ಪಿಎಸ್‌ಐ ನೇಮಕಾತಿ ಹಗರಣ | ಅಕ್ರಮವೆಸಗಿದ್ದ 52 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯದಂತೆ ಶಾಶ್ವತ ನಿಷೇಧ

Date:

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ದೊಡ್ಡ ಹಗರಣಗಳ ಪೈಕಿ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮವೆಸಗಿ ಬಂಧಿತರಾಗಿದ್ದ 52 ಅಭ್ಯರ್ಥಿಗಳನ್ನು ಶಾಶ್ವತವಾಗಿ ಪೊಲೀಸ್‌ ಇಲಾಖೆಯ ನೇಮಕಾತಿಯಲ್ಲಿ ಭಾಗವಹಿಸದಂತೆ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಈ ಕುರಿತು ರಾಜ್ಯ ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗದ ಡಿಜಿಪಿ ಈ ಆದೇಶವನ್ನು ಬುಧವಾರ ಹೊರಡಿಸಿದ್ದಾರೆ. 2021ರಲ್ಲಿ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ಸಿವಿಲ್‌ (545) ಪುರುಷ ಮತ್ತು ಮಹಿಳಾ ಹಾಗೂ ಸೇವಾನಿರತ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯದ 7 ಕೇಂದ್ರಗಳಾದ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ- ಧಾರವಾಡ, ಕಲಬುರಗಿ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

ಈ ವೇಳೆ ಲಿಖಿತ ಪರೀಕ್ಷೆಯಲ್ಲಿ ಬ್ಲೂಟೂತ್‌ ಹಾಗೂ ಎಲೆಕ್ಟ್ರಾನಿಕ್‌ ಸಾಧನ ಬಳಸಿ ಅಕ್ರಮ ಎಸಗಿರುವ ಬಗ್ಗೆ ಎಂಬ ದೂರು ಕೇಳಿಬಂದಿತ್ತು. ಈ ಪ್ರಕರಣವನ್ನು ಆಗಿನ ಬಿಜೆಪಿ ಸರ್ಕಾರ ಸಿಐಡಿ ತನಿಖೆಗೆ ನೀಡಿತ್ತು. ನಂತರ ಅಕ್ರಮವೆಸಗಿದ 52 ಆರೋಪಿಗಳನ್ನು ಬಂಧಿಸಲಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ಇವರ ಆರೋಪ ಸಾಬೀತಾಗಿದ್ದರಿಂದ ಮುಂದಿನ ಯಾವುದೇ ಪೊಲೀಸ್ ನೇಮಕಾತಿಯಲ್ಲಿ ಇವರು ಭಾಗವಹಿಸದಂತೆ ನಿಷೇಧಿಸಿ ಆದೇಶಿಸಲಾಗಿದೆ.

931f0c6c51d5094fd09854fe60afc89197e460e7a77cac502ebfd2074238fae8?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...