ರಾಯಚೂರು | ಸಮೀಕ್ಷೆಗೆ ಗೈರು: 57 ಸಿಬ್ಬಂದಿಗೆ ನೋಟಿಸ್; 6 ಜನ ಅಂಗನವಾಡಿ ಕಾರ್ಯಕರ್ತೆಯರ ಅಮಾನತು

Date:

ಹಿಂದುಳಿದ ವರ್ಗಗಳ ಸಮೀಕ್ಷೆಗೆ ಗೈರಾದ 57 ಅಧಿಕಾರಿಗಳಿಗೆ ನೋಟಿಸ್ ಹಾಗೂ ಸಮೀಕ್ಷೆ ಪ್ರಗತಿ ಕಾಣದ ಹಿನ್ನೆಲೆಯಲ್ಲಿ 6 ಜನ ಅಂಗನವಾಡಿ ಕಾರ್ಯಕರ್ತೆಯರನ್ನು ಅಮಾನತು ಮಾಡಲಾಗಿದೆ.

ಲಿಂಗಸೂಗುರು ತಾಲೂಕಿನಲ್ಲಿ ಸಮೀಕ್ಷೆಗೆ ಹಾಜರಾಗದೇ ಗೈರಾದ 57 ಸಿಬ್ಬಂದಿಗಳಿಗೆ ತಾಲ್ಲೂಕು ಸಮನ್ವಯ ಸಮಿತಿ ಅಧ್ಯಕ್ಷ, ಉಪ ವಿಭಾಗಾಧಿಕಾರಿ ಬಸವಣೆಪ್ಪ ಕಲಶೆಟ್ಟಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.

ಲಿಂಗಸೂಗುರು ತಾಲೂಕಿನಲ್ಲಿ ಸಮೀಕ್ಷೆಗೆ ನೇಮಕಗೊಂಡ ಸಿಬ್ಬಂದಿಗಳ ಪೈಕಿ 57 ಜನರು ಸಮೀಕ್ಷೆಗೆ ಹಾಜರಾಗದೇ ಗೈರಾಗಿದ್ದಾರೆ. ಹಾಜರಾಗುವಂತೆ ಸೂಚಿಸಿದರೂ ಗೈರಾಗಿದ್ದಾರೆ, ಇದರಿಂದ ಸಮೀಕ್ಷಾ ಕಾರ್ಯ ಕುಂಠಿತವಾಗಿದೆ. 24 ಗಂಟೆಯೊಳಗೆ ಸಮಜಾಯಿಷಿ ನೀಡಿ ಎಂದು ಸೂಚಿಸಿದ್ದಾರೆ.
ದೇವದುರ್ಗ ತಾಲ್ಲೂಕಿನ 6 ಜನ ಅಂಗನವಾಡಿ ಕಾರ್ಯಕರ್ತೆಯರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನವೀನ್ ಕುಮಾರ್ ಯು. ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಸ್ಮಶಾನವಿಲ್ಲದೆ ಮನೆ ಮುಂದೆಯೇ ಅಂತ್ಯಕ್ರಿಯೆ ಮಾಡುತ್ತಿದ್ದ ರಂಗಾಪುರ ಗ್ರಾಮಕ್ಕೆ ಅಧಿಕಾರಿಗಳ ಭೇಟಿ

ಅಂಜಳ-2 ಕೇಂದ್ರದ ಗುಂಡಮ್ಮ, ನಗರಗುಂಡ-2 ರಂಗಮ್ಮ, ಅಶೋಕ-ನೇತಾಜಿ ಓಣಿಯ ಮುತ್ತಮ್ಮ, ಮಟ್ಟೇರ್‌ದೊಡ್ಡಿಯ ಚಾಂದಬಿ, ದೇವದುರ್ಗದ ನೇತಾಜಿ ಓಣಿಯ ವಿಜಯಲಕ್ಷ್ಮಿ ಹಾಗೂ ಬಾಪೂಜಿ ಓಣಿಯ ರೇಣುಕಾ ಅವರನ್ನು ಅಮಾನತುಗೊಳಿಸಿ ‘ನಾಲ್ಕು ದಿನವಾದರೂ ಸಮೀಕ್ಷೆಯಲ್ಲಿ ಪ್ರಗತಿ ಕಾಣಿಸಿಲ್ಲ. ಗಣತಿ ಕಾರ್ಯಕ್ಕೆ ಹೋಗದಂತೆ ಬೇರೆ ಕಾರ್ಯಕರ್ತೆಯರಿಗೂ ಪ್ರಚೋದಿಸಿದ್ದಾರೆ. ಗಣತಿ ಕಾರ್ಯಕ್ಕೂ ಹಾಜರಾಗಿಲ್ಲ’ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...