ಹಾಸನ | ಪರಿಶಿಷ್ಟರ ಅಭಿವೃದ್ಧಿಗೆ ಪೂರಕ ಬಜೆಟ್‌ ಮಂಡನೆಗೆ ಆಗ್ರಹಿಸಿ ಧರಣಿ

Date:

  • ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಪರಿಶಿಷ್ಟರಿಗೂ ಮೀಸಲಾತಿ ನೀಡಿ
  • ಕೇಂದ್ರ ಸರ್ಕಾರ ವ್ಯಾಪ್ತಿಯ 2 ಲಕ್ಷ ಬ್ಯಾಕ್ ಲಾಗ್ ಹುದ್ದೆ ಭರ್ತಿ ಮಾಡಿ

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಮುಂದಿನ ಬಜೆಟ್ ಮಂಡನೆ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಪೂರಕ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಚಂದ್ರಗುಪ್ತ ಮೌರ್ಯ ದಲಿತ ಹೋರಾಟಗಾರರ ಒಕ್ಕೂಟದ ಸದಸ್ಯರು ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ಈ ವೇಳೆ ಪ್ರತಿಭಟನೆಯನ್ನು ಉದ್ದೇಶಿಸಿ ಒಕ್ಕೂಟದ ಮುಖಂಡ ಶ್ರೀಧರ್ ಕಲಿವೀರ್ ಮಾತನಾಡಿ, ಜುಲೈ 7 ರಂದು ರಾಜ್ಯ ಬಜೆಟ್ ಮಂಡನೆ ಆಗಲಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾ ಮಟ್ಟದ ಧರಣಿಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಬಜೆಟ್‌ ಮಂಡನೆ ವೇಳೆ ದುರ್ಬಲ ವರ್ಗಗಳ ಅಭಿವೃದ್ಧಿಗಾಗಿ ಅನುದಾನ ಹೆಚ್ಚಿಸಬೇಕು. ಅಂಬೇಡ್ಕರ್ ಬಂದು ಹೋಗಿರುವ ಹಾಸನ ನಗರದಲ್ಲಿ ಗುರುತಿಸಿರುವ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವಾಗಿ ಅಭಿವೃದ್ಧಿಪಡಿಸಲು ₹20 ಕೋಟಿ ಅನುದಾನದೊಂದಿಗೆ 10 ಎಕರೆ ಭೂಮಿಯನ್ನು ಮೀಸಲಿರಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ‘ಹಾಡುಪಾಡು’ ರಾಮು ಖ್ಯಾತಿಯ ಹಿರಿಯ ಪತ್ರಕರ್ತ ಟಿಎಸ್ ರಾಮಸ್ವಾಮಿ ನಿಧನ

ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿ 2 ಲಕ್ಷ ಬ್ಯಾಕ್ ಲಾಗ್ ಹುದ್ದೆಗಳು ಖಾಲಿ ಇದ್ದು, ಕೂಡಲೇ ಹುದ್ದೆಗಳನ್ನು ಭರ್ತಿ ಮಾಡುವ ನೆಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ, ಪಂಗಡದವರಿಗೂ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಲಿಂಗರಾಜು, ಹರೀಶ್‌, ವಿಜಯಕುಮಾರ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...