ರಾಯಚೂರು | ಸರ್ಕಾರಿ ಜಾಗದಲ್ಲಿ ಸಾಗುವಳಿ ಮಾಡುತ್ತಿದ್ದ ಭೂರಹಿತರನ್ನು ಒಕ್ಕಲೆಬ್ಬಿಸದಂತೆ ಆಗ್ರಹ

Date:

ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಬಡ ರೈತರನ್ನು ಒಕ್ಕಲೆಬ್ಬಿಸದೆ, ಅವರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಂಘಟನೆ ನೇತೃತ್ವದಲ್ಲಿ ರೈತರು ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ಸರ್ವೆ ನಂ.297/2, 955ರಲ್ಲಿರುವ ಸರ್ಕಾರಿ ಭೂಮಿಯಲ್ಲಿ ಸುಮಾರು ವರ್ಷಗಳಿಂದ ಆರು ಮಂದಿ ಭೂಹೀನ ಬಡವರು ಸಾಗುವಳಿ ಮಾಡುತ್ತಿದ್ದಾರೆ. ಅವರಿಂದ ಭೂಮಿಯನ್ನು ಕಸಿದುಕೊಳ್ಳಲು ಕೆಲವರು ಯತ್ನಿಸುತ್ತಿದ್ದಾರೆ. ಸರ್ಕಾರಿ ಭೂಮಿಯಲ್ಲಿ ಬಿತ್ತನೆ ಮಾಡಿದ ಹತ್ತಿ ಬೆಳೆಯನ್ನು ನಾಶ ಮಾಡಲಾಗಿದೆ. ದಬ್ಬಾಳಿಕೆಗೆ ತುತ್ತಾಗಿರುವ ರೈತರಿಗೆ ಕೂಡಲೇ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

“ಕುರ್ಡಿ ಗ್ರಾಮದಲ್ಲಿ ಸಿದ್ದಪ್ಪ ಎಂಬುವವರು ತಹಸೀಲ್ದಾರರ ಆದೇಶ ಸಿಕ್ಕಿದೆ ಎಂದು ಸುಳ್ಳು ಪ್ರಚಾರ ಮಾಡಿ ಭೂಹೀನ ಬಡವರು ಬಿತ್ತನೆ ಮಾಡಿದ ಹತ್ತಿ ಬೆಳೆಯನ್ನು ನಾಶಪಡಿಸಿದ್ದಾರೆ. ಹೀಗಾಗಿ ಭೂಹೀನ ಬಡವರು ಕಣ್ಣೀರುವಂತಾಗಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ 30-40 ವರ್ಷಗಳಿಂದ ಸರ್ಕಾರಿ ಭೂಮಿಯನ್ನು ಬಡಜನರು ಸಾಗುವಳಿ ಮಾಡುತ್ತಾ ಬಂದಿದ್ದು, ಪಟ್ಟಕ್ಕಾಗಿ ಅರ್ಜಿ ಸಲ್ಲಿಸಿದರೂ ಇದುವರೆಗೂ ಪಟ್ಟಾ ನೀಡಿಲ್ಲ. ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುವ ಬಡವರಿಗೆ ಕಾನೂನಾತ್ಮಕ ರಕ್ಷಣೆ ನೀಡಿ, ಬಡವರ ಪಾಲಿನ ಭೂಮಿ ಸಂರಕ್ಷಣೆಗೆ ಮುಂದಾಗಬೇಕು” ಎಂದು ಒತ್ತಾಯಿಸಿದ್ದಾರೆ.

“ಭೂಹೀನ ಬಡವರು ತಮ್ಮ ಜೀವನಕ್ಕಾಗಿ ಸರ್ಕಾರದ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವುದರಿಂದ ಯಾವುದೇ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುವುದಿಲ್ಲ. ಬಡವರು ಸಾಗುವಳಿ ಮಾಡುವ ತುಂಡು ಭೂಮಿಯನ್ನು ಕಾನೂನುಬಾಹೀರವಾಗಿ ಕೈವಶ ಮಾಡಿಕೊಳ್ಳುವುದು ನ್ಯಾಯಸಮ್ಮತವಲ್ಲ. ಬಡವರು ಸರ್ಕಾರಿ ಭೂಮಿಯಲ್ಲಿ ಬಿತ್ತನೆ ಮಾಡಿರುವುದನ್ನು ಅಕ್ರಮವಾಗಿ ನಾಶ ಮಾಡಿದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು. ಸರ್ಕಾರಿ ಭೂಮಿ ಸಾಗುವಳಿದಾರರನ್ನು ಒಕ್ಕಲೆಬ್ಬಿಸದಂತೆ ಸೂಕ್ತ ರಕ್ಷಣೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಂಘಟನೆ ರಾಜ್ಯಾಧ್ಯಕ್ಷ ಬಿ.ಬಸವಲಿಂಗಪ್ಪ, ತಾಲ್ಲೂಕ ಅಧ್ಯಕ್ಷ ವಿ.ಮುದುಕಪ್ಪ ನಾಯಕ, ಉಪಾಧ್ಯಕ್ಷ ಆನಂದಪ್ಪ ಬೋವಿ, ಸದಸ್ಯರಾದ ಯಲ್ಲಪ್ಪ ನಾಯಕ ಕುರ್ಡಿ, ಅಮರೇಶಪ್ಪ ಚೀಕಲಪರ್ವಿ ಸೇರಿದಂತೆ ಅನೇಕರಿದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...