ಗದಗ | ಪಿಎಸ್‌ಐ ಪರಶುರಾಮ ಸಾವಿನ ಕುರಿತು ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಿ: ದಸಂಸ ಆಗ್ರಹ

Date:

ಪಿಎಸ್‌ಐ ಪರಶುರಾಮ ಛಲವಾದಿ ಸಾವಿನ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿ ಗದಗ ಜಿಲ್ಲೆಯ ನರಗುಂದ ಪಟ್ಟಣದ ತಹಶೀಲ್ದಾರ್ ದಲಿತ ಸಂಘರ್ಷ ಸಮಿತಿ ಮುಖಂಡರು ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಮಾತನಾಡಿದ ದಸಂಸ ಗದಗ ಜಿಲ್ಲಾಧ್ಯಕ್ಷ ದತ್ತು ಜೋಗಣ್ಣವರ, “ಪರಶುರಾಮ ಚಲವಾದಿ ಅವರು ಯಾದಗಿರಿ ಶಹರ ಪೋಲಿಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಸ್ಥಳೀಯ ಶಾಸಕರಾದ ಚನ್ನಾರೆಡ್ಡಿ ಪಾಟೀಲ ತುನ್ನೂರು ಹಾಗೂ ಅವರ ಮಗನಾದ ಸನ್ನೀಗೌಡ ಇವರು ಜಾತಿ ದೌರ್ಜನ್ಯ, ಹಣದ ಬೇಡಿಕೆ ಹಾಗೂ ಕಿರುಕುಳದಿಂದ ಪರಶುರಾಮ ಅವರು ಸಾವನಪ್ಪಿದ್ದಾರೆಂದು ಸಂಶಯವಿದೆ. ಈ ಸಾವಿಗೆ ಕಾರಣವಾದರನ್ನು ಸಂಪೂರ್ಣ ತನಿಖೆಗೆ ಒಳಪಡಿಸಬೇಕು. ಕಾನೂನು ರೀತಿಯಲ್ಲಿ ಶಿಕ್ಷೆ ಆಗಬೇಕೆಂದು ಒತ್ತಾಯಿಸಿದರು.

ಒಂದು ವೇಳೆ ಆ ಕುಟುಂಬಕ್ಕೆ ಸರಿಯಾದ ರೀತಿಯಲ್ಲಿ ನ್ಯಾಯ ಸಿಗದೇ ಹೋದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಾಂತ ಪ್ರತಿಭಟನೆ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮಂಡ್ಯ | ರೈತರ ಜಮೀನಿನಲ್ಲಿ ಕಾಣಿಸಿಕೊಂಡ ಎರಡು ಕಾಡಾನೆ; ಸಾರ್ವಜನಿಕರಲ್ಲಿ ಆತಂಕ

ಈ ಸಂದರ್ಭದಲ್ಲಿ ಎಫ್. ವೈ. ದೊಡ್ಡಮನಿ, ಮುತ್ತು‌ ಸುರಕೋಡ, ದತ್ತಾತ್ರೇಯ ಜೋಗಣ್ಣವರ, ವಿಜಯಕುಮಾರ ಛಲವಾದಿ, ನಿಂಗರಾಜ ಸಂಗಳದ, ಯಶವಂತ ನಡವಿನಮನಿ ಪುಟ್ಟರಾಜ, ಬಸವರಾಜ ಜೋಗಣ್ಣವರ, ನವೀನ ಜೋಗಣ್ಣವರ, ಗುರುನಾಥ ಕೆಂಗಾರಕರ್, ಕುಮಾರ ಚಲವಾದಿ, ಶರಣಪ್ಪ ಚಲವಾದಿ, ಅಶೋಕ ತಾಳದವರ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...