ರಾಯಚೂರು | ರಸ್ತೆ ಅಪಘಾತ; 4 ವರ್ಷದಲ್ಲಿ 1,184 ಮಂದಿ ಸಾವು

Date:

ರಾಯಚೂರು ಜಿಲ್ಲೆಯಲ್ಲಿ ಕಳೆದ ಮೂರೂವರೆ ವರ್ಷದಲ್ಲಿ ಸಂಭವಿಸಿರುವ ಅಪಘಾತಗಳಲ್ಲಿ ಒಟ್ಟು 1,184 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಯಚೂರು ಜಿಲ್ಲಾಡಳಿತ ಹೇಳಿದೆ.

ವಾಹನ ಸವಾರರು ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸದೇ ಇರುವುದು, ಸಂಚಾರ ನಿಯಮಗಳ ಉಲ್ಲಂಘನೆಗಳೇ ರಸ್ತೆ ಅಪಘಾತಕ್ಕೆ ಕಾರಣಎಂದು ಪೊಲೀಸರು ಹೇಳುತ್ತಿದ್ದಾರೆ. ಆದಾಗ್ಯೂ, ರಸ್ತೆಗಳು ಹಾಳಾಗಿರುವ ಕಾರಣದಿಂದಲೇ ಹೆಚ್ಚು ಅಪಘಾತಗಳು ಸಂಭವಿಸಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಕಳೆದ ಮೂರೂವರೆ ವರ್ಷಗಳಿಗೆ ಹೋಲಿಸಿದರೆ, 2021ರಲ್ಲಿಯೇ ಹೆಚ್ಚು ಅಪಘಾತಗಳು ಸಂಭವಿಸಿವೆ. ಆ ವರ್ಷ, ಗರಿಷ್ಠ 335 ಮಂದಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇನ್ನು, 2022ರಲ್ಲಿ 330 ಮಂದಿ ಅಪಘಾತಗಳಿಗೆ ಬಲಿಯಾಗಿದ್ದಾರೆ. 2023ರಲ್ಲಿ 279 ಮಂದಿ ಸಾವನ್ನಪ್ಪಿದ್ದರೆ, ಈ ವರ್ಷದ 10 ತಿಂಗಳಲ್ಲಿ 240 ಮಂದಿ ಅಪಘಾತದಲ್ಲಿ ಜೀವ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2021ರಿಂದ 2024 ಅಕ್ಟೋಬರ್‌ವರೆಗೆ ಒಟ್ಟು 2,509 ರಸ್ತೆ ಅಪಘಾತಗಳು ಸಂಭವಿಸಿವೆ. ಪರಿಣಾಮ, ಒಟ್ಟು 1,184 ಮಂದಿ ಮೃತಪಟ್ಟಿದ್ದಾರೆ. ಅಲ್ಲದೆ, 3,365 ಮಂದಿ ಗಾಯಗೊಂಡಿದ್ದಾರೆ. ಬಹುತೇಕ ಪ್ರಕರಣಗಳಲ್ಲಿ ಚಾಲಕರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವಾಗಿದೆ. ಸಂಚಾರ ನಿಯಮ ಹಾಗೂ ರಸ್ತೆ ಸುರಕ್ಷತೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ” ಎಂದು ರಾಯಚೂರು ಎಸ್‌ಪಿ ಎಂ ಪುಟ್ಟಮಾದಯ್ಯ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...