ಬೆಂಗಳೂರು | ಮಣಿಪುರ ಹಿಂಸಾಚಾರ ನಿಲ್ಲಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Date:

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ನಿಲ್ಲಿಸಬೇಕು ಹಾಗೂ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವಂತೆ ಆಗ್ರಹಿಸಿ ಇಂದು ಬೆಂಗಳೂರಿನ ಆರ್ಚ್‌ ಡಯಾಸೀಸ್‌ನ ಮಹಿಳಾ ಘಟಕದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಬೆಂಗಳೂರಿನ ಕೋಲ್ಸ್‌ ಪಾರ್ಕಿನಲ್ಲಿರುವ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಕ್ಯಾಥೆಡ್ರಲ್‌ನ ಮುಂಭಾಗ ನಡೆದ ಪ್ರತಿಭಟನೆಯ ವೇಳೆ ಸೇರಿದ್ದ ನೂರಾರು ಜನರು ಸಾಂಕೇತಿಕವಾಗಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾನವ ಹಕ್ಕುಗಳ ಕಾರ್ಯಕರ್ತೆ ಬೃಂದಾ ಅಡಿಗೆ ಮಾತನಾಡಿ, ‘ರಾಷ್ಟ್ರೀಯ ಮಹಿಳಾ ಆಯೋಗವು ಮಣಿಪುರದ ಮಹಿಳೆಯರನ್ನು ಭೇಟಿ ಮಾಡಬೇಕು. ಅಲ್ಲಿನ ಪರಿಸ್ಥಿತಿಯನ್ನು ಅವಲೋಕನ ನಡೆಸಿ, ಶಾಂತಿ ನೆಲೆಯೂರುವಂತೆ ಮಾಡಬೇಕು. ಪುನರ್ವಸತಿ ಕಲ್ಪಿಸಲು ಶ್ರಮಿಸಬೇಕು’ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
protest 2

ಸಾಮಾಜಿಕ ಕಾರ್ಯಕರ್ತೆ ಸೀಮಾ ಮೊಹ್ಸಿನ್ ಮಾತನಾಡಿ, ‘ಕೆಲವರು ತಮ್ಮ ರಾಜಕೀಯ ದುರುದ್ದೇಶದಿಂದ ಮಣಿಪುರದ ಜನರನ್ನು ವಿಭಜಿಸುತ್ತಿದ್ದಾರೆ. ದುಷ್ಕೃತ್ಯಗಳನ್ನು ಮರೆ ಮಾಚಲು ಕ್ಷಮೆಯಾಚಿಸುವ ನಾಟಕ ಮಾಡುತ್ತಿದ್ದಾರೆ. ಆದರೆ, ಹಿಂಸಾಚಾರ ನಿರತರಿಗೆ ಬೆಂಬಲ ಕೂಡ ನೀಡುತ್ತಿದ್ದಾರೆ. ಇದಕ್ಕೆ ಮಣಿಪುರದ ಜನ ಬೆಲೆ ತೆರುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಲಿತ ಮುಖಂಡೆ ರುತ್ ಮನೋರಮಾ ಮಾತನಾಡಿ, ‘ಮಣಿಪುರದಲ್ಲಿ ನಡೆಯುತ್ತಿರುವುದು ಅಲ್ಪಸಂಖ್ಯಾತರ ಮೇಲಿನ ಸಾಮಾಜಿಕ-ಧಾರ್ಮಿಕ ದಾಳಿಯಾಗಿದೆ. ಗಂಭೀರ ಪರಿಸ್ಥಿತಿ ಇದ್ದರೂ ಕೂಡ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಣಿಪುರಕ್ಕೆ ಭೇಟಿ ನೀಡಲು ಸಮಯ ಸಿಗುತ್ತಿಲ್ಲ ಏಕೆ’ ಎಂದು ಪ್ರಶ್ನಿಸಿದರು.

ಕ್ಯಾಥೋಲಿಕ್ ಮಹಿಳಾ ಸಮೂಹದ ಅಧ್ಯಕ್ಷೆ ಪ್ರಿಯಾ ಫ್ರಾನ್ಸಿಸ್ ಮಾತನಾಡಿ, ‘ಮಣಿಪುರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ನಿಜಕ್ಕೂ ಖಂಡನೀಯ. ಮಹಿಳೆಯರನ್ನು ಅಮಾನವೀಯವಾಗಿ ನಡೆಸಲಾಗುತ್ತಿದೆ. ಆದ್ದರಿಂದ ಕೇಂದ್ರ ಸರ್ಕಾರ ಕೂಡಲೇ ಕಾರ್ಯ ಪ್ರವೃತ್ತವಾಗಬೇಕು ಎಂಬುದು ದೇಶದ ಮಹಿಳೆಯರಿಗೆ ನ್ಯಾಯಯುತವಾದ ಬೇಡಿಕೆ’ ಎಂದರು.

“ಮಣಿಪುರದಲ್ಲಿನ ಅನ್ಯಾಯದ ಸರಪಳಿಯನ್ನು ಮುರಿಯಿರಿ, ಮಹಿಳಾ ಹಕ್ಕುಗಳನ್ನು ರಕ್ಷಿಸಿ’ ಎಂದು ಸೇರಿದ್ದ ಪ್ರತಿಭಟನಾಕಾರರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ಬಳಿಕ ತಮ್ಮ ಬೇಡಿಕೆಗಳ ಮನವಿ ಪತ್ರವನ್ನು ರಾಷ್ಟ್ರಪತಿಗಳಿಗೆ ಕಳುಹಿಸಿದರು.

ಪ್ರತಿಭಟನೆಯಲ್ಲಿ ಬೆಂಗಳೂರು ಆರ್ಚ್‌ಡಯಾಸಿಸ್‌ನ ಫಾ. ಸುಸೈರಾಜ್, ಸೈಂಟ್ ಜೋಸೆಫ್ ಸಂಜೆ ಕಾಲೇಜಿನ ಪ್ರಾಂಶುಪಾಲ ಪಾಲ್ ನ್ಯೂಮನ್, ಕಮಿಲಾ ಉರೂಜ್, ಸಿಖ್ ಮುಖಂಡ ಪ್ರೊ.ಹರ್ಜಿಂದರ್ ಸಿಂಗ್ ಭಾಟಿಯಾ, ಸುಷ್ಮಾ ವೀರ್, ಕಾಲಿನ್ ಕ್ಯಾಲ್ಮಿಯಾನೊ, ಶಶಿಂತ ಮೊಂತೇರೊ ಮಾತನಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...