ರಾಯಚೂರು | ಅಕ್ರಮ ಮರಳು ಸಾಗಣೆ ತಡೆಯಲು ಹೋದ ಪೇದೆ ಮೇಲೆ ಹಲ್ಲೆ: ಶಾಸಕಿಯ ಪುತ್ರನ ವಿರುದ್ಧ ಪ್ರಕರಣ; ಪ್ರತಿಭಟನೆ

Date:

ಅಕ್ರಮ ಮರಳು ದಂಧೆಯನ್ನು ತಡೆಯಲು ಹೋದ ಪೊಲೀಸ್ ಪೇದೆ ಮೇಲೆಯೇ ದಂಧೆಕೋರರು ಭೀಕರ ಹಲ್ಲೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನಲ್ಲಿ ನಡೆದಿದೆ.

ಕೆಲವು ದಿನದಿಂದ ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿರುವುದು ಪೊಲೀಸ್‌ ಗಮನಕ್ಕೆ ಬಂದಿತ್ತು. ಅಕ್ರಮಕ್ಕೆ ಕಡಿವಾಣ ಹಾಕಲು ಮುಂದಾದ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಲಾಗಿದೆ.

ದೇವದುರ್ಗ ಶಾಸಕಿ ಕರೆಮ್ಮ ಜಿ. ನಾಯಕ ಪುತ್ರ ಸಂತೋಷ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಲ್ಲೆಗೊಳಗಾದ ಪೊಲೀಸ್‌ ಪೇದೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಪೆದೆ
ಹಲ್ಲೆಗೊಳಗಾದ ಪೇದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಕೆಲವು ದಿನ ಹಿಂದೆ ರಾತ್ರಿ ವೇಳೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವಾಹನಗಳನ್ನು ತಡೆದು, ಶಾಸಕಿ ಕರೆಮ್ಮ ಜಿ. ನಾಯಕ್ ಅವರು, ಪೊಲೀಸರಿಗೆ ಇಲ್ಲಿ ಯಾವುದೇ ಆಕ್ರಮ ಮರಳು ಸಾಗಣೆ ನಡೆಯಬಾರದು ಎಂದು ಖಡಕ್ ಎಚ್ಚರಿಕೆ ನೀಡಿದ್ದರು. ಆದರೆ, ಇಂದು ಪೊಲೀಸ್ ಪೇದೆ ಆಕ್ರಮ ಮರಳು ಸಾಗಿಸುತ್ತಿದ್ದ ವಾಹನಗಳನ್ನು ತಡೆದು ವಿಚಾರಿಸಿದಾಗ, ಶಾಸಕಿಯವರ ಪುತ್ರ ಹಾಗೂ ಹಿಂಬಾಲಕರು ಸೇರಿ ಪೇದೆ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಎಂಟು ಮಂದಿಯ ವಿರುದ್ಧ ಪ್ರಕರಣ ದಾಖಲು: ಶಾಸಕಿಯಿಂದ ಪ್ರತಿಭಟನೆ

ಹಲ್ಲೆ ಪ್ರಕರಣ ಸಂಬಂಧ ಆಪ್ತ ಸಹಾಯಕ ಇಲಿಯಾಸ್ ಎಂಬಾತನನ್ನು ಬಂಧಿಸಲಾಗಿದೆ. ಪೇದೆ ಹೇಳಿಕೆಯಂತೆ ಹಲ್ಲೆ ಮಾಡಿದ ಶಾಸಕಿ ಪುತ್ರ ಸೇರಿದಂತೆ 8 ಜನರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.

ಪೊಲೀಸ್ ‌ಪೇದೆ ಮೇಲೆ ಹಲ್ಲೆ ಪ್ರಕರಣದಲ್ಲಿ ಕರೆಮ್ಮ ಜಿ ನಾಯಕ್ ನ ಪುತ್ರ ಎ2 ಆರೋಪಿಯಾಗಿದ್ದು, ಶಾಸಕರ ಸರಕಾರಿ ಆಪ್ತ ಸಹಾಯಕ ಇಲಿಯಾಸ್ ಎ1 ಆರೋಪಿ ಎಂದು ಕೇಸು ದಾಖಲು ಮಾಡಲಾಗಿದೆ. ಶಾಸಕಿ ಪುತ್ರ ಸಂತೋಷ್ ನಾಯಕ್, ಸಹೋದರ ತಿಮ್ಮಾರೆಡ್ಡಿ, ಆಪ್ತ ಕಾರ್ಯದರ್ಶಿ ಇಲಿಯಾಸ್, ತಿಮ್ಮಾರೆಡ್ಡೆ ಸೇರಿದಂತೆ 8 ಜನರ ವಿರುದ್ಧ ಅಟ್ರಾಸಿಟಿ ಕೇಸು ದಾಖಲಾಗಿದೆ.

karemma

ಜಾತಿ ನಿಂದನೆ ಆರೋಪದ ಮೇಲೆ ಕೇಸ್ ದಾಖಲಾಗುತ್ತಿದ್ದಂತೆಯೇ ರೊಚ್ಚಿಗೆದ್ದ ಶಾಸಕಿ ಪೊಲೀಸ್ ಠಾಣೆ ಮುಂದೆ ಮಧ್ಯರಾತ್ರಿ ಪ್ರತಿಭಟನೆ ನಡೆಸಿದ ಪ್ರಸಂಗ ನಡೆದಿದೆ. ಪುತ್ರ, ಸಹೋದರ ಹಾಗೂ ಆಪ್ತ ಕಾರ್ಯದರ್ಶಿ ಪರವಹಿಸಿ ಪ್ರತಿಭಟನೆ ಮಾಡಿದ್ದಾರೆ.

ತನಿಖೆ ಮಾಡದೇ ಹೇಗೆ‌ ಅಟ್ರಾಸಿಟಿ ದಾಖಲಿಸಿದ್ದೀರಿ? ನಾವೂ ಕೂಡ ಅಟ್ರಾಸಿಟಿ ದಾಖಲಿಸುತ್ತೇವೆ ಎಂದು ದೂರು ನೀಡಲು ಮುಂದಾದರು. ಈ ವೇಳೆ ದೂರು ತೆಗೆದುಕೊಳ್ಳಲು ದೇವದುರ್ಗ ಪೊಲೀಸರು ನಿರಾಕರಿಸಿದರು. ಆಗ ಶಾಸಕಿ ನಮಗೆ ನ್ಯಾಯ ಬೇಕು ಎಂದು ಪ್ರತಿಭಟನೆಗೆ ಕೂತಿದ್ದಾರೆ. ಬೆಳಗಿನ ಜಾವ 5 ಗಂಟೆವರೆಗೂ ಶಾಸಕಿ ಪ್ರತಿಭಟನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...