ಉಡುಪಿ | ವಿಜ್ಞಾನ ನಾಟಕ ‘ಕ್ಯೂರಿಯಸ್’ ರಾಜ್ಯಮಟ್ಟಕ್ಕೆ ಆಯ್ಕೆ

Date:

ಮೈಸೂರು ವಿಭಾಗ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ವಲಯದ ಕೆ.ಪಿ.ಎಸ್. ಕೊಕ್ಕರ್ಣೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಅಭಿನಯಿಸಿದ ‘ಕ್ಯೂರಿಯಸ್’ ಎಂಬ ನಾಟಕವು ಪ್ರಥಮ ಶ್ರೇಷ್ಠ ನಾಟಕ ಪ್ರಶಸ್ತಿಯನ್ನು ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ.

ವಿಜ್ಞಾನ ತತ್ವ ಮತ್ತು ಸಮಾಜದ ನಡುವಿನ ಸಂಬಂಧವನ್ನು ಮನೋರಂಜನಾತ್ಮಕ ಶೈಲಿಯಲ್ಲಿ ಚಿತ್ರಿಸಿರುವ ಈ ನಾಟಕವನ್ನು ವರದರಾಜ್ ಬಿರ್ತಿ ಅವರು ರಚಿಸಿದ್ದು, ರೋಹಿತ್ ಎಸ್. ಬೈಕಾಡಿ ಅವರು ನಾಟಕಕ್ಕೆ ಶ್ರೇಷ್ಠ ನಿರ್ದೇಶಕ ಪ್ರಶಸ್ತಿಯನ್ನೂ ಪಡೆದಿದ್ದಾರೆ. ವಿದ್ಯಾರ್ಥಿಗಳ ವೈಜ್ಞಾನಿಕ ಚಿಂತನೆ ಹಾಗೂ ಅಭಿನಯ ಕೌಶಲ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವ ಈ ತಂಡಕ್ಕೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಮತ್ತು ಸ್ಥಳೀಯರು ಶುಭಹಾರೈಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...