ಬೈಕ್ ಗೆ ಹಿಂಬದಿಯಿಂದ ಟ್ರಾಕ್ಟರ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟಿರುವ ದುರ್ಘಟನೆ ದೇವದುರ್ಗ ತಾಲ್ಲೂಕು ನಗರಗುಂಡ ರಸ್ತೆಯಲ್ಲಿ ನಡೆದಿದೆ.
ಮೃತ ದಂಪತಿಯನ್ನು ಅರಶಿಣಿಗಿಯ ಹಸೀನಾ ಬೇಗಂ (28) ಹಾಗೂ ರಂಜಾನ್ ಸಾಬ್ (31) ಎಂದು ಗುರುತಿಸಲಾಗಿದೆ.
ಕೆಲಸದ ನಿಮಿತ್ಯ ಅರಶಿಣಗಿ ಗ್ರಾಮದಿಂದ ದೇವದುರ್ಗಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದರು. ಹಿಂಬದಿಯಿಂದ ಬಂದ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಗೆ ಗಂಭೀರ ಪೆಟ್ಟಾಗಿದ್ದರಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಪತಿ ತೀವ್ರಗಾಯಗೊಂಡು ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆಂದು ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ವಿಬಿಜಿ- ರಾಮಜಿ ಮಸೂದೆ ವಿರೋಧಿಸಿ ಸಂಸದರ ಕಚೇರಿ ಮುಂದೆ ಕೂಲಿಕಾರರ ಪ್ರತಿಭಟನೆ
ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





