ಪುತ್ತೂರು | ಅಪಘಾತದಲ್ಲಿ ಗಾಯಗೊಂಡ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ; ಇದೇ ಸೌಹಾರ್ದ ಕರ್ನಾಟಕ

Date:

ಬೈಕ್‌ನಲ್ಲಿ ತೆರಳುವಾಗ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಅರ್ಚಕನನ್ನು ಮುಸ್ಲಿಂ ಮುಖಂಡರು ರಕ್ಷಿಸಿದ್ದು, ಅವರನ್ನು ಸಮೀಪವೇ ಇದ್ದ ಮಸೀದಿಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದಿದೆ. ಮುಸ್ಲಿಂ ಮುಖಂಡರ ಉಪಚಾರವನ್ನು ಹಲವರು ಶ್ಲಾಘಿಸಿದ್ದು, ಇದೇ ಸೌಹಾರ್ದ ಕರ್ನಾಟಕದ ಪರಂಪರೆ ಎಂದಿದ್ದಾರೆ.

ಕೋಮುವಾದಿಗಳ ಪ್ರಯೋಗ ಶಾಲೆ ಎಂಬ ಕುಖ್ಯಾತಿಗೆ ಗುರಿಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂಥದ್ದೊಂದು ಘಟನೆ ನಡೆದಿದ್ದು, ಕರಾವಳಿ ಭಾಗದಲ್ಲಿ ಸೌಹಾರ್ದತೆ, ಸಹಬಾಳ್ವೆ ಇನ್ನೂ ಜೀವಂತವಾಗಿದೆ ಎಂಬುದನ್ನು ತೋರಿಸಿದೆ.

ಪುತ್ತೂರುನ ತಾಲೂಕಿನ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ಘಟನೆ ನಡೆದಿದೆ. ಬಿದ್ದು ಗಾಯಗೊಂಡಿದ್ದ ಅರ್ಚಕ ರಘುರಾಮ್ ಭಟ್ ಅವರಿಗೆ ಮುಸ್ಲಿಂ ಮುಖಂಡರು ಚಿಕಿತ್ಸೆ ನೀಡಿ ಉಪಚರಿಸಿದ್ದಾರೆ. ಮಾನವೀಯತೆ ಮರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಚಕ ರಘುರಾಮ್ ಭಟ್ ಅವರು ನೆಟ್ಟಣಿಗೆ ಮುಡ್ನೂರು ಗ್ರಾಮದ ಮುಂಡ್ಯದಲ್ಲಿರುವ ಶಾಸ್ತಾರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತಿದ್ದರು. ಅವರು ಬೈಕ್‌ನಲ್ಲಿ ತೆರಳುವಾಗ ಕುಂಬ್ರ ಬದ್ರಿಯಾ ಮಸೀದಿಯ ಎದುರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದು ಗಾಯಗೊಂಡಿದ್ದರು. ಅವರ ಕಾಲಿಗೆ ಪೆಟ್ಟು ಬಿದ್ದು, ರಕ್ತಸ್ರಾವ ಆಗುತ್ತಿತ್ತು. ಅವರನ್ನು ಕಂಡ ಮುಸ್ಲಿಂ ಮುಖಂಡರು ತಕ್ಷಣವೇ ಅವರನ್ನು ಮಸೀದಿಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿದ್ದಾರೆ ಬಳಿಕ, ಅವರನ್ನು ಆಟೋ ಚಾಲಕ ಬಶೀರ್ ಕಡ್ತಿಮಾರ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮಸೀದಿಗೆ ಮರಳಿದ ಅರ್ಚಕ, ಮಸೀದಿಯಲ್ಲೇ ಕೆಲ ಗಂಟೆಗಳ ಕಾಲ ವಿಶ್ರಾಂತಿ ಪಡೆದಿದ್ದಾರೆ. ಬಳಿಕ ಅವರನ್ನು ಮುಸ್ಲಿಂ ಮುಖಂಡರು ಮನೆಗೆ ಕಳುಹಿಸಿಕೊಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...