ರಾಯಚೂರು | ಕಾರ್ಮಿಕರನ್ನು ವಜಾಗೊಳಿಸಿದ ಗುತ್ತಿಗೆದಾರ ಕಂಪನಿ ವಿರುದ್ಧ ಕ್ರಮಕ್ಕೆ ಆಗ್ರಹ

Date:

ರಾಯಚೂರು ನಗರಸಭೆಯ ಎಲೆಕ್ಟ್ರಿಕಲ್ ವಿಭಾಗದ ಕಾರ್ಯವನ್ನು ಸ್ಥಗಿತಗೊಳಿಸಿ ಕಾರ್ಮಿಕರನ್ನು ಕೆಲಸದಿಂದ ವಜಾ ಮಾಡಿದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಿನಗೂಲಿ ಮತ್ತು ಗುತ್ತಿಗೆ ಪೌರಸೇವಾ ನೌಕರರ ಸಂಘ ಪ್ರತಿಭಟನೆ ನಡೆಸಿದೆ.

ಗುತ್ತಿಗೆದಾರರ ನಡೆಯನ್ನು ಖಂಡಿಸಿ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಸಂಘಟನೆಗಳ ಕಾರ್ಯಕರ್ತರು ಮತ್ತು ಕೆಲಸದಿಂದ ವಜಾಗೊಂಡ ನೌಕರರು ಪ್ರತಿಭಟನೆ ನಡೆಸಿದ್ದಾರೆ. “ನಗರಸಭೆ ವ್ಯಾಪ್ತಿಯಲ್ಲಿರುವ ವಿದ್ಯುತ್ ಕಂಬಗಳ ಸಂಖ್ಯೆಗೆ ಅನುಗುಣವಾಗಿ ಕಾರ್ಮಿಕರ ಸಂಖ್ಯೆಯನ್ನು ಹೆಚ್ಚಿಸಬೇಕು. ಜುಲೈ12 ರಿಂದ ನಗರಸಭೆ ಎಲೆಕ್ಟ್ರಿಕಲ್ ವಿಭಾಗದ ಕೆಲಸವನ್ನು ದುರುದ್ದೇಶದಿಂದ ಸ್ಥಗಿತಗೊಳಿಸಲಾಗಿದೆ. ನೌಕರರನ್ನು ಕೆಲಸದಿಂದ ವಜಾಗೊಳಿಸಿದ ಹೆಚ್‌ಕೆಎಲ್ ಎಲೆಕ್ಟಿಕಲ್ಸ್ ಗುತ್ತಿಗೆದಾರ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ಎಲೆಕ್ಟಿಕಲ್ ವಿಭಾಗದ ಕಾರ್ಮಿಕರಿಗೆ ಏಪ್ರಿಲ್‌ ತಿಂಗಳಿನಿಂದ ಜಾರಿಗೆ ಬರುವಂತೆ ಕನಿಷ್ಠ ವೇತನ ನಿಗದಿ ಮಾಡಬೇಕು. ಮೇ, ಜೂನ್ ತಿಂಗಳಿನ ವೇತನ ಪಾವತಿ ಬಾಕಿ ಉಳಿದಿದ್ದು, ಕೂಡಲೇ ಪಾವತಿಸಬೇಕು. ಕಾರ್ಮಿಕರಿಗೆ ಪಿಎಫ್ ಮತ್ತು ಇಎಸ್‌ಐ ಸೌಲಭ್ಯಗಳನ್ನು ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾರ್ಮಿಕರಿಗೆ ಸಮವಸ್ತ್ರ, ಲೆದರ್ ಕೋಟ್, ಲೆದರ್ ಗ್ಲೋಸ್, ಬೂಟ್ ಮತ್ತು ಸುರಕ್ಷಿತ ಸಲಕರಣೆಗಳನ್ನು ಒದಗಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡ ಎಸ್ ಮಾರೆಪ್ಪ, ಕಾರ್ಯಾಧ್ಯಕ್ಷ ಬಿ.ಎ ಕೇಶವಮೂರ್ತಿ ಸೇರಿದಂತೆ ಹಲವು ಕಾರ್ಮಿಕರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...