ರಾಯಚೂರು | ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಎಐಸಿಸಿಟಿಯು ಪ್ರತಿಭಟನೆ

Date:

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ರಸ್ತೆ ಬದಿಗಳಲ್ಲಿ ಡಬ್ಬಾ ಅಂಗಡಿ, ಶೆಡ್‌ಗಳನ್ನು ತೆರವುಗೊಳಿಸಿದ್ದರಿಂದ ಸಾವಿರಾರು ಸಣ್ಣಪುಟ್ಟ ವ್ಯಾಪಾರಸ್ಥರು ನಿರಾಶ್ರಿತರಾಗಿದ್ದು, ಅವರಿಗೆ ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಜಿಲ್ಲಾ ಘಟಕ ನಿನ್ನೆ ಪ್ರತಿಭಟನೆ ನಡೆಸಿತು.

ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮುಂದೆ 200ಕ್ಕೂ ಅಧಿಕ ಬೀದಿ ಬದಿ ವ್ಯಾಪಾರಸ್ಥರು ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ಉದ್ದೇಶಿಸಿ ಎಐಸಿಸಿಟಿಯು ಜಿಲ್ಲಾಧ್ಯಕ್ಷ ನಾಗರಾಜ ಪೂಜಾರ್ ಮಾತನಾಡಿ, “ಬೀದಿಬದಿ ವ್ಯಾಪಾರ ಮಾಡಿಕೊಂಡು ಕಳೆದ ಹತ್ತಾರು ವರ್ಷಗಳಿಂದ ಜೀವನ ಸಾಗಿಸುತ್ತಿದ್ದೆವು. ಏಕಾಏಕಿ ಕಾರ್ಯಾಚರಣೆ ನಡೆಸಿ ಅಂಗಡಿಗಳನ್ನು ತೆರವುಗೊಳಿಸಿದ್ದರಿಂದ ದೈನಂದಿನ ಜೀವನ ನಡೆಸಲು ಕಷ್ಟಕರವಾಗಿದೆ. ಆದಾಯದಿಂದ ಕುಟುಂಬ ನಿರ್ವಹಣೆ ಮಾಡುತ್ತಿದ್ದ ನಮಗೆ ಬರಸಿಡಿಲು ಬಡಿದಂತಾಗಿದೆ. ತೆರವುಗೊಳಿಸಿದ ದಿನದಿಂದ ಇಲ್ಲಿಯವರೆಗೂ ಕೈಯಲ್ಲಿ ಕೆಲಸವಿಲ್ಲದೇ, ಜೀವನ ನಿರ್ವಹಣೆಗೆ ಆದಾಯವಿಲ್ಲದೇ ಮುಂದೇನು ಎಂಬ ಆತಂಕದಲ್ಲಿ ಜೀವನ ನಡೆಸುತ್ತಿದ್ದೇವೆ” ಎಂದು ಅಳಲು ತೋಡಿಕೊಂಡರು.

ಬೀದಿಬದಿ ವ್ಯಾಪಾರಸ್ಥೆ ರೇಖಾ ಅಡವಿ ಮಾತನಾಡಿ, “ನಗರದ ಸಾವಿರಾರು ಕುಟುಂಬಗಳು ಬೀದಿಗೆ ಬಿದ್ದಿವೆ. ಜಿಲ್ಲಾ, ತಾಲೂಕು ಹಾಗೂ ನಗರಸಭೆ ಆಡಳಿತ ಮುನ್ನೆಚ್ಚರಿಕೆ ವಹಿಸದೇ ಬೇಜವಾಬ್ದಾರಿಯಿಂದ ವರ್ತಿಸಿದ್ದೇ ಇದಕ್ಕೆ ಕಾರಣ. ಕೋರ್ಟ್ ಆದೇಶದ ಪ್ರಕಾರ ಕ್ರಮ ಕೈಗೊಂಡಿರುವುದಾಗಿ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಪ್ರಭಾವಿಗಳ ಕಟ್ಟಡ, ಮಳಿಗೆಗಳನ್ನು ತೆರವುಗೊಳಿಸುವಲ್ಲಿ ಆದೇಶ ಪಾಲಿಸದೇ ಇರುವುದು ಯಾಕೆ? ಹಾಗಾದರೆ ಬೀದಿ ಬದಿ ವ್ಯಾಪಾರಸ್ಥರಿಗೆ ಒಂದು ನ್ಯಾಯ, ಪ್ರಭಾವಿಗಳಿಗೆ ಒಂದು ನ್ಯಾಯವೇ?” ಎಂದು ಪ್ರಶ್ನಿಸಿದರು.

“ಬೀದಿ ಬದಿ ವ್ಯಾಪಾರಸ್ಥರನ್ನು ತೆರವುಗೊಳಿಸುವ ಮುನ್ನ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್ ಕೂಡ ಹಲವು ಮಾರ್ಗದರ್ಶಿಗಳನ್ನು ನೀಡಿದೆ. ಆದರೆ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ಅಧಿಕಾರಿಗಳು ಅವುಗಳನ್ನು ಪಾಲಿಸಿಲ್ಲ. ಇದರಿಂದ ರಸ್ತೆ ಬದಿ ವ್ಯಾಪಾರವನ್ನೇ ಜೀವನ ನಿರ್ವಹಣೆಗೆ ಆಧರಿಸಿದ್ದ ಕುಟುಂಬಗಳು ಬೀದಿಪಾಲಾಗಿವೆ. ಸರ್ಕಾರ ಮತ್ತು ಜಿಲ್ಲಾಡಳಿತ ಬಡವರ ಹೊಟ್ಟೆಯ ಮೇಲೆ ಹೊಡೆಯದೇ ಈ ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮುಂದಾಗಬೇಕು. ಇಲ್ಲದೇ ಹೋದರೆ ಹೋರಾಟ ತೀವ್ರಗೊಳಿಸಬೇಕಾಗುತ್ತದೆ” ಎಂದು ಸಂಘಟನೆಯ ಮುಖಂಡರು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಟೋಲ್ ಗೇಟ್ ನಿರ್ಮಿಸಿ ವಸೂಲಿಗೆ ಮುಂದಾದರೆ ಕಾನೂನು ಹೋರಾಟ: ಶಾಸಕಿ ಕರೆಮ್ಮ ನಾಯಕ್

ಪ್ರತಿಭಟನೆಯಲ್ಲಿ ಅಜೀಜ್ ಜಾಗೀರ್ದಾರ್, ರವಿಚಂದ್ರನ್, ಎಐಸಿಸಿಟಿಯು ಮುಖಂಡ ಖಾಸಿಂ ಸಾಬ್ ಕಾರ್ಪೋರೇಟರ್, ಸಾದಿಕ್ ಹುಸೇನ್, ಲಾಲ್ ಸಾಬ್, ರಸೂಲ್ ಸಾಬ್, ರಹೀಮ್ ಸಾಬ್, ಮೆಹಬೂಬ್, ಸಾದಿಕ್ ಮೈಕೀನಿಕ್, ಯಾಕುಬ್, ಹುಸೇನ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...