ಪುಂಜಾಲಕಟ್ಟೆ | ‘ವಿಧವೆಗೊಂದು ಆಸರೆ’ ತಂಡದಿಂದ ಬಡ ಕುಟುಂಬಗಳಿಗೆ ರೇಷನ್ ಕಿಟ್ ವಿತರಣೆ

Date:

ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ, ಮೂಡಬಿದ್ರೆ, ಬಂಟ್ವಾಳ, ವೇಣೂರು, ಕಾರ್ಕಳ ಪ್ರದೇಶಗಳಲ್ಲಿ ಕಾರ್ಯಾಚರಿಸುತ್ತಿರುವ ಯುವಕರೇ ಕಟ್ಟಿಕೊಂಡ ‘ವಿಧವೆಗೊಂದು ಆಸರೆ’ ತಂಡದಿಂದ ಬಡ ಕುಟುಂಬಗಳಿಗೆ ರೇಷನ್ ಕಿಟ್ ವಿತರಣೆ ಮಾಡಲಾಯಿತು.

ಈ ಬಾರಿ ವಿಧವೆಗೊಂದು ಆಸರೆ ಇದರ ಎರಡನೇ ವಾರ್ಷಿಕ ಹಾಗೂ ರಮಝಾನ್ ತಿಂಗಳ ಪ್ರಯುಕ್ತ ಗ್ರಾಮಾಂತರ ಪ್ರೇಶಗಳಲ್ಲಿ ವಾಸಿಸುತ್ತಿರುವ ವಿಧವೆ, ಅನಾಥ ಹಾಗೂ ಬಡ ಕುಟುಂಬಗಳಿಗೆ ಸುಮಾರು 123 ಕುಟುಂಬಗಳಿಗೆ ರೇಷನ್ ಕಿಟ್ ವಿತರಿಸಲಾಯಿತು.

WhatsApp Image 2025 03 13 at 7.19.56 AM

“ಇಸ್ಲಾಮಿನಲ್ಲಿ ಕಲ್ಪಿಸಿದ ಅತ್ಯಂತ ಶ್ರೇಷ್ಠವಾದ ದಾನ ಅನ್ನದಾನ. ಯಾರ ಸಹಾಯ ಇಲ್ಲದೆ ತನ್ನ ಅನಾಥ ಮಕ್ಕಳನ್ನು ಸಾಕಲು ಕಷ್ಟಪಡುವ ಕುಟುಂಬಿಕರಿಗೆ ಹಾಗೂ ಪುರುಷರಿಲ್ಲದ ಬಡಕುಟುಂಬಗಳಿಗೆ ರೇಷನ್ ನೀಡುತ್ತಿದ್ದೇವೆ. ಜನರು ತಮ್ಮ ಕೈಲಾದಷ್ಟು ನೆರವು ನೀಡುತ್ತಿದ್ದು, ನಾವು ಅದನ್ನು ಅರ್ಹ ಕುಟುಂಬಗಳಿಗೆ ತಲುಪಿಸುತ್ತಿದ್ದೇವೆ” ಎಂದು ‘ವಿಧವೆಗೊಂದು ಆಸರೆ’ ತಂಡದ ಸದಸ್ಯ ಅಶ್ರಫ್ ವೇಣೂರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 03 13 at 12.36.42 PM

“ಸೋಷಿಯಲ್ ಮೀಡಿಯಾ ದುರ್ಬಳಕೆಯಾಗುತ್ತಿದೆ. ಅದರ ಮಧ್ಯೆಯೂ ಒಳ್ಳೆಯ ಕೆಲಸ ಮಾಡಬಹುದು ಎಂದು ನಮ್ಮ ತಂಡದ ಸದಸ್ಯರು ತೋರಿಸಿಕೊಟ್ಟಿದ್ದಾರೆ. 8 ಮಂದಿ ಅಡ್ಮಿನ್‌ಗಳನ್ನು ಹೊಂದಿರುವ ವಿಧವೆಗೊಂದು ಆಸರೆ ಗ್ರೂಪ್ ಮೂಲಕ ಪ್ರತಿ ತಿಂಗಳು ರೇಷನ್ ಕಿಟ್ ಸಂಗ್ರಹ ಮಾಡುತ್ತಿದ್ದೇವೆ. ನಮ್ಮ ಸಹಾಯವನ್ನು ಎದುರು ನೋಡುತ್ತ ಹಲವು ಕುಟುಂಬಗಳಿವೆ. ಅವರಿಗೂ ನೆರವು ನೀಡಲು ಇಚ್ಛಿಸುವವರು(9632035506) ನಮ್ಮ ಜೊತೆಗೆ ಕೈಜೋಡಿಸಬಹುದು” ಎಂದು ವಿನಂತಿಸಿದ್ದಾರೆ.

ಈ ಸಂದರ್ಭದಲ್ಲಿ ಹಮೀದ್ ಪುಂಜಾಲಕಟ್ಟೆ, ಅಶ್ರಫ್ ವೇಣೂರು, ಸಾಜಿ ಪುಂಜಾಲಕಟ್ಟೆ, ಆಸಿಫ್ ಪುಂಜಾಲಕಟ್ಟೆ, ಹನೀಫ್ ಮೂರ್ಜೆ, ಅಬ್ದುಲ್ ಸಲಾಂ ಪುಂಜಾಲಕಟ್ಟೆ, ಬಶೀರ್ ಕೆ.ಬಿ.ವೇಣೂರು, ಅಶ್ರಫ್ ಪುಂಜಾಲಕಟ್ಟೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...