ರಾಯಚೂರು | ಏಳು ಗಂಟೆ ವಿದ್ಯುತ್‌ ಪೂರೈಕೆಗೆ ಆಗ್ರಹಿಸಿ ವಿಷ ಸೇವಿಸಿದ ರೈತ

Date:

ಕೃಷಿ ಪಂಪ್‌ಸೆಟ್‌ಗಳಿಗೆ ಏಳು ಗಂಟೆಗಳ ಕಾಲ ನಿರಂತರ ವಿದ್ಯುತ್ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ, ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ರೈತರೊಬ್ಬರು ಕೀಟನಾಶಕ ಕುಡಿದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯುತ್ ಕೊಡಿ, ಇಲ್ಲ ವಿಷ ಕೊಡಿ ಎಂದು ಬಾಪುರು ತಿಮ್ಮಪ್ಪ ಎಂಬ ರೈತ ತನ್ನ ಕೈಯಲ್ಲಿದ್ದ ಕ್ರಿಮಿನಾಶಕ ಕುಡಿದಿದ್ದಾರೆ. ಅವರನ್ನು ಕೂಡಲೇ ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ರಾಯಚೂರಿನ ಜೆಸ್ಕಾಂ ಕಚೇರಿ ಮುಖ್ಯ ದ್ವಾರದ ಗೇಟ್‌ ಬಂದ್ ಮಾಡಿ, ಭತ್ತ ಕೈಯಲ್ಲಿ ಹಿಡಿದುಕೊಂಡು ರೈತರು ಪ್ರತಿಭಟನೆ ನಡೆಸಿದ್ದಾರೆ. ರೈತರ ಹೋರಾಟಕ್ಕೆ ಶಾಸಕ ಶಿವರಾಜ ಪಾಟೀಲ್ ಬೆಂಬಲ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳೆಗಳಿಗೆ ನೀರು ಹರಿಸಲು ಸಮರ್ಪಕವಾಗಿ ವಿದ್ಯುತ್ ಇಲ್ಲದೆ, ಬೆಳೆ ಒಣಗುತ್ತಿವೆ, ಸಮಯಕ್ಕೆ ವಿದ್ಯುತ್ ಸಿಗದೆ, ನೀರು ಹರಿಸಲಾಗದೇ ಬೆಳೆಗಳು ಹಾಳಾಗಿವೆ. ಒಂದು ಕಡೆ ಕಾಲುವೆಗೆ  ನೀರು ಹರಿಸಿದರೂ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ. ಮತ್ತೊಂದೆಡೆ, ಬೋರ್ ವೆಲ್ ಮೂಲಕ ನೀರು ಹರಿಸಿಕೊಳ್ಳಲು ನೀರು ಇದ್ದರೂ, ಸಮರ್ಪಕವಾಗಿ ವಿದ್ಯುತ್ ನೀಡುತ್ತಿಲ್ಲ, ಎಂದು ಅಧಿಕಾರಿಗಳ ವಿರುದ್ಧ ರೈತರು ಕಿಡಿ ಕಾರಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಬಂದ ಜೆಸ್ಕಾಂ ಇಇ ಚಂದ್ರಶೇಖರ ದೇಸಾಯಿ, “ಮೂರು ಗಂಟೆ ನಿರಂತರವಾಗಿ ವಿದ್ಯುತ್ ಕೊಡಲಾಗುತ್ತಿದೆ. ಐದರಿಂದ ಏಳು ಗಂಟೆ ಕಾಲ ವಿದ್ಯುತ್ ಪೂರೈಕೆ ಸಾಧ್ಯವಿಲ್ಲ” ಎಂದಿದ್ದಾರೆ.

ಇದರಿಂದ ಆಕ್ರೊಶಗೊಂಡ ರೈತರು ರಸ್ತೆ ತಡೆ ಪ್ರತಿಭಟನೆ ನಡೆಸಿದ್ದಾರೆ. ಕೆಲವು ರೈತರು ರಸ್ತೆಯಲ್ಲಿ ಉರುಳು ಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ರವೀಂದ್ರ ಜಲ್ದಾರ, ಲಕ್ಷ್ಮಣಗೌಡ ಕಡಗಂದೊಡ್ಡಿ, ನರಸಪ್ಪ ಯಾದವ, ಹುಲಿಗೆಪ್ಪ ಜಾಲಿಬೆಂಚಿ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ವರದಿ: ಹಫೀಜುಲ್ಲ, ಸಿಟಿಜನ್ ಜರ್ನಲಿಸ್ಟ್‌, ರಾಯಚೂರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...