ಉಡುಪಿ | ಹಳ್ಳಿಯ ಮಕ್ಕಳಿಗೆ ರಾಷ್ಟ್ರೀಯ ಕಿರೀಟ, ಕ್ಯೂರಿಯಸ್’ ನಾಟಕಕ್ಕೆ ಅತ್ಯುತ್ತಮ ನಾಟಕ ಪ್ರಶಸ್ತಿ

Date:

ಕೋಲ್ಕತ್ತಾದ ಬಿರ್ಲಾ ಇಂಡಸ್ಟ್ರಿಯಲ್ ಮತ್ತು ಟೆಕ್ನಾಲಾಜಿಕಲ್ ಮ್ಯೂಸಿಯಂನಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ವಿಜ್ಞಾನ ನಾಟಕೋತ್ಸವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸರ್ಕಾರಿ ಕೆ.ಪಿ.ಎಸ್. ಕೊಕ್ಕರ್ಣೆ ಹೈಸ್ಕೂಲ್ ವಿದ್ಯಾರ್ಥಿಗಳು ಅಭಿನಯಿಸಿದ ‘ಕ್ಯೂರಿಯಸ್’ ನಾಟಕವು ಅತ್ಯುತ್ತಮ ನಾಟಕ ಪ್ರಶಸ್ತಿ ಪಡೆದು ಎಲ್ಲರ ಗಮನ ಸೆಳೆದಿದೆ.

ಈ ನಾಟಕವು ಪ್ರಶಸ್ತಿ ಪದಕದೊಂದಿಗೆ ರೂ 10,000 ನಗದು ಬಹುಮಾನ*ವನ್ನು ತನ್ನದಾಗಿಸಿಕೊಂಡಿದೆ. ಶಿಕ್ಷಕ ವರದರಾಜ್ ಬಿರ್ತಿ ಅವರು ರಚಿಸಿದ ಈ ನಾಟಕಕ್ಕೆ ಶ್ರೇಷ್ಠ ನಿರ್ದೇಶಕ ಪ್ರಶಸ್ತಿಯನ್ನು ರೋಹಿತ್ ಎಸ್. ಬೈಕಾಡಿ ಅವರು ಪಡೆದಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ಗೆಲುವು ಸಾಧಿಸಿ, ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಪಡೆದು, ದಕ್ಷಿಣ ಭಾರತ ವಿಭಾಗ ಮಟ್ಟದಲ್ಲೂ ವಿಜಯಿಯಾಗಿದ್ದ ಈ ತಂಡ, ರಾಷ್ಟ್ರಮಟ್ಟದಲ್ಲಿ ದೇಶದ ವಿವಿಧ ಭಾಗಗಳಿಂದ ಬಂದ ತಂಡಗಳ ಮಧ್ಯೆ ನಡೆದ ಅಂತಿಮ ಸ್ಪರ್ಧೆಯಲ್ಲಿ ಖಾಸಗಿ ಶಾಲೆಗಳನ್ನೂ ಮೀರಿಸಿ ಶ್ರೇಷ್ಠತೆಯನ್ನು ಪ್ರದರ್ಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಶಸ್ತಿ ಪಡೆದ ನಾಟಕದಲ್ಲಿ ಪೌರ್ಣಮಿ, ಪಂಚಮಿ, ಶ್ರಾವ್ಯ, ಶ್ರಾವ್ಯ ಸುಂದರ ಪೂಜಾರಿ, ನವಮಿ, ಭವೀಶ್ ಎಂ. ಶೆಟ್ಟಿ, ಸ್ವಸ್ತಿಕ್, ಸೌಜನ್ಯರವರು ಅಭಿನಯಿಸಿದ್ದಾರೆ.

ಕೋಲ್ಕತ್ತಾದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿರ್ದೇಶಕ ರೋಹಿತ್ ಬೈಕಾಡಿ, ಶಿಕ್ಷಕರಾದ ವರದರಾಜ್ ಬಿರ್ತಿ, ಹರೀಶ್ ಕುಮಾರ್, ಶಿಕ್ಷಕಿ ಸುಪ್ರೀತ ಕೆ, ಹಾಗೂ ಪೋಷಕರ ಪರವಾಗಿ ನಂದಿನಿಯವರು ಭಾಗವಹಿಸಿದ್ದರು.

ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲಾ ಮಕ್ಕಳು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿರುವುದು ಶಿಕ್ಷಣ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿದ್ದು, ಜಿಲ್ಲೆಯ ಗೌರವವನ್ನು ಹೆಚ್ಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...