ಪ್ರಚೋದನಾಕಾರಿ ಹೇಳಿಕೆ: ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲು

Date:

ಕೋಮು ಸಂಘರ್ಷ ಉಂಟುಮಾಡುವ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿರುವ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಟಿ.ಎಸ್‌ ಶ್ರೀವತ್ಸವ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ‘ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ’ ಒತ್ತಾಯಿಸಿದೆ. ಮೈಸೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದೆ.

ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಪ್ರತಾಪ್ ಸಿಂಹ, “ಮಹಿಷ ದಸರಾ ಆಚರಣೆ ಮಾಡಲು ಬಿಡುವುದಿಲ್ಲ. ಒಂದು ವೇಳೆ ಮಹಿಷ ದಸರಾ ನಡೆಸಲು ಮುಂದಾದರೆ ಸಂಘರ್ಷ ನಡೆಸಲು ಸಿದ್ದರಿರಬೆಕು” ಎಂದು ಬೆದರಿಕೆ ಮಾತುಗಳನ್ನಾಡಿದ್ದರು. ”ಮಹಿಷ ದಸರಾ ಆಚರಣೆಯನ್ನು ತಡೆಯಲು ಈಗಾಗಲೇ ರೂಪುರೇಷೆ ತಯಾರು ಮಾಡಿರುತ್ತೇವೆ. ಯಾವ ರೀತಿಯಲ್ಲಿ ಮಹಿಷ ದಸರಾ ಮಾಡುತ್ತಾರೊ ನೋಡೋಣ” ಎಂದು ಕೃಷ್ಣ ರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಅವರೂ ಹೇಳಿದ್ದಾರೆ. ”ಮಹಿಷ ದಸರಾ ಆಚರಣೆಯನ್ನು ತಡೆಯಲು ಈಗಾಗಲೇ ರೂಪುರೇಷ ತಯಾರು ಮಾಡಿರುತ್ತೇವೆ. ಯಾವ ರೀತಿಯಲ್ಲಿ ಮಹಿಷ ದಸರಾ ಮಾಡುತ್ತಾರೊ ನೋಡೋಣ” ಎಂದು ಕೃಷ್ಣ ರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಅವರೂ ಹೇಳಿದ್ದಾರೆ. ಅವರಿಬ್ಬರ ಈ ಹೇಳಿಕೆಯು ಪ್ರಚೋದನಾಕಾರಿಯಾಗಿವೆ ಮತ್ತು ಒಂದು ಸಮುದಾಯದ ವಿರುದ್ಧ ದ್ವೇಷ ಬಿತ್ತುವಂತಿವೆ ಎಂದು ಸಂಘಟನೆ ಆರೋಪಿಸಿದೆ.

“ಸಂಸದ ಮತ್ತು ಶಾಸಕರ ಹೇಳಿಕೆಗಳಿಂದ ಮೈಸೂರಿನಲ್ಲಿ ಮಾತ್ರವಲ್ಲ, ರಾಜ್ಯದಲ್ಲಿಯೇ ಅಶಾಂತಿ ವಾತಾವರಣ ಸೃಷ್ಟಿಯಾಗುತ್ತಿದೆ. ಶಾಂತಿ-ಸುವ್ಯವಸ್ಥೆ ಹಾಳಾಗುತ್ತಿದೆ. ಸಾರ್ವಜನಿಕವಾಗಿ ಕೋಮು ಭಾವನೆ ಕೆರಳಿಸುವ ಹೇಳಿಕೆ ನೀಡಿರುವ ಅವರಿಬ್ಬರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಸಂಘಟನೆಯ ಅಧ್ಯಕ್ಷ ಎನ್. ಭಾಸ್ಕರ್ ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...