ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

Date:

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡಹಳ್ಳದಲ್ಲಿ ನಡೆದಿದೆ.

ಒಂಟಿ ಸಲಗ ವಗಡೆ, ಕಾನೂರು, ಬಾಳೆಹಿತ್ತಲು, ಸಾತ್ವಾನಿ, ಗುಂಡ್ವಾನಿ, ಗುಬ್ಬಿಗಾ, ಹೊರಬೈಲು, ನೇರ್ಲೆ, ಗೋಣಿಕೊಪ್ಪ, ಚಿಟ್ಟಿಕೊಡಿಗೆ ಸೇರಿದಂತೆ ಅನೇಕ ಹಳ್ಳಿಗಳಲ್ಲಿ ನಿರಂತರವಾಗಿ ಬೆಳೆ ಹಾನಿ ಮಾಡುತ್ತಿದ್ದು, ರೈತರ ತೋಟಗಳಿಗೆ ಅಪಾರ ನಷ್ಟ ಉಂಟಾಗಿತ್ತು. ಇದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಹಾಗೂ ಶೃಂಗೇರಿ ಶಾಸಕರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರು. ಸ್ಥಳೀಯರ ಒತ್ತಾಯದ ಮೇರೆಗೆ ಅರಣ್ಯ ಸಚಿವ ಈಶ್ವ‌ರ್ ಖಂಡ್ರೆ ಆನೆ ಸೆರೆ ಹಿಡಿಯುವ ಕಾರ್ಯಾಚರಣೆಗೆ ಆದೇಶಿಸಿದ್ದರು. 

ಹೀಗಾಗಿ ಸಕ್ರೆಬೈಲಿನಿಂದ ಮೂರು ಕುಮ್ಮಿ ಆನೆಗಳು ಹಾಗೂ ಕುಶಾಲನಗರದ ದುಬಾರೆಯಿಂದ ಮೂರು ಆನೆಗಳು ಸೇರಿ ಒಟ್ಟು ಆರು ಕುಮ್ಮಿಗಳು ಕಾರ್ಯಾಚರಣೆಗೆ ಆಗಮಿಸಿದ್ದವು. ಸೋಮವಾರ ಬೆಳಿಗ್ಗೆ ಗುಡ್ಡೆಹಳ್ಳ ಬಳಿ ಅರವಳಿಕೆ ಹೊಡೆದು ಆನೆಯನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಈ ಕುರಿತು ಕೊಪ್ಪ ಡಿಎಫ್‌ಒ ಅವರ ಮಾರ್ಗದರ್ಶನದಲ್ಲಿ ಎಲಿಫಂಟ್ ಟಾಸ್‌ಫೋರ್ಸ್‌ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಆನೆ ಸರಿಯಾದ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸಧ್ಯಕ್ಕೆ ನಿಟ್ಟುಸಿರು ಬಿಟ್ಟಿದ್ದಾರೆ. ಹಾಗೆಯೇ, ಒಂಟಿ ಸಲಗದ ಕಾರ್ಯಾಚರಣೆಗೆ ಆಗಮಿಸಿದ ದುಬಾರೆಯ ಮತ್ತು ಸಕ್ರೆಬೈಲಿನಿಂದ ಆಗಮಿಸಿದ ಮಾವುತರಿಗೂ ಹಾಗೂ ಕಾವಾಡಿಗರಿಗೂ ಕಾರ್ಯಪಡೆಗೆ ಬೆಂಬಲ ನೀಡುತ್ತಿರುವ ಸ್ಥಳೀಯ ಗ್ರಾಮಸ್ಥರಿಗೂ ಮಾನ್ಯ ಶಾಸಕರು ಅಭಿನಂದನೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...