‘ಆ್ಯಂಟಿ ಕಮ್ಯುನಲ್ ವಿಂಗ್’ ಸ್ಥಾಪನೆ ಬೆನ್ನಲ್ಲೇ ಚುರುಕಾದ ಮಂಗಳೂರು ಪೊಲೀಸ್ | 30 ದಿನದಲ್ಲಿ 21 ಕೇಸ್ ದಾಖಲು

Date:

  • ಎಲ್ಲ ಪ್ರಕರಣಗಳ ಬಗ್ಗೆ ತನಿಖೆ ನಡೆಯುತ್ತಿದೆ : ಮಂಗಳೂರು ಪೊಲೀಸ್ ಕಮಿಷನರ್
  • ಅಪರಾಧ ಪುನರಾವರ್ತನೆ ಮಾಡಿದಲ್ಲಿ ಕಠಿಣ ಕಾನೂನು ಕ್ರಮದ ಎಚ್ಚರಿಕೆ

ಅನೈತಿಕ ಪೊಲೀಸ್‌ಗಿರಿ ಮತ್ತು ದ್ವೇಷ ಭಾಷಣ ಮತ್ತು ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ ಇಡಲು ಗೃಹ ಇಲಾಖೆ ಮಂಗಳೂರಿನಲ್ಲಿ ‘ಆ್ಯಂಟಿ ಕಮ್ಯುನಲ್ ವಿಂಗ್’ ಅನ್ನು ಕಳೆದ ತಿಂಗಳು ಸ್ಥಾಪಿಸಿತ್ತು. ಇದರ ಬೆನ್ನಲ್ಲೇ ಚುರುಕಾಗಿರುವ ಮಂಗಳೂರು ನಗರ ಪೊಲೀಸರು, ಸೋಷಿಯಲ್ ಮೀಡಿಯಾಗಳಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್‌ಗೆ ಸಂಬಂಧಿಸಿ ಕಳೆದ 30 ದಿನದಲ್ಲಿ 21 ಪ್ರಕರಣ ದಾಖಲಿಸಿರುವುದಾಗಿ ವರದಿಯಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್, “ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದವರ ವಿರುದ್ಧ ಕಳೆದ 30 ದಿನಗಳಲ್ಲಿ 21 ಪ್ರಕರಣಗಳನ್ನು ದಾಖಲಿಸಲಾಗಿದೆ. ಎಲ್ಲ ಪ್ರಕರಣಗಳ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಾದ ವಾಟ್ಸಪ್, ಫೇಸ್‌ಬುಕ್, ಇನ್ಸ್‌ಟಾಗ್ರಾಮ್, ಟ್ವಿಟ್ಟರ್ ಹಾಗೂ ಇನ್ನಿತರ ಅಪ್ಲಿಕೇಶನ್‌ಗಳಲ್ಲಿ ಧರ್ಮಕ್ಕೆ ಸಂಬಂಧಿಸಿದ ಪ್ರಚೋದನಾಕಾರಿ ಸಂದೇಶಗಳನ್ನು ಪೋಸ್ಟ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆಯೂ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧರ್ಮದ ವಿಚಾರ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಅಂಶಗಳನ್ನು ಒಳಗೊಂಡ ಸಂದೇಶಗಳು ಹೆಚ್ಚಾಗಿ ಹರಿದಾಡುತ್ತಿರುವುದು ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲ ಪೊಲೀಸ್ ಠಾಣೆಗಳ ಹಾಗೂ ಸೋಷಿಯಲ್ ಮೀಡಿಯಾ ಸೆಲ್‌ನಲ್ಲಿ ಧರ್ಮದ ವಿಚಾರವಾಗಿ ಪರ ಮತ್ತು ವಿರೋಧ ಸಂದೇಶಗಳನ್ನು ಪೋಸ್ಟ್, ಶೇರ್ ಮತ್ತು ಕಮೆಂಟ್ ಮಾಡುವ ವ್ಯಕ್ತಿಗಳ ಮೇಲೆ ಸೂಕ್ತ ನಿಗಾ ವಹಿಸುತ್ತಿದ್ದು ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಇದೇ ರೀತಿಯಲ್ಲಿ ಅಪರಾಧಗಳನ್ನು ಪುನರಾವರ್ತನೆ ಮಾಡಿದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೂಡ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...