ರಾಯಚೂರು | ದೀಪಾವಳಿ ಬಂದರೂ ನಗರದ ಬೀದಿ ದೀಪಗಳಿಗೆ ಇನ್ನೂ ಬಂದಿಲ್ಲ ‘ಬೆಳಕು’

Date:

ನಾಡಿನಾದ್ಯಂತ ದೀಪಾವಳಿ ಆಚರಿಸಲಾಗುತ್ತಿದೆ. ಆದರೆ, ರಾಯಚೂರು ನಗರದ ಪ್ರಮುಖ ರಸ್ತೆಗಳಲ್ಲಿರುವ ಬೀದಿದೀಪಗಳಿಗೆ ಕೂಡ ಬೆಳಕು ಹರಿಸುವ ಭಾಗ್ಯ ದೊರಕಿಲ್ಲ.

ಬೀದಿಗಳಲ್ಲಿ ವಿದ್ಯುತ್ ಕಂಬಗಳಿದ್ದರು ಕೂಡ ಇಲ್ಲದೆ ಸಾರ್ವಜನಿಕರು ಕತ್ತಲೆಯಲ್ಲಿ ಓಡಾಡುವಂತಹ ಪರಿಸ್ಥಿತಿ ಇದೆ. ಬೆಳಕಿನ ವ್ಯವಸ್ಥೆ ಕಲ್ಪಿಸಬೇಕಾದ ನಗರಸಭೆಯ ಅಧಿಕಾರಿಗಳು ಈ ಬಗ್ಗೆ ಗಮನಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ದೀಪಾವಳಿಗೆ ದೀಪವಿಲ್ಲದೆ ಕತ್ತಲಲ್ಲಿ ನಗರವಾಗಿದೆ ಎಂಬುದು ನಗರದ ನಿವಾಸಿಗಳು, ವಾಹನ ಚಾಲಕರು ಶಾಪ ಹಾಕುತ್ತಿದ್ದಾರೆ.

ನಗರದ ಪ್ರಮುಖ ರಸ್ತೆಯಲ್ಲಿ ವಿದ್ಯುತ್‌ ಕಂಬಗಳಿದ್ದರೂ ಬೆಳಕಿನ ವ್ಯವಸ್ಥೆ ಇಲ್ಲ. ಹೆಸರಿಗೆ ಮಾತ್ರ ಕಂಬಗಳಿವೆ. ಇದನ್ನು ಕಂಡರೂ ನಗರಸಭೆ ಅಧಿಕಾರಿಗಳು ದುರಸ್ತಿಗೆ ಮುಂದಾಗುತ್ತಿಲ್ಲ ಎಂಬುದು ಸಾರ್ವಜನಿಕರ ದೂರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರದ ಪ್ರವಾಸಿ ಮಂದಿರ ರಸ್ತೆಯಲ್ಲಿರುವ ವಿದ್ಯುತ್ ಕಂಬಗಳಿಗೆ ಅಲ್ಲೊಂದು ಇಲ್ಲೊಂದು ಬೀದಿ ದೀಪಗಳು ಬೆಳಗುತ್ತವೆ. ಹಗಲು-ರಾತ್ರಿ ಬೀಡಾಡಿ ದನಗಳು ಈ ರಸ್ತೆಯಲ್ಲಿ ಓಡಾಡುತ್ತಾ ಇರುತ್ತವೆ. ಸ್ವಲ್ಪ ಅಜಾಗರೂಕತೆಯಾದರೂ ವಾಹನ ಸವಾರರು ಅಪಘಾತಕ್ಕೀಡಾಗುವುದು ಖಚಿತ.

ಹಿರಿಯ ನಾಗರಿಕರು, ಮಕ್ಕಳು ರಾತ್ರಿ ವೇಳೆ ಮನೆಯಿಂದ ಹೊರ ಬರಲು ಹಿಂದೇಟು ಹಾಕುತ್ತಾರೆ. ಬೀದಿ ದೀಪ ನಿರ್ವಹಣೆಗೆ ನಗರಸಭೆಗೆ ಪ್ರತ್ಯೇಕ ಅನುದಾನ ಇಲ್ಲ. ಹೀಗಾಗಿ ದುರಸ್ತಿ ಭಾಗ್ಯ ಸಿಗುತ್ತಿಲ್ಲ ಎಂಬ ವಿಚಾರ ಕೂಡ ತಿಳಿದುಬಂದಿದೆ.

ಈ ಸಮಸ್ಯೆಯ ಬಗ್ಗೆ ಮಾತನಾಡಿರುವ ಸಾಮಾಜಿಕ ಕಾರ್ಯಕರ್ತ ಅಝೀಝ್ ಜಾಗೀರದಾರ್, “ಬೀಡಾಡಿ ದನಗಳು ಇಡೀ ರಾತ್ರಿಯಲ್ಲೇ ಮಲಗಿರುತ್ತವೆ. ಸ್ವಲ್ಪ ಜಾಗರೂಕತೆ ತಪ್ಪಿದ್ದರೆ ದೊಡ್ಡ ಅನಾಹುತಗಳು ಸಂಭವಿಸಲಿದೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ? ವಕ್ಫ್‌ ಆಸ್ತಿ | ರೈತರಿಗೆ ನೋಟಿಸ್ ಕೊಟ್ಟಿದ್ದರೆ ತಕ್ಷಣ ವಾಪಸ್‌: ಸಚಿವ ಜಮೀರ್

“ವಿದ್ಯುತ್ ಕಂಬಗಳಿಗೆ ಬೆಳಕು ಇಲ್ಲದೆ ಕತ್ತಲಲ್ಲಿ ಓಡಾಡುವ ಪರಿಸ್ಥಿತಿಯಿದೆ. ವಿದ್ಯುತ್ ಕಂಬಗಳಿಗೆ ಬೆಳಕು ಹೋಗುವುದು ಬರೋದು ಚಾಲ್ತಿ ಇರುತ್ತದೆ. ನಗರಸಭೆಯ ಅಧಿಕಾರಿಗಳು ನಗರದ ಬಗ್ಗೆ ತಮಗೆ ಸಂಬಂಧವಿಲ್ಲದಂತೆ ಇದ್ದಾರೆ .ಇದಕ್ಕೆ ಗಮನ ಹರಿಸಿ ಕಾರ್ಯನಿವಹಿಸಬೇಕು. ಏನಾದರೂ ಅಹಿತಕರ ಘಟನೆ ಸಂಭವಿಸಿದರೆ ನಗರಸಭೆಯೇ ನೇರ ಕಾರಣ ಎಂದು ಹೇಳಿದರು.

WhatsApp Image 2024 11 01 at 1.11.13 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...