ರಾಯಚೂರು | ನಗರಸಭೆ 16 ಲಕ್ಷ ರೂ. ಬಾಕಿ ಉಳಿಸಿಕೊಂಡಿದೆ: ರವೀಂದ್ರ ಜಲ್ದಾರ್ ಆರೋಪ

Date:

ರಾಯಚೂರಿನ ಈರಣ್ಣ ವೃತ್ತದಲ್ಲಿ ನಡೆಯುತ್ತಿದ್ದ ತರಕಾರಿ ಮಾರುಕಟ್ಟೆಯನ್ನು ಯಾರದ್ದೋ ಪ್ರಭಾವಕ್ಕೆ ಒಳಗಾಗಿ ಜಿಲ್ಲಾಧಿಕಾರಿ ಸ್ಥಳಾಂತರಿಸಿದ್ದಾರೆ. ಅಧಿಕೃತ ಟೆಂಡರ್‌ ಕರೆದು ಈರಣ್ಣ ವೃತ್ತದಲ್ಲಿ ಮಾರುಕಟ್ಟೆ ನಡೆಸಲಾಗುತ್ತಿತ್ತು. ಈಗ ಮಾರುಕಟ್ಟೆ ಸ್ಥಳಾಂತರವಾಗಿದೆ. ಅಲ್ಲದೆ, ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘಕ್ಕೆ ಕೊಡಬೇಕಾದ 16 ಲಕ್ಷ ರೂ.ಗಳನ್ನು ನಗರಸಭೆ ಬಾಕಿ ಉಳಿಸಿಕೊಂಡಿದೆ ಎಂದು ಬಿಜೆಪಿ ಮುಖಂಡ ರವೀಂದ್ರ ಜಲ್ದಾರ ಆರೋಪಿಸಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಕೊರೊನಾ ಸಂದರ್ಭದಲ್ಲಿ ಈರಣ್ಣ ವೃತ್ತದಲ್ಲಿ ತರಕಾರಿ ಮಾರಾಟ ಪ್ರಾರಂಭಿಸಲಾಗಿತ್ತು. ಆಗಿನಿಂದಲೂ ಯಾವುದೇ ರಸ್ತೆ ಅಪಘಾತ ಸಂಭವಿಸಿಲ್ಲ. ಜನರಿಗೆ ತೊಂದರೆಯೂ ಆಗಿಲ್ಲ. ವ್ಯಾಪಾರ ಬೆಳಿಗಿನ ಜಾವ ಪ್ರಾರಂಭವಾಗಿ 9 ಗಂಟೆ ವೇಳೆಗೆ ಸ್ಥಗಿತಗೊಳ್ಳುತ್ತಿತ್ತು. ಆದರೆ, ನಗರಸಭೆಯೇ ಟೆಂಡರ್ ಕರೆದು ಅಧಿಕೃತವಾಗಿ ಮಾರಾಟಕ್ಕೆ ಅವಕಾಶ ನೀಡಿತ್ತು. ಇದೀಗ, ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಏಕಾಏಕಿ ಮಾರುಕಟ್ಟೆಯನ್ನು ನಗರಸಬೆ ತೆರವುಗೊಳಿಸಿದೆ” ಎಂದು ಆರೋಪಿಸಿದ್ದಾರೆ.

“ಜಿಲ್ಲಾಡಳಿತದ ನಿರ್ಧಾರದಿಂದ ವ್ಯಾಪಾರಿಗಳು ಬೀದಿಗೆ ಬರುವಂತಾಗಿದೆ. ತರಕಾರಿ ಮಾರಾಟಗಾರರ ಸಂಘದ ಅಧ್ಯಕ್ಷ ಎಂದು ಹೇಳಿಕೊಂಡು ಎನ್ ಮಹಾವೀರ ಎಂಬವರು ನಗರಸಭೆ ಆದಾಯಖೋತಾ ಆಗುವಂತೆ ಮಾಡಿದ್ದಾರೆ. 2019 ರಿಂದ ಉಸ್ಮಾನಿಯಾ ತರಕಾರಿ ಮಾರುಕಟ್ಟೆಯಲ್ಲಿ ಅಂಗಡಿಗಳ ಬಾಡಿಗೆ ಹಣ ಸೇರಿ, 16 ಲಕ್ಷ ರೂ.ಗಳನ್ನು ನಗರಸಭೆ ಪಾವತಿಸಿಲ್ಲ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈರಣ್ಣ ವೃತದಲ್ಲಿಯೇ ತರಕಾರಿ ಮಾರಾಟಕ್ಕೆ ಅವಕಾಶ ನೀಡಲು ನ್ಯಾಯಾಲಯದ ಮೊರೆ ಹೋಗಲಾಗಿದದೆ. ನ್ಯಾಯಾಲಯ ಆದೇಶದ ನಂತರ ತರಕಾರಿ ಮಾರಾಟ ಪ್ರಾರಂಭಿಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಸದಸ್ಯ ಸಾಜೀದ್ ಸಮೀರ್, ಶಂಕರರೆಡ್ಡಿ, ಅಲಂಪಾಷಾ, ಜಾನಕಿರಾಮ್, ವೆಂಕಪ್ಪ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...