ಪುತ್ತೂರು | ಅತ್ಯಾಚಾರ, ವಂಚನೆ ಪ್ರಕರಣ: ಸಂತ್ರಸ್ತೆ ಮಗು, ಆರೋಪಿಯ ಡಿಎನ್ಎ ಪರೀಕ್ಷೆ

Date:

ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ. ರಾವ್ ನಿಂದ ಅತ್ಯಾಚಾರ, ವಂಚನೆಗೆ ಒಳಗಾದ ಸಹಪಾಠಿ ವಿದ್ಯಾರ್ಥಿನಿ ಜನ್ಮ ನೀಡಿರುವ ಮಗುವಿನ ಡಿಎನ್‌ಎ ಪರೀಕ್ಷೆ ನಡೆಸಲು ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆ.

ಮಂಗಳವಾರ ಪುತ್ತೂರಿನ ನ್ಯಾಯಾಲಯದಲ್ಲಿ ಡಿಎನ್‌ಎ ಪರೀಕ್ಷೆಗೆ ಸಂತ್ರಸ್ತೆ ಮಗು ಹಾಗೂ ಆರೋಪಿಯ ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಶ್ರೀಕೃಷ್ಣನನ್ನು ಪೊಲೀಸರು ಮಂಗಳವಾರ ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ಸಂತ್ರಸ್ತೆ, ಆಕೆಯ ಮಗು ಮತ್ತು ಸಂತ್ರಸ್ತೆಯ ತಾಯಿ ಹಾಜರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಗಳೂರು | ಕಡಬ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ

ನ್ಯಾಯಾಧೀಶರ ಸಮ್ಮುಖದಲ್ಲಿ ಪುತ್ತೂರು ಸರ್ಕಾರಿ ಆಸ್ಪತ್ರೆಯ ವೈದ್ಯರ ನೇತೃತ್ವದಲ್ಲಿ ವಿಧಿವಿಜ್ಞಾನ ಇಲಾಖೆಯ ಸಿಬ್ಬಂದಿ ಮೂವರ ರಕ್ತದ ಮಾದರಿಗಳನ್ನು ಪಡೆದುಕೊಂಡಿದ್ದಾರೆ. ಅವುಗಳನ್ನು ಡಿಎನ್‌ಎ ಪರೀಕ್ಷೆಗಾಗಿ ಬೆಂಗಳೂರು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಮಹಿಳಾ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಬಸ್‌ನಲ್ಲಿ ರಕ್ತದ ಮಾದರಿಯನ್ನು ಬೆಂಗಳೂರಿಗೆ ಕೊಂಡೊಯ್ದರು. ಈ ವೇಳೆ ಸಂತ್ರಸ್ತೆಯ ತಾಯಿಯೂ ಪೊಲೀಸ್ ಸಿಬ್ಬಂದಿಯೊಂದಿಗೆ ಬೆಂಗಳೂರಿಗೆ ತೆರಳಿದ್ದಾರೆ ಎಂದು ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

ಒಂದು ವಾರದಲ್ಲಿ ಎಫ್‌ಎಸ್‌ಎಲ್ ವರದಿ ಬರುವ ಸಾಧ್ಯತೆ ಇದೆ. ಈ ಪ್ರಕರಣಕ್ಕೆ ಸಂಬಂಧಿಸಿದ ದೋಷಾರೋಪಣ ಪಟ್ಟಿ ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವುದಾಗಿ ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...