ರಾಯಚೂರು | ನಿವೇಶನ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯ

Date:

ನಿವೇಶನ ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಯಚೂರಿನ ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದೆ.

ನಿವೇಶನಕ್ಕಾಗಿ ನೂರಾರು ಮಹಿಳೆಯರು, ಬಡಕೂಲಿ ಕಾರ್ಮಿಕರು, ಅಲೆಮಾರಿಗಳು ಹತ್ತು ದಿನಗಳ ಹೋರಾಟ ನಡೆಸಿದ್ದರು. ಆದರೆ, ಜಿಲ್ಲಾಧಿಕಾರಿಗಳಿಂದ ಬಡ ನಿವೇಶನ ರಹಿತರ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ದೊರೆತಿಲ್ಲ ಎಂದು ಸಂಘಟನೆ ಆರೋಪಿಸಿದೆ.

ಕೂಡಲೆ ಜಿಲ್ಲಾಧಿಕಾರಿಗಳು ನಿವೇಶನಕ್ಕಾಗಿ ಮಂಜೂರಾಗಿರುವ ಸರ್ವೇ 30. 581, 929/2. 726/727 BeF ನಂಬರಿಗೆ ಜಮೀನಿಗೆ ಚೆಕ್‌ಬಂಧಿ ಸಿದ್ಧ ಪಡಿಸಬೇಕು. ನಿವಾಸ ಹಕ್ಕು ಪಡೆದವರಿಗೆ ವಾರದೊಳಗೆ ನಿವೇಶನ ಹಂಚಿಕೆ ಮಾಡಬೇಕು. ನಗರಸಭೆಯಿಂದ ಹಕ್ಕು ಪತ್ರ ನೋಂದಣಿ ಸೇರಿದಂತೆ ಖಾತೆಗಾಗಿ ಫಾರ್ಮ್-3 ವಿತರಿಸಬೇಕು. ಕೊಳಗೇರಿ ಅಭಿವೃದ್ಧಿ ಮಂಡಳಿ ಪಿಎಂಎವೈ ಯೋಜನೆಯಡಿ ಮಂಜೂರಾದ ಮನೆಗಳನ್ನು ಶೀಘ್ರ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ವಾರದೊಳಗೆ ನಗರದ ಅಘೋಷಿತ ಸ್ಲಂಗಳನ್ನು ಸ್ಲಂ ಎಂದು 3ಪಿ ಅಡಿಯಲ್ಲಿ ಘೋಷಣೆ ಮಾಡಬೇಕು. ಸೌಲಭ್ಯ ವಂಚಿತರಾಗಿರುವ ಎಂಎಂ ಕಾಲೋನಿ,  ಕುಲಸುಂಭಿ ಕಾಲೋನಿ, ಆಶ್ರಯ ಕಾಲೋನಿಗಳಿಗೆ ಸೂಕ್ತ ಸೌಲಭ್ಯ ಒದಗಿಸಬೇಕು. ಹಕ್ಕುಪತ್ರ ವಿತರಿಸಬೇಕು. ಸರ್ಕಾರಿ ಸೌಲಭ್ಯ ಪಡೆಯಲು ಅಗತ್ಯವಿರುವ ದಾಖಲೆಗಳನ್ನು ವಿತರಿಸಬೇಕು. ಈ ಸೌಲಭ್ಯಕ್ಕಾಗಿ ಪ್ರತ್ಯೇಕ ಕೌಂಟರ್ ತೆರೆಯಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಸ್ಲಂ ನಿವಾಸಿಗಳ ಸಮಿತಿ ಅಧ್ಯಕ್ಷ ಜನಾರ್ಧನ ಹಳ್ಳಿ ಬೆಂಚಿ, ಮಹೇಶ್, ಬಸವರಾಜು ಹೊಸೂರು, ನೂರ್‌ಜಾನ್, ವೆಂಕಟೇಶ್ ಭಂಡಾರಿ, ನಾಗರಾಜ್‌, ರಾಜಶೇಖರ್, ಮಾಧವ ರೆಡ್ಡಿ.ಜಿ, ರಾಜು, ಸಿ.ಆರ್. ಜಂಭಣ್ಣ, ಹುಲಿಗೇಮ್ಮ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...