ಪುತ್ತೂರು | ಬಿಜೆಪಿ ನಾಯಕನ ಪುತ್ರನಿಂದ ಅತ್ಯಾಚಾರ–ವಂಚನೆ ಪ್ರಕರಣ; ಡಿಎನ್‌ಎ ವರದಿ ಬೆಳಕಿಗೆ

Date:

ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ, ಅತ್ಯಾಚಾರ ಎಸಗಿ, ಆಕೆ ಗರ್ಭಿಣಿಯಾದ ಬಳಿಕ ವಂಚಿಸಿದ ಪ್ರಕರಣ ಸಂಬಂಧ ಇದೀಗ ಡಿಎನ್ಎ ವರದಿ ಬಹಿರಂಗಗೊಂಡಿದೆ. ಆರೋಪಿಯೇ ಮಗುವಿನ ತಂದೆ ಎಂಬುದನ್ನು ವರದಿ ದೃಢಪಡಿಸಿರುವುದಾಗಿ ವಿಶ್ವಕರ್ಮ ಮಹಾಮಂಡಳ ರಾಜ್ಯಾಧ್ಯಕ್ಷ ಕೆ ಪಿ ನಂಜುಂಡಿ ಅವರು ಶನಿವಾರ ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸಿದರು.

ಪುತ್ತೂರು ನಗರಸಭಾ ಸದಸ್ಯೆ, ಬಿಜೆಪಿ ನಾಯಕ ಪಿ ಜಿ ಜಗನ್ನಿವಾಸರಾವ್ ಅವರ ಪುತ್ರ, ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ. ರಾವ್ ಮಗುವಿನ ತಂದೆ ಎಂಬ ವರದಿಯನ್ನು ಶುಕ್ರವಾರ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ಆತನೇ ಮಗುವಿನ ತಂದೆ ಎಂದು ಸಂತ್ರಸ್ತೆಯ ಕುಟುಂಬಕ್ಕೂ ತಿಳಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಮಹಿಳೆಯರ ವಿರುದ್ಧ ಇಂತಹ ಕೃತ್ಯಗಳು ಗಂಭೀರ ಅನ್ಯಾಯ ಎಂದು ನಂಜುಂಡಿ ಅವರು ಅಭಿಪ್ರಾಯಪಟ್ಟರು.

ಹಿಂದಿನ ಕಾಲದಲ್ಲಿ ಸೀತಾಮಾತೆಗೆ ʼಅಗ್ನಿಪರೀಕ್ಷೆʼ ನಡೆಸುವ ಮೂಲಕ ಸತ್ಯಾಸತ್ಯತೆ ಪತ್ತೆ ಹಚ್ಚಲಾಗಿತ್ತು; ಈಗ ಡಿಎನ್ಎ ಪರೀಕ್ಷೆಯೇ ಅಂತಿಮ ಸತ್ಯವನ್ನು ತೋರಿಸುತ್ತದೆ. ಆರೋಪಿ ಶ್ರೀಕೃಷ್ಣ ಜೆ. ರಾವ್ ಸಂತ್ರಸ್ತೆಯನ್ನು ವಿವಾಹವಾಗಬೇಕು. ಇದು ಇಬ್ಬರಿಗೂ ಅನುಕೂಲ. ಕಾನೂನು ಕ್ರಮಗಳು ನ್ಯಾಯಾಲಯದಲ್ಲಿ ಮುಂದುವರಿಯುತ್ತಲೇ ಇರುತ್ತವೆಯಾದರೂ ಹಿಂದೂ ಸಮಾಜದ ಸಂತ್ರಸ್ತೆಗೆ ನ್ಯಾಯ ದೊರಕಿಸಲು ಆರ್‌ಎಸ್‌ಎಸ್, ಬಜರಂಗ ದಳ ಮತ್ತು ಶ್ರೀರಾಮ ಸೇನೆ ಸೇರಿದಂತೆ ಹಿಂದೂ ಪರ ಸಂಘಟನೆಗಳ ನಾಯಕರೂ ಮುಂದೆ ಬರಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: Breaking News | ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು!

ಈ ಪತ್ರಿಕಾಗೋಷ್ಠಿಯಲ್ಲಿ ಸಂತ್ರಸ್ತೆ, ಆಕೆಯ ತಾಯಿ ನಮಿತಾ ಆಚಾರ್ಯ ಮತ್ತು ವಿಶ್ವಕರ್ಮ ಮಹಾಮಂಡಳದ ಪ್ರಮುಖ ಪ್ರತಿನಿಧಿಗಳು ಹಾಜರಿದ್ದರು.

ಆರೋಪಿ ಕೃಷ್ಣ ಜೆ.ರಾವ್ ಕುಟುಂಬ ಈ ಹಿಂದೆ ಸಂತ್ರಸ್ತೆ ಕುಟುಂಬಕ್ಕೆ ಇಬ್ಬರಿಗೂ ಮದುವೆ ಮಾಡುವ ಭರವಸೆ ನೀಡಿತ್ತು. ಆದರೆ ಹೆರಿಗೆ ಸಮಯ ಬಂದಾಗ ಆರೋಪಿ ಮದುವೆಗೆ ನಿರಾಕರಿಸಿದ್ದೂ ಅಲ್ಲದೇ ಡಿಎನ್ಎ ಟೆಸ್ಟ್ ಮಾಡಿಸುವಂತೆ ಒತ್ತಾಯಿಸಿದ್ದರು. ಇದೀಗ ಡಿಎನ್ಎ ಟೆಸ್ಟ್​​ ಪಾಸಿಟಿವ್ ಬಂದಿದೆ. ಕೃಷ್ಣ ಜೆ.ರಾವ್​​ನಿಂದಲೇ ಸಂತ್ರಸ್ತೆ ಗರ್ಭವತಿಯಾಗಿರುವುದು ಸಾಬೀತಾಗಿದೆ. ಹಾಗಾಗಿ ಕೊಟ್ಟ ಮಾತಿನಂತೆ ಆರೋಪಿ ಕೃಷ್ಣ ಜೆ ರಾವ್‌, ಸಂತ್ರಸ್ತೆಯನ್ನು ವಿವಾಹವಾಗಲೇ ಬೇಕು ಎಂದು ಸಂತ್ರಸ್ತೆ ಪರ ಹೋರಾಟಗಾರರು ಆಗ್ರಹಿಸಿದ್ದಾರೆ.


WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...