ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಲಬುರಗಿ, ಯಾದಗಿರಿಯಲ್ಲಿ ಪ್ರತಿಭಟನೆ

Date:

ಸಂಸತ್ತಿನಲ್ಲಿ ಜಾರಿಯಾದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ವೆಲ್ಪರ್ ಪಾರ್ಟಿ ಆಫ್ ಇಂಡಿಯಾ ಪಕ್ಷ ತೀವ್ರ ವಿರೋಧಿಸಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಧರಣಿ ಸತ್ಯಾಗ್ರಹ ನಡೆಸಿತು.

ವಕ್ಫ್ ತಿದ್ದುಪಡಿ ಕಾಯ್ದೆ ಸಂವಿಧಾನಬದ್ಧ ಧಾರ್ಮಿಕ ಹಕ್ಕುಗಳನ್ನು ಉಲ್ಲಂಘಿಸುತ್ತವೆ ಮತ್ತು ಧಾರ್ಮಿಕ ಸಂಸ್ಥೆಗಳ ಸ್ವಾಯತ್ತತೆಗೆ ಧಕ್ಕೆಯಾಗಿದೆ. ಇದು ಪ್ರಜಾಪ್ರಭುತ್ವ, ಧಾರ್ಮಿಕ ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕೆ ವಿರೋಧವಾಗಿದೆʼ ಎಂದು ದೂರಿದರು.

ವಕ್ಫ್ ತಿದ್ದುಪಡಿ ಕಾಯ್ದೆ ತಕ್ಷಣ ಹಿಂಪಡೆಯಬೇಕು. ಭಾರತೀಯ ಸಂವಿಧಾನದ ವಿಧಿ 25 ಮತ್ತು 26ರ ಅಡಿಯಲ್ಲಿ ಖಚಿತಪಡಿಸಲಾದ ಧಾರ್ಮಿಕ ಸ್ವಾತಂತ್ರ್ಯವನ್ನು ಕಾಯ್ದುಕೊಳ್ಳಬೇಕು. ಯಾವುದೇ ಧಾರ್ಮಿಕ ಸಮುದಾಯದ ಆಂತರಿಕ ವಿಷಯಗಳಲ್ಲಿ ಸರ್ಕಾರ ಹಸ್ತಕ್ಷೇಪಿಸಬಾರದು. ವಕ್ಫ್ ಬೋರ್ಡ್‌ನ ಸ್ವಾಯತ್ತತೆ ಮತ್ತು ಆಸ್ತಿ ನಿರ್ವಹಣೆಯಲ್ಲಿ ಪಾರದರ್ಶಕತೆ ಖಚಿತಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳು ಮಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಮುಖರಾದ ಮುಬೀನ್ ಅಹಮದ್, ಸಲೀಂ ಚಿತಾಪುರಿ, ಬಾಬಾ ಹುಂಡೇಕರ್, ಫಹದ್ ಮೊಹಸಿನ್, ಹೈದರ್ ಅಲಿ ಬಾಗ್ಬಾನ್, ಮುಬಾಶ್ಶಿರ್, ಜಾಕಿರ್ ಹುಸೇನ್ ಸಾಬ್, ಹಾರೂನ್ ಖಾರಡಿ ಮತ್ತಿತರರು ಪಾಲ್ಗೊಂಡಿದ್ದರು.

ಜೇವರ್ಗಿಯಲ್ಲಿ ವಕ್ಫ್‌ ವಿರೋಧಿಸಿ ಪ್ರತಿಭಟನೆ :

ವಕ್ಫ್ ತಿದ್ದುಪಡಿ ಕಾಯ್ದೆ ರದ್ದುಪಡಿಸಬೇಕೆಂದು ಆಗ್ರಹಿಸಿ ಜೇವರ್ಗಿ ಮತ್ತು ಯಡ್ರಾಮಿ ತಾಲ್ಲೂಕುಗಳ ಸಂವಿಧಾನ ರಕ್ಷಣೆ ಜನಾಂದೋಲನ ಸಮಿತಿ ಜಂಟಿಯಾಗಿ ಜೇವರ್ಗಿ ಬೃಹತ್ ಪ್ರತಿಭಟನೆ ನಡೆಯಿತು.

ಬೃಹತ್‌ ಪ್ರತಿಭಟನಾ ಮೆರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿದ್ದರು, ಬಳಿಕ ರಾಷ್ಟ್ರಪತಿಗಳ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರ್‌ ಅವರಿಗೆ ಸಲ್ಲಿಸಿದರು.

ʼವಕ್ಫ್‌ ತಿದ್ದುಪಡಿ ಕಾಯ್ದೆಯಲ್ಲಿನ ಹಲವು ಅಂಶಗಳು ಬಿಜೆಪಿಯ ರಾಜಕೀಯ ದ್ವೇಷ, ಅಸೂಯೆಯಿಂದ ಕೂಡಿದ್ದು, ದೇಶದ ಮುಸ್ಲಿಮರನ್ನು ಎರಡನೇ ದರ್ಜೆ ಪ್ರಜೆಯನ್ನಾಗಿಸಿ ಆ ಮೂಲಕ ಡಾ.ಬಾಬಾ ಸಾಹೇಬ್ ಅಂಬೇಡ್ಕ‌ರ್ ಅವರು ರಚಿಸಿದ ಸಂವಿಧಾನವನ್ನು ಬದಲಾಯಿಸುವ ವ್ಯವಸ್ಥಿತ ಹುನ್ನಾರ ಈ ಕಾನೂನಿನಲ್ಲಿದೆ. ಕೂಡಲೇ ವಕ್ಫ್‌ ತಿದ್ದುಪಡಿ ಕಾಯ್ದೆ ಹಿಂಪಡೆಯಬೇಕುʼ ಎಂದು ಆಗ್ರಹಿಸಿದರು.

‘ಸಂಸತ್ತಿನಲ್ಲಿ ಅಂಗೀಕೃತವಾಗಿರುವ ಸಂವಿಧಾನ ವಿರೋಧಿ ವಕ್ಸ್ ತಿದ್ದುಪಡಿ ಕಾಯ್ದೆಯನ್ನು ಜಾರಿ ಆಗದಂತೆ ತಡೆಹಿಡಿದು ಸಂವಿಧಾನಿಕ ಮೌಲ್ಯಗಳನ್ನು ಎತ್ತಿ ಹಿಡಿಯಲು ಮುಂದಾಗಬೇಕೆಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಭೀಕರ ಕಾರು ಅಪಘಾತ : ಒಂದೇ ಕುಟುಂಬದ ಮೂವರ ಸಾವು

ಈ ಸಂದರ್ಭದಲ್ಲಿ ಪ್ರಮುಖರಾದ ಮಹಮ್ಮದ್ ಇಸುಬ್ ಕನ್ನಿ, ಮಹೇಶಕುಮಾರ ರಾಠೋಡ, ಬಾಬು ಪಾಟೀಲ, ಇಬ್ರಾಹಿಂ ಪಟೇಲ್ ಯಾಳವಾರ, ಸಿದ್ರಾಮ ಕಟ್ಟಿ, ಮೋಯಿಯುದ್ದೀನ್, ಇನಾಮ್ಹಾರ ರೌಫ್ ಹವಾಲ್ದಾರ್, ರಾಜಾಪಟೇಲ್ ಯಾಳವಾರ, ಅಬ್ದುಲ್ ಖಾದರ್, ಇಬ್ರಾಹಿಂ ಪಟೇಲ್ ಜೇವರ್ಗಿ, ಬಿ.ಸ್.ಮಾಲಿಪಾಟೀಲ್, ಮೆಹಬೂಬ್ ಮನಿಯಾರ ಮಳ್ಳಿ, ಮಲ್ಲಿಕಾರ್ಜುನ ನೆಲೋಗಿ, ಭೀಮರಾಯ ಉಸ್ಮಾನ್‌ಸಿಪಾಯಿ, ದುಮ್ಮದ್ರಿ, ಮೌಲಾಮೂಲಾ, ಸಿದ್ದು ಕೆರೂರ, ಅಜ್ಮೀರ್ ಪಟೇಲ್ ಯಡ್ರಾಮಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...