ರಾಯಚೂರು | ಕೆಕೆಆರ್‌ಡಿಬಿ ಅನುದಾನ ಬಳಕೆಗೆ ಕ್ರೀಯಾಯೋಜನೆ: ಸಚಿವ ಶರಣ ಪ್ರಕಾಶ ಪಾಟೀಲ್

Date:

ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಗೆ (ಕೆಕೆಆರ್‌ಡಿಬಿ) ನೀಡಲಾಗುವ ಅನುದಾನವನ್ನು ಅದೇ ವರ್ಷದಲ್ಲಿ ಬಳಕೆ ಮಾಡಲು ಪೂರ್ವಯೋಚಿತವಾಗಿ ಕ್ರಿಯಾಯೋಜನೆ ರೂಪಿಸಲು ನಿರ್ಧರಿಸಲಾಗಿದೆ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದರು.

ರಾಯಚೂರಿನಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಅವರು ಮಾತನಾಡಿದರು. “ಮಾರ್ಚ್‌ನಲ್ಲಿ ರಾಜ್ಯದ ಬಜೆಟ್ ನಡೆಯುತ್ತದೆ. ಆ ಬಳಿಕ, ಕೆಕೆಆರ್‌ಡಿಬಿ ಕ್ರಿಯಾ ಯೋಜನೆ ರೂಪಿಸಿ ಕಾಮಗಾರಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವಷ್ಟರಲ್ಲಿಯೇ ಡಿಸೆಂಬರ್ ಕಳೆದು ಹೋಗುತ್ತದೆ. ಮುಂಚಿತವಾಗಿಯೇ ಕ್ರಿಯಾಯೋಜನೆ ರೂಪಿಸಿಕೊಂಡಿದ್ದರೆ, ಕಾಮಗಾರಿ ಪೂರ್ಣಗೊಳಿಸಲು ಮತ್ತು ಅನುದಾನ ಬಳಕೆಗೂ ಅನುಕೂಲವಾಗಲಿದೆ. ಈ ಕುರಿತು ಈಗಾಗಲೇ ಬೋರ್ಡ್‌ ಸಭೆಯಲ್ಲಿ ಚರ್ಚಿಸಲಾಗಿದೆ” ಎಂದರು.

“ಸಿಡಿಆರ್ ಅಂಕಿ ಆಂಶಗಳ ಆಧಾರದ ಮೇಲೆ ಕೆಕೆಆರ್‌ಡಿಬಿ ಅನುದಾನವನ್ನು ಜಿಲ್ಲಾವಾರು ಹಂಚಿಕೆ ಮಾಡಲಾಗುತ್ತದೆ. ಎಲ್ಲ ಜಿಲ್ಲೆಗಳಿಗೂ ಸಮಾನವಾಗಿ ಹಂಚಿಕೆ ಮಾಡಲು ಈ ಹಿಂದೆಯೇ ನಿರ್ಧರಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಯಚೂರು ನಗರದಲ್ಲಿ 2,000 ಆಸನಉಳ್ಳ ಹೊಸ ರಂಗಮಂದಿರ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಅದಕ್ಕಾಗಿ, ಜಿಲ್ಲಾಡಳಿತ ನಿವೇಶನ ಗುರುತಿಸಲಿದೆ. ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆ ನಡೆದಿದೆ. ಶೀಘ್ರದಲ್ಲಿ ಚಾಲನೆ ನೀಡಲಾಗುತ್ತದೆ. ಮಹಾತ್ಮಗಾಂಧಿ ಕ್ರಿಡಾಂಗಣದಲ್ಲಿ ಸೆಂಥಿಟಿಕ್ ಟ್ರಾಕ್ ನಿರ್ಮಾಣ ಮಾಡುವುದನ್ನು ಕೈ ಬಿಡಲಾಗಿದೆ. ಮತ್ತೊಂದು ಕ್ರೀಡಾಂಗಣ ನಿರ್ಮಾಣಕ್ಕೆ ಚಿಂತನೆ ನಡೆಸಲಾಗುತ್ತಿದೆ” ಎಂದರು.

ವರದಿ ಮಾಹಿತಿ: ಸಿಟಿಜನ್‌ ಜರ್ನಲಿಸ್ಡ್‌, ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...