ್ನೂ ಉಡುಪಿಗೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಶೀಘ್ರ ಆಸ್ಪತ್ರೆ ಕಾಮಗಾರಿ ಪ್ರಾರಂಭಿಸುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಜಿ.ಎ. ಕೋಟೆಯಾರ್ ನೇತೃತ್ವದಲ್ಲಿ ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು.

ಕೇಂದ್ರ ಸರಕಾರ ಹಲವು ಜಿಲ್ಲೆಗಳಿಗೆ ಇಎಸ್ ಐ ಆಸ್ಪತ್ರೆ ಮಂಜೂರು ಮಾಡಿದೆ. ಆದರೆ ಉಡುಪಿಗೆ ಇನ್ನೂ ಬಂದಿಲ್ಲ. ಇದರಿಂದಾಗಿ ಕಾರ್ಮಿಕರಿಗೆ, ಬಡ ಜನರಿಗೆ ಮತ್ತು ಹಿರಿಯ ನಾಗರಿಕರಿಗೆ ತೊಂದರೆಯಾಗುತ್ತಿದೆ. ಈ ಸಂಬಂಧ ಹಲವು ಬಾರಿ ಪ್ರತಿಭಟನೆ ನಡೆಸಿದ್ದರೂ, ಪ್ರಯೋಜನವಾಗಿಲ್ಲ. ಮುಂದಿನ ದಿನಗಳಲ್ಲಿ ಲಕ್ಷಾಂತರ ಜನ ಸೇರಿ ನಮ್ಮ ಹಕ್ಕನ್ನು ಕೇಳಿ ಪಡೆಯುತ್ತೇವೆ ಎಂದು ಹೋರಾಟಗಾರ ಜಿ.ಎ .ಕೋಟೆಯಾ‌ರ್ ಹೇಳಿದರು. ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಮನವಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದ ಕಾಮನ್ ಪೀಪಲ್ಸ್ ವೆಲ್ಫೇರ್ ಫೌಂಡೇಶನ್ ಅಧ್ಯಕ್ಷ ಜಿ.ಎ. ಕೋಟೆಯಾರ್, ಮಹಿಳಾ ಘಟಕದ ಅಧ್ಯಕ್ಷ ಭಾನುಮತಿ, ಯುವ ಘಟಕದ ಅಧ್ಯಕ್ಷ ಪ್ರವೀಣ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...