ರಾಯಚೂರು | ಎಸ್‌ಸಿಪಿ, ಟಿಎಸ್‌ಪಿ ಅನುದಾನ ಸಮರ್ಪಕ ಬಳಕೆಗೆ ಸೂಚನೆ

Date:

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಹಲವು ಇಲಾಖೆಗಳಿಗೆ ಬಿಡುಗಡೆಯಾಗಿರುವ ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನವನ್ನು ನಿಗದಿತ ಅವಧಿಯೊಳಗೆ ಬಳಕೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ ಕೆ.ಆರ್ ದುರ್ಗೇಶ್ ಸೂಚಿಸಿದ್ದಾರೆ.

ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ, ಗಿರಿಜನ ಉಪ ಯೋಜನೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

“ಜಿಲ್ಲೆಯಲ್ಲಿ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳ ಕುರಿತು ತಾಲೂಕು ಮಟ್ಟದಲ್ಲಿ ಸಭೆಗಳನ್ನು ನಡೆಸಿ, ಜವಾಬ್ದಾರಿಯಿಂದ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕು. ನೀಡಲಾದ ನಮೂನೆಯಂತೆ ಮಾಹಿತಿ ಮತ್ತು ವರದಿಯನ್ನು ಸಿದ್ಧಪಡಿಸಿ ಅಧಿಕೃತ ಜಾಲತಾಣಕ್ಕೆ ಅಪ್‌ಲೋಡ್ ಮಾಡಬೇಕು. ಅನುದಾನ ಕೈತಪ್ಪದಂತೆ ಎಚ್ಚರಿಕೆ ವಹಿಸಬೇಕು” ಎಂದು ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆ ಕುರಿತು ಆಯಾ ಇಲಾಖೆಯ ವೆಬ್‌ಸೈಟ್‌ಗಳಲ್ಲಿ ಪ್ರಗತಿ ವರದಿ ಸಲ್ಲಿಸಬೇಕು. ಜಿಲ್ಲೆಯಲ್ಲಿ 8 ತಾಲೂಕುಗಲ್ಲಿ ಸಿರವಾರ ಮತ್ತು ಮಸ್ಕಿ ತಾಲೂಕಿನಲ್ಲಿ ಇಲಾಖಾವಾರು ಸಭೆಗಳನ್ನು ನಡೆಸಬೇಕು. ರಾಯಚೂರು ನಗರ, ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಸಭೆಗಳನ್ನು ಮಾಡಲಾಗಿದೆ. ಮಾನ್ವಿಯಲ್ಲಿ 1 ಸಭೆ ಮಾಡಲಾಗಿದೆ. ಉಳಿದ ತಾಲೂಕುಗಳು ಸಭೆ ಮಾಡಿ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳ ಕ್ರಿಯಾ ಯೋಜನೆ ಸಲ್ಲಿಸಿ ಮಾಹಿತಿ ಅಪ್ಲೋಡ್ ಮಾಡಬೇಕು” ಎಂದು ತಿಳಿಸಿದರು.

“ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳ ಕುರಿತು ತಾಲೂಕುವಾರು ಕಡ್ಡಾಯವಾಗಿ ಪ್ರತಿ ತಿಂಗಳು ಸಭೆ ನಡೆಸಿ ಮಾಹಿತಿ ನೀಡಬೇಕು. ಕಳೆದ ವರ್ಷದ ಬಾಕಿ ಅನುದಾನ ಉಳಿಸಿಕೊಳ್ಳದೇ ಬಳಕೆ ಮಾಡಬೇಕು. ಅ ವರದಿ ಅಪ್‌ಲೋಡ್ ಮಾಡಬೇಕು” ಎಂದು ಸೂಚಿಸಿದರು.

“ಜಿಲ್ಲೆಯ 33 ಇಲಾಖೆಗಳಿಗೆ ಈಗಾಗಲೇ ಎಸ್‌ಸಿಪಿ ಯೋಜನೆಯಡಿ ಶೇ.69.43ರಷ್ಟು ಹಾಗೂ ಟಿಎಸ್‌ಪಿ ಯೋಜನೆಯಡಿ ಶೇ. 67.72ರಷ್ಟು ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ಕೆಲವು ಇಲಾಖೆಗಳು ಅನುದಾನ ಬಳಕೆ ಮಾಡಿದ್ದು, ಕೆಲವು ಇಲಾಖೆಗಳು ಅನುದಾನ ಬಳಕೆಯಲ್ಲಿ ಹಿಂದಿವೆ. ಕೂಡಲೇ ನಿಗದಿತ ಅವಧಿಯೊಳಗೆ ಅನುದಾನ ಬಳಕೆಗೆ ಕ್ರಮಕೈಗೊಳ್ಳಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಸೆ.30ರಂದು ಜಿಲ್ಲಾ ಉಸ್ತುವಾರಿ ಸಚಿವರ ಜನತಾ ದರ್ಶನ; ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ, ಪರಿಶಿಷ್ಟ ವರ್ಗಗಳ ಕಲ್ಯಾಣಾಕಾರಿ ರಾಜೇಂದ್ರ ಜಲ್ದಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನಕುಮಾರ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆರ್.ದೇವಿಕಾ, ಡಿಡಿಪಿಐ ಸುರೇಶ ಹುಗ್ಗಿ, ಜಿಲ್ಲಾ ಆಯುಷ್ ಅಕಾರಿ ಡಾ.ಶಂಕರಗೌಡ ಪಾಟೀಲ್, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಈರೇಶ ನಾಯಕ ಉಪಸ್ಥಿತರಿದ್ದರು.

ವರದಿ: ಹಫೀಜುಲ್ಲ, ಸಿಟಿಜನ್ ಜರ್ನಲಿಸ್ಟ್‌, ರಾಯಚೂರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...