ರಾಯಚೂರು | ʼಸಂವಿಧಾನ ಸಮರ್ಪಣೆಯೊಂದಿಗೆ ಪ್ರತಿಯೊಬ್ಬ ವ್ಯಕ್ತಿಗೂ ಸಮಾನತೆ ದೊರಕಿದ ದಿನʼ

Date:

ದೇಶಕ್ಕೆ ಸಂವಿಧಾನ ಸಮರ್ಪಣೆಯೊಂದಿಗೆ ಪ್ರತಿಯೊಬ್ಬ ವ್ಯಕ್ತಿಗೂ ಸಮಾನತೆ ದೊರಕಿದ ದಿನವೆಂದು ವೈಧ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿಸಚಿವ ಡಾ. ಶರಣಪ್ರಕಾಶ್‌ ಪಾಟೀಲ್ ಹೇಳಿದರು.

ರಾಯಚೂರು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿದ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಜಗತ್ತಿನ ವಿವಿಧ ದೇಶಗಳಿಗೆ ತೆರಳಿ ಅಲ್ಲಿಯ ಸಂವಿಧಾನ ಅಧ್ಯಯನ ನಡೆಸಿದ ಡಾ. ಬಿ.ಆರ್. ಅಂಬೇಡ್ಕರ್ ದೇಶದ ವೈವಿಧ್ಯತೆ, ವಿವಿಧ ಭಾಷೆ, ಸಂಸ್ಕೃತಿಗಳುಳ್ಳ ದೇಶಕ್ಕೆ ವಿಶ್ವವೇ ಬೆರಗಾಗುವ ಸಂವಿಧಾನ ರಚಿಸಿ ಕೊಟ್ಟಿದ್ದಾರೆ.

ವಿವಿಧ ರಾಜರು, ಬ್ರಿಟಿಷರು ದೇಶವನ್ನಾಳಿದರು. ಪ್ರತಿಯೊಬ್ಬ ವ್ಯಕ್ತಿಯೂ ಸಂವಿಧಾನದ ಮೂಲಕ ಸ್ವಾತಂತ್ರ್ಯ, ಸಮಾನತೆಯನ್ನು ಒದಗಿಸಿಕೊಡುವ ಮೂಲಕ ಸ್ಮರಣೀಯರಾಗಿದ್ದಾರೆ. ಸಂವಿಧಾನವನ್ನು ಎಲ್ಲರೂ ಒಪ್ಪದೇ ಇದ್ದರೂ ಪ್ರತಿಯೊಂದು ಶಬ್ದಕ್ಕೂ ಅರ್ಥವನ್ನು ನೀಡುವ ಮೂಲಕ ಬಾಬಾಸಾಹೇಬರು ದೇಶದ ಪ್ರಗತಿಯ ಬುನಾದಿಯನ್ನುಹಾಕಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ ದೂರದೃಷ್ಟಿಯಿಂದ ಸಂವಿಧಾನದಲ್ಲಿಯೇ ಹಿಂದುಳಿದ ಪ್ರದೇಶದ ಅಭಿವೃದ್ದಿಗೆ ವಿಶೇಷ ಸ್ಥಾನ ಮಾನ ಒದಗಿಸುವ ಕೆಲಸ ಮಾಡಿದ್ದಾರೆ. 371ಕಲಂನಲ್ಲಿ ಅವಕಾಶ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಲ್ಲಿಕಾರ್ಜುನ ಖರ್ಗೆಯವರ ಪ್ರಯತ್ನದ ಫಲವಾಗಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 371(ಜೆ) ದೊರಕಿದೆ. ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳ ಮಕ್ಕಳಿಗೆ ಶಿಕ್ಷಕರು 371(ಜೆ) ವಿಶೇಷ ಕಾಯ್ದೆ ಕುರಿತು ಮಾಹಿತಿ ನೀಡಬೇಕಿದೆ. ಶೈಕ್ಷಣಿಕ ಮತ್ತು ಉದ್ಯೋಗ ಮೀಸಲಾತಿ ನೀಡಿದ್ದರಿಂದ ಪ್ರತೀ ವರ್ಷ 900 ವೈದ್ಯಕೀಯ,  ಸಾವಿರಾರು ಇಂಜಿನಿಯಿರಿಂಗ್ ಅಭ್ಯಾಸ ಮಾಡಲು ಈ ಭಾಗದ ವಿದ್ಯಾರ್ಥಿಗಳಿಗೆ ಅವಕಾಶ ದೊರೆತಂತಾಗಿದೆ.

ಸಿದ್ದರಾಮಯ್ಯ ನೇತೃತ್ವದಲ್ಲಿ 30 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವ ಕೆಲಸವಾಗಿದೆ. ಈ ಬಾರಿ ಖಾಲಿಯಿರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡುವ ಸಂಕಲ್ಪ ಮಾಡಿ ಐದು ವರ್ಷದ ಅವಧಿಯಲ್ಲಿ 50 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದರು.

ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಗೆ ಐದು ಸಾವಿರ ಕೋಟಿ ರೂ. ಅನುದಾನ ಘೋಷಿಸಲಾಗಿದೆ. ಅಲ್ಲದೇ ಜನರಿಗೆ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ನುಡಿದದಂತೆ ನಡೆದಿದ್ದೇವೆ ಎಂದರು.

ರಾಯಚೂರಿನಲ್ಲಿಯೇ ಏಮ್ಸ್ ಸ್ಥಾಪನೆಗೆ ಕೇಂದ್ರಕ್ಕೆ ನಿಯೋಗ ತೆರಳಿ ಮನವಿಮಾಡಲಾಗಿದೆ. ಎಲ್ಲಾ ರಾಜ್ಯಗಳಿಗೆ ಏಮ್ಸ್ ನೀಡಲಾಗಿದ್ದು, ಈ ಬಾರಿ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಬೇಕೆಂದರು. ವಿಮಾನ ನಿಲ್ದಾಣಕ್ಕೆ ಪರಿಸರ ಇಲಾಖೆ ಅನುಮತಿ ಪಡೆಯುವ ಕೆಲಸ ನಡೆಯುತ್ತಿದೆ. ತುಂಗಭದ್ರ ಎಡದಂಡೆ ಕಾಲುವೆ ಕೊನೆಭಾಗಕ್ಕೆ ನೀರು ಒದಗಿಸಲ ನವಲಿ ಜಲಾಶಯ ನಿರ್ಮಾಣ ಕಾರ್ಯಕ್ಕೆ ಉಪ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರ ಕಾರ್ಯಪ್ರವೃತ್ತರಾಗಿದ್ದಾರೆ. ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಬರುವ ಜನರಿಗೆ ಅನಗತ್ಯ ವಿಳಂಭ ಮಾಡದೇ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಿದರು.

ವಿವಿಧ ತಂಡಗಳಿಂದ ಗೌರವವಂಧನೆ ಸ್ವೀಕರಿಸಿದ ಸಚಿವರು, ಆರೋಗ್ಯ ಇಲಾಖೆಯಿಂದ ನೀಡಲಾಗುವ ಆಯುಷ್ಮಾನ ಭಾರತ ಯೋಜನೆ ಯಶಸ್ವಿಗೆ ಶ್ರಮಿಸಿದ ವೈದ್ಯರನ್ನು ಸನ್ಮಾನಿಸಿಗೌರವಿಸಿದರು. ಪಥ ಸಂಚಲನದಲ್ಲಿ ಪ್ರಥಮ ಸ್ಥಾನ ಪಡೆದ ಜಹೀರಬಾದ ಸರ್ಕಾರಿ ಪ್ರೌಢಶಾಲೆ ಗೈಡ್ಸ್ ತಂಡಕ್ಕೆ ಐದು ಸಾವಿರ ರೂ.ನಗದು ಬಹುಮಾನ ನೀಡಿದರು. ದ್ವಿತೀಯ ಬಹುಮಾನ ಪೊಲೀಸ್ ಕಾಲೋನಿಯ ಭಾರತ ಸೇವಾ ದಳ ಮತ್ತು ತೃತೀಯ ಸ್ಥಾನವನ್ನು ಸಿಯಾತಲಾಬ್ ಸರ್ಕಾರಿ ಪ್ರೌಢಶಾಲೆ ಗೈಡ್ಸ್ ತಂಡಕ್ಕೆ ನೀಡಲಾಯಿತು. ವಿವಿಧ ಶಾಲಾ ಮಕ್ಕಳು ಆಕರ್ಷಕ ಸಾಮೂಹಿಕ ನೃತ್ಯ ಮಾಡಿದರು.

ವೇದಿಕೆಯಲ್ಲಿ ಗ್ರಾಮೀಣ ಶಾಸಕ ದದ್ದಲ ಬಸನಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಬಸವರಾಜ ಪಾಟೀಲ್ ಇಟಗಿ, ಎ. ವಸಂತಕುಮಾರ, ಕೆ.ಶಾಂತಪ್ಪ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ, ಉಪಾಧ್ಯಕ್ಷ ಬಷೀರುದ್ದೀನ್, ಜಿಲ್ಲಾಧಿಕಾರಿ ಚಂದ್ರಶೇಖರನಾಯಕ, ಜಿ.ಪಂ ಸಿಇಒ ರಾಹುಲ ತುಕಾರಂ ಪಾಂಡ್ವೆ, ಎಸ್‌ಪಿ ನಿಖಿಲ್, ಎಡಿಸಿ ದುರಗೇಶ, ಎಸಿ ಮಹಿಬೂಬಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಮುಖಂಡರುಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...