ಪುತ್ತೂರು | ಕೆಎಸ್‌ಆರ್‌ಟಿಸಿ ಬಸ್-ಬೈಕ್ ನಡುವೆ ಢಿಕ್ಕಿ; ತಂದೆ ಸಾವು, ಮಗನ ಸ್ಥಿತಿ ಗಂಭೀರ

Date:

ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ತಂದೆ ಮೃತಪಟ್ಟಿದ್ದು, ಮಗ ಗಂಭೀರ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಕುವೆತ್ತಿಲ ಎಂಬಲ್ಲಿ ಭಾನುವಾರ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಿವಾಸಿ ಅರುಣ್ ಕುಲಾಲ್ ಮೃತಪಟ್ಟವರು. ಅವರ ಪುತ್ರ ಧ್ಯಾನ್ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರಿನಿಂದ ಮಂಗಳೂರಿನ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಎದುರಿನಿಂದ ಆಗಮಿಸುತ್ತಿದ್ದ ಬೈಕ್ ಮುಖಾಮುಖಿಯಾಗಿವೆ. ಢಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಅರುಣ್ ಕುಲಾಲ್ ಕೊನೆಯುಸಿರೆಳೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | 112 ಇ ಆರ್ ಎಸ್ ಎಸ್ ಪೊಲೀಸರ ಸಮಯಪ್ರಜ್ಞೆಯಿಂದ ಉಳಿದ ಬಡಜೀವ

ಅಪಘಾತದ ಪರಿಣಾಮವಾಗಿ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತಿದ್ದವು. ಪುತ್ತೂರು ಸಂಚಾರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...