ರಾಯಚೂರು | ಕಲುಷಿತ ನೀರು ಕುಡಿದು 30 ಮಂದಿ ಅಸ್ವಸ್ಥ

Date:

ನಾನಾ ಸಮಸ್ಯೆಗಳಿಂದಾಗಿ ರಾಯಚೂರು ಆಗಾಗ್ಗೆ ಸುದ್ದಿಯಾಗುತ್ತಿದೆ. ಇತ್ತೀಚೆಗೆ ರಾಯಚೂರು ನಗರದಲ್ಲಿ ನಗರಸಭೆಯಿಂದ ಪೂರೈಕೆಯಾಗುತ್ತಿದ್ದ ನೀರು ಕುಡಿದು ಹಲವಾರು ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದರು, ಕೆಲವರು ಪ್ರಾಣವನ್ನೇ ಕಳೆದುಕೊಂಡರು. ಇದೀಗ, ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಕಲುಷಿತ ನೀರು ಕುಡಿದು 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ ಎಂದು ವರದಿಯಾಗಿದೆ.

ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಗ್ರಾಮ ಪಂಚಾಯತಿಯಿಂದ ಪೂರೈಸಲಾಗುವ ನೀರು ಸೇವಿಸಿ, ಅಲ್ಲಿನ ಜನರು ಅಸ್ವಸ್ಥರಾಗಿದ್ದಾರೆ. ಅವರನ್ನು ಅರಕೇರಾ, ದೇವದುರ್ಗ ಹಾಗೂ ರಾಯಚೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಶುದ್ಧ ಕುಡಿಯುವ ನೀರು ಪೂರೈಸುವಲ್ಲಿ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ಧೋರಣೆ ಹೊಂದಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ವೈದ್ಯಕೀಯ ಸಿಬ್ಬಂದಿಗಳ ತಂಡ ಬೀಡುಬಿಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...