ಪುತ್ತೂರು | ಶಾಸಕ ಅಶೋಕ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ; ಮೂರು ಸರ್ಕಾರಿ ಶಾಲೆಗಳು ಕೆಪಿಎಸ್‌ಗೆ ಆಯ್ಕೆ

Date:

ಪುತ್ತೂರು ಶಾಸಕ ಅಶೋಕ್ ರೈ ಮನವಿಗೆ ಶಿಕ್ಷಣ ಇಲಾಖೆ ಸ್ಪಂದನೆ ನೀಡಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಆಯ್ಕೆಯಾಗಿವೆ.

ಉಪ್ಪಿನಂಗಡಿ, ನೆಟ್ಟಣಿಗೆ ಮುಡ್ನೂರು ಹಾಗೂ ಬಜತ್ತೂರು ಸರಕಾರಿ ಹಿ ಪ್ರಾ ಶಾಲೆ ಇನ್ನು ಮುಂದೆ ಕೆಪಿಎಸ್ ಸ್ಕೂಲ್ ಆಗಿ ಪರಿವರ್ತನೆಯಾಗಲಿದೆ. ಒಟ್ಟು ಎಂಟು ಶಾಲೆಗಳನ್ನು ಅರ್ಹತಾ ಪಟ್ಟಿಗೆ ಕಳುಹಿಸಲಾಗಿದ್ದು, ಮೊದಲ ಹಂತದಲ್ಲಿ ಮೂರು ಶಾಲೆಗಳನ್ನು ಶಿಕ್ಷಣ ಇಲಾಖೆ ಆಯ್ಕೆ ಮಾಡಿದೆ.

ಎಲ್‌ಕೆಜಿಯಿಂದಲೇ ಆಂಗ್ಲ ಮಾಧ್ಯಮ: ಕೆಪಿಎಸ್ ಸ್ಕೂಲ್ ಗಳಲ್ಲಿ ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿ ತನಕ ಒಂದೇ ಸೂರಿನಡಿ ಶಿಕ್ಷಣ ದೊರೆಯಲಿದೆ. ಎಲ್‌ಕೆಜಿಯಿಂದ ಆರಂಭಗೊಂಡು ದ್ವಿತೀಯ ಪಿಯುಸಿ ತನಕ ಆಂಗ್ಲ ಮಾಧ್ಯಮ ಹಗೂ ಕನ್ನಡ ಮಾಧ್ಯಮದಲ್ಲಿ ತರಗತಿಗಳು ನಡೆಯುತ್ತದೆ. ಗ್ರಾಮೀಣ ಭಾಗದ ಶಾಲೆಗಳನ್ನು ಸರಕಾರ ಕೆಪಿಎಸ್ ಸ್ಕೂಲ್‌ಗೆ ಹೆಚ್ಚಾಗಿ ಅಯ್ಕೆ ಮಾಡುತ್ತಿದ್ದು ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಆಂಗ್ಲ ಮಾಧ್ಯಮ ಶಿಕ್ಷಣವನ್ನು ಸರಕಾರಿ ಶಾಲೆಗಳಲ್ಲೇ ಪಡೆಯಬಹುದಾಗಿದೆ.ಈ ಹಿಂದೆ ಪುತ್ತೂರಿನಲ್ಲಿ ಕುಂಬ್ರ ಮತ್ತು ಕೆಯ್ಯೂರು ಸರಕಾರಿ ಹಿ ಪ್ರಾ ಶಾಲೆಗಳನ್ನು ಕೆಪಿಎಸ್ ಸ್ಕೂಲ್‌ಗೆ ಆಯ್ಕೆ ಮಾಡಲಾಗಿತ್ತು. ಇದೀಗ ಇನ್ನೂ ಮೂರು ಶಾಲೆಗಳನ್ನು ಸೇರ್ಪಡೆ ಮಾಡುವುದರ ಜೊತೆಗೆ ಒಟ್ಟು 5 ಶಾಲೆಗಳು ಕೆಪಿಎಸ್ ಮಾದರಿ ಶಾಲೆಯಾಗಿ ಪರಿವರ್ತನೆಯಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಅಶೋಕ್ ರೈ ಪ್ರತಿಕ್ರಿಯಿಸಿ, “ಪ್ರತೀ ಗ್ರಾಮಕ್ಕೆ ಒಂದರಂತೆ ಕೆಪಿಎಸ್ ಸ್ಕೂಲ್ ನೀಡಬೇಕು ಎಂದು ಸರಕಾರಕ್ಕೆ ಈಗಾಗಲೇ ಮನವಿಯನ್ನು ಸಲ್ಲಿಸಿದ್ದೇನೆ. ಗ್ರಾಮಕ್ಕೊಂದು ಕೆಪಿಎಸ್ ಮಾದರಿ ಶಾಲೆಯನ್ನು ನೀಡಿದ್ದಲ್ಲಿ ಪ್ರತೀ ಗ್ರಾಮೀಣ ಮಗುವಿಗೂ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆಯಲು ಸುಲಭವಾಗುತ್ತದೆ. ಮಕ್ಕಳ ಸಂಖ್ಯೆ ತೀರಾ ಕಡಿಮೆ ಇರುವ ಶಾಲೆಗಳನ್ನು ಮುಖ್ಯ ಶಾಲೆಯ ಜೊತೆ ಮರ್ಜಿ ಮಾಡುವ ಕೆಲಸವನ್ನೂ ಸರಕಾರ ಮಾಡಲಿದೆ. ಇದರಿಂದ ಶಾಲೆಯಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಬಹುದಾಗಿದೆ. ಒಂದೇ ಸೂರಿನಡಿ ಎಲ್ಲಾ ಶಿಕ್ಷಣವೂ ದೊರೆಯುವ ಕಾರಣಕ್ಕೆ ಶೈಕ್ಷಣಿಕ ಕ್ರಾಂತಿಯೂ ಉಂಟಾಗಬಹುದು” ಎಂದರು.

ಇದನ್ನೂ ಓದಿ: ಪುತ್ತೂರು | ಆಟೋ ಚಾಲಕನ ಮೇಲೆ ಸಂಚಾರಿ ಪೊಲೀಸರ ದರ್ಪ: ಆಟೋ ಚಾಲಕರ ಯೂನಿಯನ್ ಪ್ರತಿಭಟನೆ

ಬಸ್ ವ್ಯವಸ್ಥೆ ಮಾಡಲಾಗುತ್ತದೆ: ಗ್ರಾಮಕ್ಕೊಂದು ಕೆಪಿಎಸ್ ಮಾದರಿ ಶಾಲೆಯನ್ನು ಪ್ರಾರಂಭಿಸಿ ಅಕ್ಕಪಕ್ಕದ ಊರುಗಳಿಂದ ಮಕ್ಕಳನ್ನು ಶಾಲೆಗೆ ಕರೆತರಲು ಬಸ್ಸಿನ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಈಗಾಗಲೇ ಪುತ್ತೂರಿನ ಒಂದೆರಡು ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆತರಲು ಬಸ್ಸಿನ ವ್ಯವಸ್ಥೆಯನ್ನು ಮಾಡಲಾಗಿದ್ದು ಇದು ಯಶ ಕಂಡಿದೆ. ಮುಂದೆ ಗ್ರಾಮಕ್ಕೊಂದು ಕೆಪಿಎಸ್ ಬಂದಲ್ಲಿ ಇದೇ ರೀತಿಯ ವ್ಯವಸ್ಥೆಯು ಮುಂದುವರೆಯುತ್ತದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ತನ್ನ ಕ್ಷೇತ್ರಕ್ಕೆ ಮೂರು ಕೆಪಿಎಸ್ ಮಾದರಿ ಶಾಲೆಯನ್ನು ಮಂಜೂರು ಮಾಡಿದ್ದಕ್ಕೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರಿಗೆ ಶಾಸಕ ಅಶೋಕ್ ರೈ ಅಭಿನಂದನೆ ಸಲ್ಲಿಸಿದ್ದು, ಬಾಕಿ ಇರುವ ಐದು ಶಾಲೆಗಳನ್ನು ಶೀಘ್ರ ಈ ಪಟ್ಟಿಗೆ ಸೇರಿಸಬೇಕು ಎಂದು ಸಚಿವರಿಗೆ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...