ಪುತ್ತೂರು | ಸುಳ್ಳು ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಆರೋಪ: ಕೇಸು ದಾಖಲು

Date:

ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಗೆ ಗುಂಡೇಟು ಘಟನೆಗೆ ಸಂಬಂಧಿಸಿದಂತೆ ಸುಳ್ಳು ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ: 115/2025. ಕಲಂ 132, 109, 303(2) r/w 3(5) ಭಾರತೀಯ ನ್ಯಾಯ ಸಂಹಿತೆ 2023 ಮತ್ತು ಕಲಂ 4, 5, 6, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿ ಬಂಧಕ ಕಾಯ್ದೆ & ಸಂರಕ್ಷಣಾ ಕಾಯ್ದೆ 2020 ರಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಜಾನುವಾರುಗಳನ್ನು ಖರೀದಿ ಮಾಡಿರುವ ರಶೀದಿಗಳೆಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದ್ದ ದಾಖಲೆಗಳ ಬಗ್ಗೆ ವಿಚಾರಿಸಿದಾಗ ಚನ್ನರಾಯಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿರವರು ದೃಢೀಕರಿಸಿದಂತೆ, ಶುಕ್ರವಾರದಂದು ಮಾತ್ರ ಜಾನುವಾರು ಸಂತೆ ನಡೆಯುವುದಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಸದ್ರಿ ದಾಖಲೆಗಳು (ರಶೀದಿ ಕ್ರಮ ಸಂಖ್ಯೆ: 27653 ಹಾಗೂ 27654 ಗಳನ್ನು) ತಿದ್ದಿ ಸುಳ್ಳು ಸೃಷ್ಟನೆ ಮಾಡಿ ಪ್ರಸಾರ ಮಾಡಿರುವುದಾಗಿ ತಿಳಿದುಬಂದಿದೆ. ಅಲ್ಲದೇ ಆರ್.ಟಿ.ಓ ಅಧಿಕಾರಿ ಮತ್ತು ಪಶು ವೈದ್ಯಾಧಿಕಾರಿಯವರಿಂದ ಮಾಹಿತಿ ಪಡೆಯಲಾಗಿತ್ತು.

ವಾಹನದಲ್ಲಿ ಜಾನುವಾರುಗಳನ್ನು ಸಾಗಾಟ ಮಾಡಲು ಅನುಮತಿ ನೀಡಿರುವುದಿಲ್ಲವೆಂದು ಮಾಹಿತಿಯನ್ನು ನೀಡಿರುತ್ತಾರೆ. ಈ ರೀತಿ ಸುಳ್ಳು ಸೃಷ್ಟನೆ ಮಾಡಿದ ಹಾಗೂ ನೈಜವಾಗಿರದ ದಾಖಲೆಗಳೆಂದು ತಿಳಿದಿದ್ದರು ಕೂಡಾ, ಆರೋಪಿಗಳನ್ನು ರಕ್ಷಿಸುವ ದುರುದ್ದೇಶದಿಂದ State office SDPI Karnataka ಎಂಬ ಹೆಸರಿನ“X”ಖಾತೆಯ ಖಾತೆದಾರರು, Thejasnews.com ನ ಮಾಲಕ/ಸಂಪಾದಕ ಮತ್ತು Sadath Bajathur ಎಂಬವರು ಹಾಗೂ ಇತರ ಕೆಲವು ಸಾಮಾಜಿಕ ಜಾಲತಾಣ ಬಳಕೆದಾರರು ಸುಳ್ಳು ಸುದ್ದಿಯನ್ನು ಪ್ರಸಾರ ಮಾಡುವ ಮೂಲಕ, ಸಾರ್ವಜನಿಕರು ಉದ್ವೇಗಗೊಂಡು ಜನರು ಗುಂಪು ಕೂಡಿ ದೊಂಬಿಯಂತಹ ಅಪರಾಧ ನಡೆಸಲು ಸನ್ನಿವೇಶ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಿನಾಂಕ 05.11.2025 ರಂದು ಅ.ಕ್ರ: 123-2025, ಕಲಂ: 233,240,338,353(1)(b),192,61(2)(b),238(c),r/w3(5))ಭಾರತೀಯ ನ್ಯಾಯ ಸಂಹಿತೆ 2023,ರಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಕೂಡಾ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಾಗೂ ಪ್ರಚೋದನಾಕಾರಿ ಪೋಸ್ಟ್ ಪ್ರಸಾರ ಮಾಡುವವರ ವಿರುದ್ಧ ಕಠಿನ ಕಾನೂನು ಕ್ರಮಗಳನ್ನು ಜರುಗಿಸಲಾಗುವುದು. ಆದ್ದರಿಂದ ಸಾಮಾಜಿಕ ಜಾಲತಾಣ ಬಳಕೆದಾರರು ಜವಾಬ್ದಾರಿಯುತವಾಗಿ ಸಾಮಾಜಿಕ ಜಾಲತಾಣಗಳನ್ನು ಬಳಸಬೇಕಾಗಿ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಪೊಲೀಸ್ ಇಲಾಖೆ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...