ದಾವಣಗೆರೆ | ನಾಪತ್ತೆಯಾಗಿದ್ದ ಪಿಯುಸಿ ವಿದ್ಯಾರ್ಥಿಗಳು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

Date:

ನಾಪತ್ತೆಯಾಗಿದ್ದ ಪಿಯುಸಿ ವಿದ್ಯಾರ್ಥಿಗಳಿಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಬಳಿಯ ಅನಂತನಹಳ್ಳಿಯಲ್ಲಿರುವ ಅರಣ್ಯ ಪ್ರದೇಶದಲ್ಲಿ‌ ವಿದ್ಯಾರ್ಥಿಗಳ ಮೃತದೇಹ ಪತ್ತೆಯಾಗಿವೆ.

ಮೃತರನ್ನು ದಾವಣಗೆರೆಯ ಜಿಟ್ಟಿನಕಟ್ಟೆ ಗ್ರಾಮದ ಮದ್ದನಸ್ವಾಮಿ(18), ಬಂಡ್ರಿ ಗ್ರಾಮದ ದೀಪಿಕಾ(18) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಇಬ್ಬರೂ ಒಂದೇ ಮರದ ಕೊಂಬೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮದ್ದನಸ್ವಾಮಿ ಮತ್ತು ದೀಪಿಕಾ ಹರಪನಹಳ್ಳಿ ಸರ್ಕಾರಿ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿದ್ದರು. ಇಬ್ಬರೂ ಪರೀಕ್ಷೆಯನ್ನೂ ಬರೆದಿದ್ದರು. ಇಬ್ಬರೂ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದರು. ಆದಾಗ್ಯೂ, ಏಪ್ರಿಲ್15ರಂದು ಪಿಯುಸಿ ಫಲಿತಾಂಶ ಪ್ರಕಟವಾದಾಗಿನಿಂದ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ.

ಯಾವ ಕಾರಣಕ್ಕೆ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತಿಳಿದುಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...