ರಾಯಚೂರು | ಕುಡಿಯುವ ನೀರಿಗೆ ಪರದಾಟ; ಸಮಸ್ಯೆ ಪರಿಹಾರಕ್ಕೆ ರೈತ ಸಂಘ ಒತ್ತಾಯ

Date:

ರಾಯಚೂರು ತಾಲೂಕಿನ ಮಮದಾಪೂರು ಗ್ರಾಮದ ಜನ ಕುಡಿಯುವ ನೀರಿಗೂ ಪರದಾಡುವಂತಾಗಿದೆ. ಜನರ ಬಳಕೆಗೆ ಹಾಗೂ ದನಕರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿತು.

ಗ್ರಾಮದ ಹೊರವಲಯದಲ್ಲಿ ಎರಡು ಹ್ಯಾಂಡ್ ಬೋರ್‌ವೆಲ್‌ಗಳು ಇದ್ದರೂ ಸುಮಾರು ದಿನಗಳಿಂದ ಕೆಟ್ಟು ನಿಂತಿವೆ. ಇನ್ನು ಕೆಲವೇ ದಿನಗಳಲ್ಲಿ ಬೇಸಿಗೆ ಕಾಲ ಪ್ರಾರಂಭವಾಗುವುದರಿಂದ ಇನ್ನಷ್ಟು ಗಂಭೀರ ಪರಿಸ್ಥಿತಿ ಉಂಟಾಗುವ ಸಂಭವವಿದೆ. ಕೆಟ್ಟು ಹೋದ ಬೋರ್‌ವೆಲ್‌ಗಳನ್ನು ದುರಸ್ತಿ ಮಾಡಿಸಿ ಜನರಿಗೆ ಹಾಗೂ ಜಾನುವಾರುಗಳಿಗೆ ಅನುಕೂಲ ಮಾಡಿಕೊಡಬೇಕು. ಸಾಧ್ಯವಾದಷ್ಟು ಶೀಘ್ರವಾಗಿ ಸಮಸ್ಯೆಗೆ ಪರಿಹಾರ ಒದಗಿಸಬೇಕು. ಬೇಡಿಕೆ ಈಡೇರಿಕೆಗೆ ನಿರ್ಲಕ್ಷ್ಯ ವಹಿಸಿದರೆ ಗ್ರಾಮಸ್ಥರು ಮತ್ತು ದನಕರುಗಳೊಂದಿಗೆ ಕಚೇರಿ ಮುಂದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಯಿತು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಭೂಹೀನರಿಗೆ ಪಟ್ಟಾ ನೀಡಲು ಭೂಮಿ ವಸತಿ ಹಕ್ಕು ವಂಚಿತರ ಸಂಘಟನೆ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಸಂಘದ ಗ್ರಾಮ ಘಟಕದ ಅಧ್ಯಕ್ಷ ಶಿವರಾಜ ಬಡಿಗೇರ್, ಜಿಲ್ಲಾ ಉಪಾಧ್ಯಕ್ಷ ಕೆ ಜಿ ವೀರೇಶ ಸೇರಿದಂತೆ ಅನೇಕರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...