ಬೀದರ್‌ | ರಸ್ತೆ ಗುಂಡಿ ಮುಚ್ಚದಿದ್ದರೆ ಸಸಿ ನೆಟ್ಟು ಪ್ರತಿಭಟನೆ : ದಸಂಸ

Date:

ಔರಾದ ಹಾಗೂ ಕಮಲನಗರ ತಾಲೂಕಿನ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಹದಗೆಟ್ಟು ತಗ್ಗು, ಗುಂಡಿಗಳು ಬಿದ್ದಿವೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ಗುಂಡಿ ಮುಚ್ಚಬೇಕು ಎಂದು ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

ಈ ಸಂಬಂಧ ಔರಾದ ತಾಲೂಕು ದಸಂಸ ಸಮಿತಿಯ ಪದಾಧಿಕಾರಿಗಳು ಸೋಮವಾರ ಔರಾದ್‌ ತಹಸೀಲ್ದಾರ್‌ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್‌ ಕಚೇರಿ ಅಧಿಕಾರಿ ವೆಂಕಟೇಶ ಅವರಿಗೆ ಸಲ್ಲಿಸಿದರು.

ʼಕಮಲನಗರ ತಾಲೂಕಿನ ದಾಬಕಾ (ಸಿಎಚ್)‌ – ಚಿಕ್ಲಿ(ಯು) ಮಧ್ಯದ ರಸ್ತೆ ಹಾಗೂ ಔರಾದ್‌ದಿಂದ ವ್ಹಾಯಾ ಬೆಳಕುಣಿ(ಸಿ), ಮಹಾಡೋಣಗಾಂವ್‌, ಠಾಣಾ ಕುಶನೂರ್‌, ಹಿಪ್ಪಳಗಾಂವ್‌ ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆಗಳಲ್ಲಿ ತಗ್ಗು, ಗುಂಡಿಗಳದ್ದೇ ಕಾರುಬಾರು. ಹೀಗಾಗಿ ವಾಹನ ಸವಾರರು ಗುಂಡಿಗಳ ಮಧ್ಯ ರಸ್ತೆ ಹುಡುಕಬೇಕಾದ ಪರಿಸ್ಥಿತಿ ಇದೆ. ಇಲ್ಲಿನ ನಾಗರಿಕರು ಪ್ರತಿನಿತ್ಯ ಓಡಾಡಲು ಹರಸಾಹಸ ಪರದಾಡುತ್ತಿದ್ದಾರೆ. ಆದರೂ ಸಂಬಂಧಪಟ್ಟ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ರಸ್ತೆ ದುರಸ್ತಿಗೆ ಮುಂದಾಗುತ್ತಿಲ್ಲʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ರಸ್ತೆ ಪರಿಶೀಲಿಸಿ ಎರಡ್ಮೂರು ದಿನಗಳಲ್ಲಿ ರಸ್ತೆ ತಗ್ಗು, ಗುಂಡಿ ಮುಚ್ಚಿ ದುರಸ್ತಿಗೊಳಿಸಿ, ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ಇಲ್ಲದಿದ್ದರೆ ರಸ್ತೆ ಗುಂಡಿಗಳಲ್ಲಿ ಸಸಿ ನೆಟ್ಟು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಲಿಗಾಗಿ ಕಾದಿರುವ ರಸ್ತೆ ಗುಂಡಿಗಳು : ದುರಸ್ತಿ ಯಾವಾಗ?

ಈ ಸಂದರ್ಭದಲ್ಲಿ ದಸಂಸ ತಾಲೂಕು ಸಂಚಾಲಕ ಸುಭಾಷ ಲಾಧಾ, ಸಹ ಸಂಚಾಲಕ ಗಣಪತರಾವ್‌ ವಾಸುದೇವ, ದತ್ತಾತ್ರಿ ದತ್ತೂರೆ, ಪ್ರಕಾಶ ಕಾಂಬಳೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...