ತುಮಕೂರು | ಪತ್ರಕರ್ತನಿಗೆ ಜಾತಿ ನಿಂದನೆ, ಹಲ್ಲೆ: ಪಬ್ಲಿಕ್ ಟಿವಿ ವರದಿಗಾರನ ಬಂಧನ

Date:

ಪತ್ರಕರ್ತನಿಗೆ ಜಾತಿ ನಿಂದನೆ ಮಾಡಿ ಹಲ್ಲೆ ಎಸಗಿರುವ ಆರೋಪದ ಮೇಲೆ ತುಮಕೂರು ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿಯನ್ನು ಬಂಧಿಸಲಾಗಿದೆ. ಸದ್ಯ ತಾಳಮಕ್ಕಿಯನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಝೀ ಕನ್ನಡ ನ್ಯೂಸ್ ವರದಿಗಾರ ಜಿ. ಎನ್. ಮಂಜುನಾಥ್ (ಸಮಯ ಮಂಜು) ನೀಡಿದ ದೂರಿನ ಆಧಾರದಲ್ಲಿ ತಿಲಕ್ ಪಾರ್ಕ್ ಠಾಣೆ ಪೊಲೀಸರು ಮಂಜುನಾಥ್ ತಾಳಮಕ್ಕಿ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಗಣೇಶನ ಗಲಾಟೆ: ಪೊಲೀಸರ ನಿರ್ಲಕ್ಷ್ಯ, ರಾಜಕಾರಣಿಗಳ ಸ್ವಾರ್ಥಕ್ಕೆ ನಲುಗಿದ ನಾಗಮಂಗಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಮೇಲೆ ಮೇ 21ರಂದು ಇಡಿ ದಾಳಿ ನಡೆದಿದೆ. ಇದರ ವರದಿ ಮಾಡಲು ಝೀ ಕನ್ನಡ ನ್ಯೂಸ್ ವರದಿಗಾರ ಮಂಜುನಾಥ್ ತೆರಳಿದ್ದರು. ಈ ವೇಳೆ ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.

“ಏನಲೇ ನೀನು ಬಂದಿದ್ದೀಯಾ, ನಿನಗೆ ನೀನೇ ಮಹಾ ಬುದ್ಧಿವಂತ ಅಂದ್ಕೊಂಡಿದ್ದೀಯಾ, ಏನೇ ಮಾಡಿದರೂ ಕೀಳು ಜಾತಿನೇ, ಕೀಳು ಜಾತಿ ಬುದ್ಧಿ ಬಿಡಲ್ಲ, ಮಾದಿಗರ ಬುದ್ಧಿ ಲದ್ದಿ” ಎಂದು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಹಾಗೆಯೇ ಲೋಗೋ ಇರುವ ಮೈಕ್‌ನಿಂದ ತಲೆ, ಕಿವಿಗೆ ಹಲ್ಲೆ ನಡೆಸಿದ್ದು ಹಲ್ಲೆಯಿಂದ ಗಾಯಗೊಂಡ ಜಿ.ಎನ್.ಮಂಜುನಾಥ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಹಾಗೆಯೇ ತಿಲಕ್ ಪಾರ್ಕ್ ಠಾಣೆಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಈ ದೂರಿನ ಆಧಾರದಲ್ಲಿ ಮಂಜುನಾಥ್ ತಾಳಮಕ್ಕಿಯನ್ನು ತನಿಖಾಧಿಕಾರಿ ಮಧುಗಿರಿ ಡಿವೈಎಸ್‌ಪಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...