ಸಂಚಾರಿ ಪೊಲೀಸರ ಸೂಚನೆಯನ್ನು ಪಾಲಿಸಲಿಲ್ಲವೆಂಬ ಆರೋಪದ ಹಿನ್ನೆಲೆಯಲ್ಲಿ ಬೆನ್ನಟ್ಟಿಕೊಂಡು ಬಂದು ಆಟೋ ಚಾಲಕನ ಮೈ ಮೇಲೆ ಕೈ ಮಾಡಿ ಅವಾಚ್ಯ ಪದಗಳಿಂದ ಬೈದು ನಿಂದಿಸಿರುವ ಸಂಚಾರಿ ಪೊಲೀಸರ ದರ್ಪಕ್ಕೆ ಸಂಬಂಧಿಸಿದಂತೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಇಂದು ಇಬ್ಬರು ಸಂಚಾರಿ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಆಟೋ ಚಾಲಕರ ಯೂನಿಯನ್ ವತಿಯಿಂದ ಪುತ್ತೂರು ಸರ್ಕಾರಿ ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಪೊಲೀಸರಿಂದ ಹಲ್ಲೆಗೆ ಒಳಗಾದ ಆಟೋ ಚಾಲಕ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಟ್ರಾಫಿಕ್ ಪೊಲೀಸರು ರಿಕ್ಷಾ ಚಾಲಕನೋರ್ವನನ್ನು ಹಿಂಬಾಲಿಸಿ ಬಂದು ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
— eedina.com ಈ ದಿನ.ಕಾಮ್ (@eedinanews) October 18, 2025
ರಿಕ್ಷಾ ಚಾಲಕ ಮಾಡಿರುವ ವೀಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.
ರಿಕ್ಷಾ ಚಾಲಕನಿಗೆ ಹಲ್ಲೆ ಮಾಡಿದ್ದಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವುದು ವೀಡಿಯೋದಲ್ಲಿ… pic.twitter.com/4GZqTAjF56




