ರಾಯಚೂರು | ಅರ್ಹ ಫಲಾನುಭವಿಗಳಿಗೆ ಹಣದ ಬದಲಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ವಿತರಣೆ: ಜಿಲ್ಲಾಧಿಕಾರಿ ನಿತೀಶ್ ಕೆ

Date:

ರಾಯಚೂರು ಜಿಲ್ಲೆಯಲ್ಲಿರುವ ಅಂತ್ಯೋದಯ(ಎಎವೈ) ಮತ್ತು ಪಿಎಚ್‌ಎಚ್‌(ಬಿಪಿಎಲ್) ಪಡಿತರ ಚೀಟಿಗಳ ಅರ್ಹ ಫಲಾನುಭವಿಗಳಿಗೆ ಫೆಬ್ರವರಿ 2025ರ ಮಾಹೆಯಿಂದ ಜಾರಿಗೆ ಬರುವಂತೆ ಹಣದ ಬದಲಿಗೆ ಹೆಚ್ಚುವರಿಯಾಗಿ 05 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ ತಿಳಿಸಿದ್ದಾರೆ.

“ಆಹಾರ ಭದ್ರತೆ ಕಾಯ್ದೆಯಡಿ ಅನ್ನಭಾಗ್ಯ ಯೋಜನೆಯಡಿಯಲ್ಲಿ ಪ್ರತಿ ಅಂತ್ಯೋದಯ ಪಡಿತರ ಚೀಟಿಗೆ 35 ಕೆಜಿ ಸಾರವರ್ಧಿತ ಅಕ್ಕಿ ಹಾಗೂ ಪಿಎಚ್‌ಎಚ್‌(ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗೆ 05 ಕೆಜಿ ಸಾರವರ್ಧಿತ ಅಕ್ಕಿಯ ಜತೆಗೆ ಹೆಚ್ಚುವರಿಯಾಗಿ 05 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು. ಸರ್ಕಾರದ ಮಾರ್ಗಸೂಚಿಯಂತೆ ಏಕಸದಸ್ಯ, ದ್ವಿಸದಸ್ಯ ಮತ್ತು ತ್ರಿಸದಸ್ಯ ಎಎವೈ ಪಡಿತರ ಚೀಟಿಗಳನ್ನು ಹೊರತುಪಡಿಸಿ ನಾಲ್ಕು ಮತ್ತು ನಾಲ್ಕಕಿಂತ ಹೆಚ್ಚಿನ ಸದಸ್ಯರುಳ್ಳ ಅಂತ್ಯೋದಯ(ಎಎವೈ) ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ಮತ್ತು ಪಿಎಚ್‌ಹೆಚ್(ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗೆ 05 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವುದು. ಫೆಬ್ರವರಿ 2025ರ ಪಡಿತರ ವಿತರಣಾ ಪ್ರಕ್ರಿಯೆ ಮುಕ್ತಾಯವಾಗಿರುವುದರಿಂದ ಮಾರ್ಚ್ 2025ತಿಂಗಳ ತಲಾ 05 ಕೆಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ಪ್ರತಿ ಸದಸ್ಯರಿಗೆ ವಿತರಿಸಲಾಗುತ್ತದೆ” ಎಂದು ತಿಳಿಸಿದರು.

“ಮಾರ್ಚ್ ಮಾಹೆಯಲ್ಲಿ ಅನ್ನಭಾಗ್ಯ ಯೋಜನೆಯಡಿ 01ರಿಂದ 03ಸದಸ್ಯರಿರುವ ಅಂತ್ಯೋದಯ (ಎಎವೈ) ಪಡಿತರದಾರರಿಗೆ 35ಕೆಜಿ ಅಕ್ಕಿ, 4 ಸದಸ್ಯರ ಕಾರ್ಡಿಗೆ 45ಕೆಜಿ, 05 ಸದಸ್ಯರಿರುವ ಕಾರ್ಡಿಗೆ 65 ಕೆಜಿ ಅಕ್ಕಿ, 06 ಸದಸ್ಯರಿರುವ ಕಾರ್ಡಿಗೆ 85 ಕೆಜಿ ಅಕ್ಕಿ, 07 ಸದಸ್ಯರಿರುವ ಕಾರ್ಡಿಗೆ 105 ಕೆಜಿ ಅಕ್ಕಿ, 08 ಸದಸ್ಯರಿರುವ ಕಾರ್ಡಿಗೆ 125 ಕೆಜಿ ಅಕ್ಕಿ, 09 ಸದಸ್ಯರಿರುವ ಕಾರ್ಡಿಗೆ 145 ಕೆಜಿ ಅಕ್ಕಿ, 10 ಸದಸ್ಯರಿರುವ ಕಾರ್ಡಿಗೆ 165 ಕೆಜಿ ಅಕ್ಕಿ, 11 ಸದಸ್ಯರಿರುವ ಕಾರ್ಡಿಗೆ 185 ಕೆಜಿ ಅಕ್ಕಿ, 12 ಸದಸ್ಯರಿರುವ ಕಾರ್ಡಿಗೆ 205 ಕೆಜಿ ಅಕ್ಕಿ, 13 ಸದಸ್ಯರಿರುವ ಕಾರ್ಡಿಗೆ 225 ಕೆಜಿ ಅಕ್ಕಿ, 14 ಸದಸ್ಯರಿರುವ ಕಾರ್ಡಿಗೆ 245 ಕೆಜಿ ಅಕ್ಕಿ ಮತ್ತು 15 ಸದಸ್ಯರಿರುವ ಕಾರ್ಡಿಗೆ 265 ಕೆಜಿ ಅಕ್ಕಿಯನ್ನು ವಿತರಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅದೇ ರೀತಿಯಾಗಿ ಬಿಪಿಎಲ್ ಪಡಿತರ ಚೀಟಿಯಲ್ಲಿನ ಪ್ರತಿಯೊಬ್ಬ ಸದಸ್ಯರಿಗೆ 15 ಕೆಜಿ ಅಕ್ಕಿಯನ್ನು ಉಚಿತವಾಗಿ ಕೊಡಲಾಗುತ್ತಿದ್ದು, ಅರ್ಹ ಪಡಿತರ ಚೀಟಿದಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಒಂದು ರಾಷ್ಟ್ರ, ಒಂದು ಪಡಿತರ ಚೀಟಿ(ಅಂತರ್ ರಾಜ್ಯ/ಅಂತರ್ ಜಿಲ್ಲೆ) ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ರಾಜ್ಯದ ಪಡಿತರ ಚೀಟಿದಾರರು ಯಾವುದೇ ವರ್ಗದ ಪಡಿತರ ಚೀಟಿದಾರರು ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ನ್ಯಾಯಬೆಲೆ ಅಂಗಡಿಕಾರರು ಕಡಿಮೆ ಪ್ರಮಾಣದ ಪಡಿತರವನ್ನು ವಿತರಣೆ ಮಾಡಿದ್ದಲ್ಲಿ, ಹಣ ಕೇಳಿದಲ್ಲಿ ಮತ್ತು ಇತರೆ ದೂರುಗಳಿಗೆ ಶುಲ್ಕ ರಹಿತ ದೂರವಾಣಿ ಸಂಖ್ಯೆ 1967ಕ್ಕೆ ಹಾಗೂ ತಾಲೂಕಿನಲ್ಲಿರುವ ತಹಶೀಲ್ದಾರರ ಕಚೇರಿಗೆ ಅಥವಾ ಜಿಲ್ಲೆಯ ಉಪನಿದೇರ್ಶಕರ ಕಚೇರಿಗೆ ದೂರು ಸಲ್ಲಿಸಬಹುದಾಗಿದೆ” ಎಂದು ತಿಳಿಸಿದರು.‌

ಈ ಸುದ್ದಿ ಓದಿದ್ದೀರಾ? ಕಲಬುರಗಿ | ತೊಗರಿ ಬೆಳೆ ಹಾನಿ, ಆರ್ಥಿಕ ಹೊರೆ; ಒಂದೇ ತಿಂಗಳಲ್ಲಿ ಆರು ಮಂದಿ ರೈತರ ಆತ್ಮಹತ್ಯೆ

“ಈ ಯೋಜನೆಯಡಿ ವಿತರಿಸಲಾದ ಆಹಾರ ಧಾನ್ಯಗಳನ್ನು ಹಣಕ್ಕಾಗಿ ಪಡಿತರ ಚೀಟಿದಾರರು ಮಾರಾಟ ಮಾಡುವುದಾಗಲಿ ಅಥವಾ ಸಂಗ್ರಹಣೆ ಮಾಡುವುದು ಕಂಡುಬಂದಲ್ಲಿ ಅಂತಹ ಪಡಿತರ ಚೀಟಿದಾರರಿಗೆ ವಿತರಿಸಲಾದ ಆಹಾರ ಧಾನ್ಯಗಳಿಗೆ ಮುಕ್ತ ಮಾರುಕಟ್ಟೆ ದರಕ್ಕೆ ದಂಡ ವಿಧಿಸಲಾಗುವುದು ಮತ್ತು ಈ ಪಡಿತರ ಚೀಟಿಯನ್ನು ಆರು ತಿಂಗಳ ಅವಧಿಗೆ ಅಮಾನತುಗೊಳಿಸಲಾವುದು” ಎಂದು ಜಿಲ್ಲಾಧಿಕಾರಿ ನಿತೀಶ್ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...